ಸಿದ್ದರಾಮಯ್ಯ ಬಲವಾಗಿದ್ದರೆ ಕಾಂಗ್ರೆಸ್ ಪಕ್ಷವೂ ಬಲವಾಗಿರುತ್ತದೆ: ಕೆ.ಎನ್ ರಾಜಣ್ಣ

ತುಮಕೂರು: “ಸಿದ್ದರಾಮಯ್ಯ ಅವರು ಶಕ್ತಿಶಾಲಿಯಾಗಿದ್ದರೆ ಮಾತ್ರ ಕಾಂಗ್ರೆಸ್ ಪಕ್ಷ ಶಕ್ತಿಶಾಲಿಯಾಗಿರುತ್ತದೆ. ಅವರು ದುರ್ಬಲರಾದರೆ ಪಕ್ಷವೂ ದುರ್ಬಲಗೊಳ್ಳುತ್ತದೆ” ಎಂದು ಮಾಜಿ ಸಚಿವ, ಶಾಸಕ ಕೆ.ಎನ್ ರಾಜಣ್ಣ ಹೇಳಿದ್ದಾರೆ.
ಗುರುವಾರ ಮಧುಗಿರಿಯಲ್ಲಿ ಮಾತನಾಡಿದ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಒಕ್ಕಲಿಗ ಸಮುದಾಯದ ಬೆಂಬಲದ ಕುರಿತು ಪ್ರತಿಕ್ರಿಯಿಸಿದ್ದು, “ಡಿ.ಕೆ. ಶಿವಕುಮಾರ್ ಅವರನ್ನು ನೋಡಿ ಒಕ್ಕಲಿಗ ಸಮುದಾಯದವರೆಲ್ಲರೂ ಕಾಂಗ್ರೆಸ್‌ಗೆ ವೋಟ್ ಹಾಕ್ತಾರಾ?” ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಅವರ ಅಹಿಂಧ ಹಾಗೂ ಬಹುಜನ ನಾಯಕತ್ವವೇ ಮೂಲ ಕಾರಣ ಎಂದು ಪುನರುಚ್ಚರಿಸಿದ್ದಾರೆ.
ಪಕ್ಷದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ಅವರ ಕೈಯನ್ನು ಬಲಪಡಿಸುವುದು ಅತ್ಯಗತ್ಯ. ಸಿದ್ದರಾಮಯ್ಯ ಅವರ ನಾಯಕತ್ವದ ಬಲದ ಮೇಲೆಯೇ ಪಕ್ಷದ ಭವಿಷ್ಯ ನಿಂತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
Next Story




