Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನೀವು ಕಾರ್ಯಕರ್ತರು, ಮತದಾರರ ಮನಗೆಲ್ಲಿ,...

ನೀವು ಕಾರ್ಯಕರ್ತರು, ಮತದಾರರ ಮನಗೆಲ್ಲಿ, ನಾವು ನಾಯಕರುಗಳನ್ನು ನಿಭಾಯಿಸುತ್ತೇವೆ: ಡಿ.ಕೆ.ಶಿವಕುಮಾರ್

ಬಿಜೆಪಿ ಶಾಸಕ ಸೋಮಶೇಖರ್ ಆಪ್ತರು, ಜೆಡಿಎಸ್‌ನ ಕಾರ್ಯಕರ್ತರು ಕಾಂಗ್ರೆಸ್‌ ಗೆ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ21 Aug 2023 11:00 PM IST
share
ನೀವು ಕಾರ್ಯಕರ್ತರು, ಮತದಾರರ ಮನಗೆಲ್ಲಿ, ನಾವು ನಾಯಕರುಗಳನ್ನು ನಿಭಾಯಿಸುತ್ತೇವೆ: ಡಿ.ಕೆ.ಶಿವಕುಮಾರ್

ಬೆಂಗಳೂರು, ಆ.21: ನೀವು ಕಾರ್ಯಕರ್ತರು, ಮತದಾರರ ಮನ ಗೆಲ್ಲುವತ್ತ ಗಮನ ಹರಿಸಿ. ನಾಯಕರ ವಿಚಾರವನ್ನು ನಾವು ನೋಡಿಕೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷರೂ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕರೆ ನೀಡಿದ್ದಾರೆ.

ಸೋಮವಾರ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸೋಮಶೇಖರ್ ಆಪ್ತರು ಮತ್ತು ಜೆಡಿಎಸ್‌ ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಕೆಶಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷ ಕರ್ನಾಟಕದ ಜನರ ಬದುಕನ್ನು ರೂಪಿಸುವ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಯೋಜನೆಗಳು ತಲುಪದ ಜನರನ್ನು ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಲು ಭಾರತ್ ಜೋಡೋ ಸಭಾಂಗಣದಲ್ಲಿ ನಾವೆಲ್ಲಾ ಜೊತೆಯಾಗಿದ್ದೇವೆ. ನಾವುಗಳು ಗಟ್ಟಿಯಾಗಿ ಕೋಮುವಾದಿ ಶಕ್ತಿಗಳನ್ನು ಓಡಿಸೋಣ ಎಂದು ಡಿಕೆಶಿ ಅವರು ತಿಳಿಸಿದರು.

ಜನ ನೆನಪು ಮಾಡಿಕೊಳ್ಳುವಂತಹ ಒಂದೇ ಒಂದು ಕಾರ್ಯಕ್ರಮ ಕೊಟ್ಟಿಲ್ಲ ಬಿಜೆಪಿ. ಬರೀ ಬೆಲೆ ಏರಿಕೆ ಭಾಗ್ಯ ಕೊಟ್ಟಿದೆ. ಬಡವರ ಬಗ್ಗೆ ಚಿಂತೆ ಇಲ್ಲ, ಎಲ್ಲ ಪೆಟ್ರೋಲ್ ಬಂಕ್‍ಗಳಲ್ಲಿ ಮೋದಿಯವರು ಗ್ಯಾಸ್ ಕೊಡುತ್ತೇನೆ ಎಂದು ಬಡ ಹೆಣ್ಣು ಮಕ್ಕಳ ಫೋಟೊ ಹಾಕಿದ್ದಷ್ಟೇ ಸಾಧನೆ. ಇದೇ ಕಾರಣಕ್ಕೆ ನಾವು ಜನರಿಂದ ಮಾಡುತ್ತಿರುವ ಲೂಟಿಯನ್ನು ತಡೆಯಲು ಗ್ಯಾರಂಟಿ ಯೋಜನೆಗಳನ್ನು ತಂದಿರುವುದು. ನೀವು ಇದನ್ನು ಮನೆ, ಮನಗಳಿಗೆ ತಲುಪಿಸಿ.

ಇಂದಿರಾ ಕ್ಯಾಂಟೀನ್ ಎಂದು ಹೆಸರಿಡಬೇಕು ಎಂದು ಇದೇ ಎಸ್.ಟಿ.ಸೋಮಶೇಖರ್, ಮುನಿರತ್ನ, ಬೈರತಿ ಬಸವರಾಜು ಅವರು ಹಠ ಮಾಡಿ 40 ಜನ ಎಂಎಲ್‍ಎಗಳ ಸಹಿ ಹಾಕಿಸಿ ಕೊಟ್ಟಿದ್ದರು. ಅವರ ಕ್ಷೇತ್ರಗಳ ಜನರ ಮನೆಯ ಮೇಲೆ ಕಾಂಗ್ರೆಸ್ ಧ್ವಜದ ಚಿತ್ರಗಳನ್ನು ಹಾಕಿಸಿದ್ದರು. ಈಗ ಪೂರ್ತಿ ಕೇಸರಿ ಬಣ್ಣ ಬಳಿದಿದ್ದಾರೆ.

ಯುವ ಸಮಾವೇಶದ ಸಲುವಾಗಿ ದೆಹಲಿಗೆ ಹೋಗಿದ್ದಾಗ ಪ್ರಧಾನಿಗಳಾಗಿದ್ದ ರಾಜೀವ್ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಲು ಕಾಯುತ್ತಿದ್ದೆವು, ಅಲ್ಲಿಗೆ ಹಿರಿಯ ನಾಯಕರೊಬ್ಬರು ಬಂದರು, ಅವರನ್ನು ಸ್ವತಃ ರಾಜೀವ್ ಗಾಂಧಿ ಅವರೇ ಹೋಗಿ ಕರೆದುಕೊಂಡು ಬಂದರು. ನಾವೆಲ್ಲ ಯಾರು ಎಂದು ಕುತೂಹಲದಿಂದ ಕೇಳಿದೆವು. ಅವರು ಬಾಬು ಜಗಜೀವನ್ ರಾಮ್. ನೆಹರು, ಇಂದಿರಾ ಗಾಂಧಿ ಅವರ ಜೊತೆ ಕೆಲಸ ಮಾಡಿದವರು. ಅನಿವಾರ್ಯ ಕಾರಣಗಳಿಂದ ಪಕ್ಷ ಬಿಟ್ಟು ಹೋಗಿದ್ದರು, ಈಗ ಪಕ್ಷಕ್ಕೆ ಮತ್ತೆ ಸೇರಬೇಕಂತೆ, ಕಾಂಗ್ರೆಸ್ಸಿಗನಾಗಿ ನಾನು ಪ್ರಾಣ ಬಿಡುವ ನನ್ನ ಆಸೆ ಎಂದು ಹೇಳಿದರಂತೆ ಈ ಘಟನೆ ಕೇಳಿದ ನಮಗೆ ಪಕ್ಷದಲ್ಲಿ ಇರುವ ನಾವೆಲ್ಲಾ ಪುಣ್ಯವಂತರು ಎಂದು ಅನಿಸಿತು ಎಂದು ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X