ಏಳು ಮಂದಿ ಐಎಎಸ್ ಅಧಿಕಾರಿಗಳಿಗೆ ಬಡ್ತಿ

ಬೆಂಗಳೂರು : ರಾಜ್ಯ ಸರಕಾರವು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರೀಗೌಡ, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ. ಶಿವಶಂಕರ ಎನ್ ಸೇರಿ 7 ಮಂದಿ ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ ಹೊರಡಿಸಿದೆ.
ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತ ಬಸವರಾಜೇಂದ್ರ ಎಚ್, ಕಾರ್ಮಿಕ ಇಲಾಖೆ ಆಯುಕ್ತ ಡಾ. ಎಚ್.ಎನ್. ಗೋಪಾಲ ಕೃಷ್ಣ, ಕೃಷಿ ಇಲಾಖೆಯ ವಸಂತ್ ಕುಮಾರ್ ಪಿ. ಅವರಿಗೆ ಬಡ್ತಿ ನೀಡಲಾಗಿದೆ.
ರಾಜ್ಯ ಸರಕಾರವು ಕೃಷಿ ಮಾರುಕಟ್ಟೆ ಇಲಾಖೆಯ ನಿರ್ದೇಶಕ ಶಿವಾನಂದ ಕಾಪಶಿ, ವಿಜಯನಗರದ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರಿಗೆ ಬಡ್ತಿ ನೀಡಲಾಗಿದೆ.
Next Story





