Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತಂದೆ-ತಾಯಿ, ಹಿರಿಯ ನಾಗರಿಕರನ್ನು ಆರೈಕೆ...

ತಂದೆ-ತಾಯಿ, ಹಿರಿಯ ನಾಗರಿಕರನ್ನು ಆರೈಕೆ ಮಾಡದಿದ್ದರೆ ಅವರ ಆಸ್ತಿಯಲ್ಲಿ ಪಾಲಿಲ್ಲ: ಕೃಷ್ಣ ಬೈರೇಗೌಡ

ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007 ಬಗ್ಗೆ ಸಚಿವರಿಂದ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ12 March 2025 9:09 PM IST
share
ತಂದೆ-ತಾಯಿ, ಹಿರಿಯ ನಾಗರಿಕರನ್ನು ಆರೈಕೆ ಮಾಡದಿದ್ದರೆ ಅವರ ಆಸ್ತಿಯಲ್ಲಿ ಪಾಲಿಲ್ಲ: ಕೃಷ್ಣ ಬೈರೇಗೌಡ

ಬೆಂಗಳೂರು: ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ತನ್ನ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್-ದಾನಪತ್ರವನ್ನು ರದ್ದು ಮಾಡುವ ಅವಕಾಶವನ್ನು ಕೇಂದ್ರ ಸರಕಾರದ ‘ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007’ ನೀಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ.

ಬುಧವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯೆ ಬಿಲ್ಕೀಸ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಇತ್ತೀಚಿನ ದಿನಗಳಲ್ಲಿ ಮಕ್ಕಳು ತಮ್ಮ ತಂದೆ-ತಾಯಿಯನ್ನೇ ಆರೈಕೆ ಮಾಡದಂತಹ ಹಲವರು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಒಂದು ವೇಳೆ ಮಕ್ಕಳು ಅಥವಾ ಸಂಬಂಧಿಕರು ತಮ್ಮನ್ನು ಆರೈಕೆ ಮಾಡದಿದ್ದರೆ ಅವರ ಹೆಸರಿಗೆ ಮಾಡಿರುವ ವಿಲ್ ಅಥವಾ ದಾನಪತ್ರವನ್ನು ರದ್ದು ಮಾಡುವ ಅಧಿಕಾರ ಹಿರಿಯ ನಾಗರಿಕರಿಗೆ ಇದೆ ಎಂದರು.

ಕೇಂದ್ರ ಸರಕಾರ 2007ರಲ್ಲೇ ‘ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ’ ಯನ್ನು ಜಾರಿಗೆ ತಂದಿದೆ. ಆದರೆ, ಈ ಬಗ್ಗೆ ಹಲವರಿಗೆ ಮಾಹಿತಿಯೇ ಇಲ್ಲ. ಈ ಮಾಹಿತಿಯನ್ನು ಪರಿಣಾಮಕಾರಿಯಾಗಿ ಎಲ್ಲರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದಲೇ ಪರಿಷತ್‍ನಲ್ಲಿ ಈ ಕಾಯ್ದೆಯ ಬಗ್ಗೆ ಉಲ್ಲೇಖಿಸುತ್ತಿದ್ದೇನೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಈ ಕಾಯ್ದೆಯ ಪ್ರಕಾರ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರನ್ನು ಆರೈಕೆ ಮಾಡಬೇಕು. ಔಷಧಿ ಸೇರಿದಂತೆ ಅವರ ಮಾಸಿಕ ಖರ್ಚಿಗೆ ಹಣ ನೀಡಬೇಕು. ಒಂದು ವೇಳೆ ಹಣ ನೀಡದಿದ್ದರೆ ಅಥವಾ ಆರೈಕೆ ಮಾಡಲು ನಿರ್ಲಕ್ಷಿಸಿದರೆ ಹಿರಿಯ ನಾಗರಿಕರು ಸೆಕ್ಷನ್ 09ರ ಅಡಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ದೂರು ಸಲ್ಲಿಸಬಹುದು ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಹಿರಿಯ ನಾಗರಿಕರ ದೂರು ಸಾಬೀತಾದರೆ, ತಂದೆ ತಾಯಿಯಿಂದ ಆಸ್ತಿ ಪಡೆದು ಅವರ ಆರೈಕೆ ಮಾಡದಿದ್ದರೆ, ಸೆಕ್ಷನ್ 23ರಂತೆ ಪೋಷಕರು ತಮ್ಮ ಮಕ್ಕಳ ಅಥವಾ ಸಂಬಂಧಿಕರ ಹೆಸರಿನಲ್ಲಿ ಬರೆದಿರುವ ವಿಲ್ ಅಥವಾ ದಾನಪತ್ರವನ್ನು ರದ್ದುಗೊಳಿಸಿ ಮತ್ತೆ ಪೋಷಕರ ಹೆಸರಿಗೇ ಮರುಸ್ಥಾಪಿಸಲು ಕಾನೂನಿನಲ್ಲಿ ಅವಕಾಶ ಇದೆ. ಈ ಜವಾಬ್ದಾರಿಯನ್ನು ಉಪ ವಿಭಾಗಾಧಿಕಾರಿಗಳಿಗೆ ನೀಡಲಾಗಿದೆ. ಈಗಾಗಲೇ ಉಪ ವಿಭಾಗಾಧಿಕಾರಿಗಳ ಮುಂದೆ ಸಾವಿರಾರು ಪ್ರಕರಣಗಳಿವೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ತಿಂಗಳೂ ಉಪ ವಿಭಾಗಾಧಿಕಾರಿಗಳ ಜೊತೆ ಮಾಸಿಕ ಸಭೆ ನಡೆಸಲಾಗುತ್ತಿದೆ. ಅಲ್ಲದೆ, ಜಿಲ್ಲಾಧಿಕಾರಿಗಳಿಗೆ ಅಪೀಲು ಹೋಗಲೂ ಸಹ ಅರ್ಜಿದಾರರಿಗೆ ಅವಕಾಶ ನೀಡಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X