ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರ ಪಟ್ಟಿ ಪ್ರದರ್ಶಿಸದಿದ್ದರೆ ಕ್ರಮ: ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

Photo - Twitter@KarnatakaVarthe
ಬೆಂಗಳೂರು: “ಖಾಸಗಿ ಆಸ್ಪತ್ರೆಗಳು ಚಿಕಿತ್ಸಾ ಶುಲ್ಕದ ವಿವರವನ್ನು ಪ್ರದರ್ಶಿಸದಿದ್ದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು'' ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಸಿದ್ದಾರೆ.
''ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಉತ್ತಮ ವೈದ್ಯಕೀಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಖಾಸಗಿ ಸಂಸ್ಥೆಗಳು ತಮ್ಮ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿ ವಿನಿಯೋಗಿಸಲು ಮುಂದಾಗಬೇಕು'' ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
Next Story







