Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿಸಿಎಂ...

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿಸಿಎಂ ಡಿಕೆಶಿ ವಿರುದ್ಧ ಎಫ್​ಐಆರ್​ ದಾಖಲಿಸಿದ ಲೋಕಾಯುಕ್ತ

ವಾರ್ತಾಭಾರತಿವಾರ್ತಾಭಾರತಿ13 Feb 2024 3:30 PM IST
share
ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿಸಿಎಂ ಡಿಕೆಶಿ ವಿರುದ್ಧ ಎಫ್​ಐಆರ್​ ದಾಖಲಿಸಿದ  ಲೋಕಾಯುಕ್ತ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.

2020ರ ಅಕ್ಟೋಬರ್ 3ರಂದು ಸಿಬಿಐ ದಾಖಲಿಸಿಕೊಂಡಿದ್ದ ಪ್ರಕರಣದ ಮರು ತನಿಖೆಗೆ ಲೋಕಾಯುಕ್ತ ಮುಂದಾಗಿದ್ದು, ಲೋಕಾಯುಕ್ತ ಅಧಿಕಾರಿಗಳು ಈ ಪ್ರಕರಣದ ಇದುವರೆಗಿನ ತನಿಖಾ ದಾಖಲೆಗಳನ್ನು ಒದಗಿಸುವಂತೆ ಸಿಬಿಐಗೆ ಪತ್ರ ಬರೆದಿದ್ದಾರೆ. ಆದರೆ, ಸಿಬಿಐ ಅಧಿಕಾರಿಗಳು ಇದುವರೆಗೂ ಯಾವುದೇ ದಾಖಲೆಗಳನ್ನು ಲೋಕಾಯುಕ್ತಕ್ಕೆ ನೀಡಿಲ್ಲ ಎಂದು ತಿಳಿದುಬಂದಿದೆ.

ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ಆದೇಶಿಸಿದ್ದ ಈ ಹಿಂದಿನ ಸರಕಾರ ಕಾನೂನು ಕ್ರಮಗಳನ್ನು ಅನುಸರಿಸಿಲ್ಲ ಎಂಬ ಕಾರಣ ನೀಡಿ ರಾಜ್ಯ ಸರಕಾರ ವಾಪಸ್ ತೆಗೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಡಿಸೆಂಬರ್ 22ರಂದು ಲೋಕಾಯುಕ್ತಕ್ಕೆ ವರ್ಗಾಯಿಸಲಾಗಿತ್ತು. ಒಂದು ತಿಂಗಳ ಬಳಿಕ ಸದ್ಯ ಲೋಕಾಯುಕ್ತದಲ್ಲಿ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ.

ಕಾನೂನು ಹೋರಾಟ ಮುಂದುವರಿಸುವೆ:

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಎಫ್‍ಐಆರ್ ದಾಖಲಿಸಿದ್ದು, ನಾನು ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಪ್ರಕರಣವನ್ನು ಸಿಬಿಐಗೆ ನೀಡಲು ಆಗುವುದಿಲ್ಲ ಎಂದು ಅಂದಿನ ಅಡ್ವೊಕೇಟ್ ಜನರಲ್ ಹೇಳಿದ್ದರು. ಅದರ ದಾಖಲೆಯನ್ನು ನಾನು ಮಾಹಿತಿ ಹಕ್ಕು ಮೂಲಕ ಪಡೆದಿದ್ದೇನೆ. ಯಡಿಯೂರಪ್ಪನವರ ಸರಕಾರ ಸಿಬಿಐ ತನಿಖೆಗೆ ನೀಡಿದ್ದು ತಪ್ಪು. ಹೀಗಾಗಿ ನಮ್ಮ ಸರಕಾರ ಅನುಮತಿ ಹಿಂಪಡೆದು ಲೋಕಾಯುಕ್ತಕ್ಕೆ ನೀಡಿದೆ’ ಎಂದು ಸ್ಪಷ್ಟಪಡಿಸಿದರು.

ಹಿಂಪಡೆದರೂ ನೋಟೀಸ್: ಸರಕಾರ ನನ್ನ ವಿರುದ್ಧದ ತನಿಖೆಯ ಅನುಮತಿ ಹಿಂಪಡೆದ ನಂತರವೂ ಸಿಬಿಐನವರು ನನ್ನ ಸಂಸ್ಥೆಗಳು ಹಾಗೂ ನನ್ನ ಜತೆ ವ್ಯವಹಾರ ಮಾಡಿರುವವರಿಗೆ ನೂರಾರು ನೋಟೀಸ್ ನೀಡುತ್ತಿದ್ದಾರೆ. ಯಾಕೆ ನೊಟೀಸ್ ನೀಡುತ್ತಿದ್ದಾರೋ ನನಗೆ ಗೊತ್ತಿಲ್ಲ. ನಾನೂ ಕಾನೂನು ಹೋರಾಟ ಮಾಡುತ್ತೇನೆ’ ಎಂದು ಅವರು ತಿಳಿಸಿದರು.

Tags

DCM DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X