ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ : ಕೆ.ಎಸ್.ಈಶ್ವರಪ್ಪಗೆ ತಾತ್ಕಾಲಿಕ ರಿಲೀಫ್

ಬೆಂಗಳೂರು : ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಪ್ರಕರಣ ರದ್ದು ಕೋರಿ ಕೆ.ಎಸ್.ಈಶ್ವರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಮುಂದಿನ ವಿಚಾರಣೆವರೆಗೆ ತಡೆಯಾಜ್ಞೆ ನೀಡಿದೆ.
ಇದಕ್ಕೂ ಮುನ್ನ ಅರ್ಜಿದಾರ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ, ಪ್ರಾಥಮಿಕ ತನಿಖೆ ನಡೆಸದೇ ಎಫ್ಐಆರ್ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಬಂಧನದ ಭೀತಿ ಇದೆ ಎಂದು ವಾದ ಮಂಡಿಸಿದರು.
ವಾದ ಆಲಿಸಿದ ಹೈಕೋರ್ಟ್, ಲೋಕಾಯುಕ್ತ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿ, ಮುಂದಿನ ವಿಚಾರಣೆವರೆಗೆ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಿ ಆದೇಶಿದೆ.
Next Story





