Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬರೀ ಅಂಬಾನಿ - ಅದಾನಿ ಜೇಬಿನಲ್ಲಿ ಹಣ...

ಬರೀ ಅಂಬಾನಿ - ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರ, ಮಧ್ಯಮ ವರ್ಗದವರ ಉದ್ದಾರ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ25 Aug 2023 3:28 PM IST
share
ಬರೀ ಅಂಬಾನಿ - ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರ, ಮಧ್ಯಮ ವರ್ಗದವರ ಉದ್ದಾರ    ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ʼʼಬರೀ ಅಂಬಾನಿ - ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರ, ಮಧ್ಯಮ ವರ್ಗದವರ ಉದ್ಧಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆʼʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಇಂದು ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಬೆಂಗಳೂರಿನ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ʼʼದುಡಿಯುವವರ, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ಅವರು ದೇಶದ ಆರ್ಥಿಕತೆಯ ಬೆಳವಣಿಗೆಗೆ ಕಾರಣರಾಗುತ್ತಾರೆ. ಕೇವಲ ಅಂಬಾನಿ, ಅದಾನಿ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟು ಇಡೀ ದೇಶ ಪರಿತಪಿಸುವಂತಾಗಿದೆ. ಈ ಕಾರಣಕ್ಕೆ ನಾವು ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಜನರ ಜೇಬಿಗೆ ಹಣ ಹಾಕುವ ಕೆಲಸಕ್ಕೆ ಮುಂದಾಗಿದ್ದೇವೆ. ಇದರಿಂದ ನಮ್ಮ ಆರ್ಥಿಕತೆ ಚೈತನ್ಯ ಪಡೆದುಕೊಳ್ಳುತ್ತಿದೆʼʼ ಎಂದು ಅವರು ಹೇಳಿದರು.

ʼʼದೇಶಕ್ಕೆ ಬಂದಿರುವ ರಾಜಕೀಯ ಸ್ವಾತಂತ್ರ್ಯ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ಜಾರಿ ಆಗದಿದ್ದರೆ ಸ್ವಾತಂತ್ರ್ಯಕ್ಕೆ ಅರ್ಥ ಇಲ್ಲ ಎಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದರು.ಸಂವಿಧಾನದ ವಿರೋಧಿಗಳ ಕೈಗೆ ಅಧಿಕಾರ ಕೊಟ್ಟು ಸಮಾನತೆ ಬರಬೇಕು ಎಂದರೆ ಹೇಗೆ ಸಾಧ್ಯ? ಅಂಬಾನಿ - ಅದಾನಿಯವರ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟು ಬಡವರ, ಮಧ್ಯಮ ವರ್ಗದವರ ಉದ್ಧಾರ ಆಗಬೇಕು ಎಂದರೆ ಹೇಗೆ ಸಾಧ್ಯ?ʼʼ ಎಂದು ಪ್ರಶ್ನಿಸಿದರು.

ʼʼಸಿದ್ದಲಿಂಗಯ್ಯ ಅವರ ಆಶಯಗಳನ್ನು ಬದುಕಿನಲ್ಲಿ ಇಟ್ಟುಕೊಂಡವರಿಗೆ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಈ ಬೆದರಿಕೆ ಪತ್ರ ಬರೆಯುವವರನ್ನು ಬೆಂಬಲಿಸುವವರ ಕೈಗೆ ಅಧಿಕಾರ ಕೊಟ್ಟು ಯಾರಿಗೆ ಬಂತು? ಎಲ್ಲಿಗೆ ಬಂತು 47 ರ ಸ್ವಾತಂತ್ರ್ಯ? ಎಂದು ಪ್ರಶ್ನಿಸಿದರೆ ಹೇಗೆ?ʼʼ ಎಂದು ಹೇಳಿದರು.

ಮಾಜಿ ಸಚಿವರಾದ ಎಚ್.ಆಂಜನೇಯ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಹಿರಿಯ ಸಾಹಿತಿಗಳಾದ ಕೆ.ಮರುಳಸಿದ್ದಪ್ಪ, ಎಸ್.ಜಿ ಸಿದ್ದರಾಮಯ್ಯ, ಅಗ್ರಹಾರ ಕೃಷ್ಣಮೂರ್ತಿ ಹಾಗೂ ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಶಿಕ್ಷಣ ತಜ್ಞ ನಿರಂಜನಾರಾಧ್ಯ, ಇಂದಿರಾ ಕೃಷ್ಣಪ್ಪ, ಪ್ರೊ.ಜಾಫೆಟ್ ಸೇರಿ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X