Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯಗಳ ಶಕ್ತಿ ಕುಂದಿದರೆ ರಾಷ್ಟ್ರದ...

ರಾಜ್ಯಗಳ ಶಕ್ತಿ ಕುಂದಿದರೆ ರಾಷ್ಟ್ರದ ಶಕ್ತಿ ಕುಂದುತ್ತದೆ : ಕೇಂದ್ರದ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ5 Feb 2024 5:08 PM IST
share
ರಾಜ್ಯಗಳ ಶಕ್ತಿ ಕುಂದಿದರೆ ರಾಷ್ಟ್ರದ ಶಕ್ತಿ ಕುಂದುತ್ತದೆ : ಕೇಂದ್ರದ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಅಸಮಾಧಾನ

ಮಡಿಕೇರಿ : ದಕ್ಷಿಣ ಭಾರತದ ರಾಜ್ಯಗಳಿಗೆ ಬಜೆಟ್ ನಲ್ಲಿ ಅಗತ್ಯ ಅನುದಾನ ಮೀಸಲಿಡದೆ ಕೇಂದ್ರ ಸರಕಾರ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ. ರಾಜ್ಯಗಳ ಶಕ್ತಿ ಕುಂದಿದರೆ ರಾಷ್ಟ್ರದ ಶಕ್ತಿ ಕುಂದುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರದ ಶಕ್ತಿ ವೃದ್ಧಿಗೆ ಕೇಂದ್ರ ಸರಕಾರ ರಾಜ್ಯಗಳಿಗೆ ನೆರವು ನೀಡುವ ಅಗತ್ಯವಿದೆ ಎಂದರು.

ಕರ್ನಾಟಕ ಆದಾಯ ಗಳಿಕೆಯಲ್ಲಿ ಮೊದಲ ಸ್ಥಾನದಲ್ಲಿದೆ, ತೆರಿಗೆ ಪಾವತಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೂ ಕೇಂದ್ರ ಸರಕಾರ ನಮ್ಮ ರಾಜ್ಯಕ್ಕೆ ಸೇರಬೇಕಾದ ಆರ್ಥಿಕ ಪಾಲನ್ನು ನೀಡುತ್ತಿಲ್ಲವೆಂದು ಆರೋಪಿಸಿದರು.

2017 ರ ಬಜೆಟ್ ನಲ್ಲಿ 52 ಸಾವಿರ ಕೋಟಿ ರೂ.ಗಳನ್ನು ರಾಜ್ಯಕ್ಕೆ ನೀಡಿದ್ದ ಕೇಂದ್ರ ಸರಕಾರ ಈ ಬಾರಿಯೂ ಅಷ್ಟೇ ಮೊತ್ತವನ್ನು ನೀಡಿದೆ. ಆದರೆ ಬಜೆಟ್ ನ ಗಾತ್ರ ಎರಡು ಪಟ್ಟು ಹೆಚ್ಚಾಗಿದೆ, ಗಾತ್ರ ಹೆಚ್ಚಾದಂತೆ ನಮ್ಮ ಪಾಲಿನ ಹಣವನ್ನೂ ಹೆಚ್ಚಿಗೆ ನೀಡಬೇಕಾಗಿತ್ತು. ಆದರೆ ಕೇಂದ್ರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಕಳೆದ ಸೆಪ್ಟಂಬರ್ ತಿಂಗಳಿನಲ್ಲಿ ಬರ ಪರಿಸ್ಥಿತಿಯ ಹಿನ್ನೆಲೆ ಪರಿಹಾರ ಕೋರಿ ಮನವಿ ಸಲ್ಲಿಸಲಾಗಿತ್ತು. ರೈತರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರಕಾರ ಇಲ್ಲಿಯವರೆಗೆ ಹಣ ನೀಡಿಲ್ಲ. ಮೇಕೆದಾಟು, ಮಹಾದಾಯಿ ಸೇರಿದಂತೆ ಬೃಹತ್ ನೀರಾವರಿ ಯೋಜನೆಗಳಿಗೆ ಕೇಂದ್ರ ಅಗತ್ಯ ಸಹಕಾರವನ್ನು ನೀಡುತ್ತಿಲ್ಲ, ನಮ್ಮ ನದಿ ನೀರನ್ನು ನಾವು ಬಳಸಿಕೊಳ್ಳಲು ಅವಕಾಶ ನೀಡುತ್ತಿಲ್ಲ ಎಂದು ಟೀಕಿಸಿದರು.

ಕೇಂದ್ರ ನಿರಂತರವಾಗಿ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ, ಅನುದಾನದ ವಿಚಾರದಲ್ಲಿ ಕಟ್ಟುಕಥೆ ಹೇಳುತ್ತಿದೆ. ಕೇಂದ್ರದ ಮಲತಾಯಿ ಧೋರಣೆ ಬಗ್ಗೆ ಬಹಿರಂಗ ಚರ್ಚೆಗೆ ನಾವು ಸಿದ್ಧರಿದ್ದೇವೆ, ಅಧಿವೇಶನದಲ್ಲಿ ಎಳೆ ಎಳೆಯಾಗಿ ವಿವರಿಸುತ್ತೇವೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಕೇಂದ್ರ ಸರಕಾರದ ಧೋರಣೆಯನ್ನು ಖಂಡಿಸಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳು ಪ್ರತಿಭಟನೆ ನಡೆಸುತ್ತಿವೆ. ಕರ್ನಾಟಕದಿಂದಲೂ ಫೆ.7 ರಂದು ದೆಹಲಿ ಚಲೋ ಹೋರಾಟ ನಡೆಸಲಾಗುತ್ತಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X