Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಕ್ರಮ ಮರಳು ಗಣಿಗಾರಿಕೆ; ಸ್ವಯಂ ಪ್ರೇರಿತ...

ಅಕ್ರಮ ಮರಳು ಗಣಿಗಾರಿಕೆ; ಸ್ವಯಂ ಪ್ರೇರಿತ ಪಿಐಎಲ್‌ ಕುರಿತು ನಾಲ್ಕು ವಾರದಲ್ಲಿ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ20 Feb 2026 10:17 PM IST
share
ಅಕ್ರಮ ಮರಳು ಗಣಿಗಾರಿಕೆ; ಸ್ವಯಂ ಪ್ರೇರಿತ ಪಿಐಎಲ್‌ ಕುರಿತು ನಾಲ್ಕು ವಾರದಲ್ಲಿ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು : ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣದ ಬಗ್ಗೆ ಅಸಹಾಯಕತೆ ವ್ಯಕ್ತಪಡಿಸಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಿಸಿಕೊಳ್ಳಲಾಗಿರುವ ಸ್ವಯಂಪ್ರೇರಿತ ಪಿಐಎಲ್ ಸಂಬಂಧ ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಅಕ್ರಮ ಮರಳುಗಾರಿಗೆ ಒಂದು ದೊಡ್ಡ ದಂಧೆಯಾಗಿದ್ದು, ಬಲಾಢ್ಯರು ಮತ್ತು ಪ್ರಭಾವಿಗಳು ಇದರಲ್ಲಿ ಇದ್ದಾರೆ ಎಂದು ಅಕ್ರಮ ಮರಳು ಗಣಿಗಾರಿಕೆ ತಡೆಯುವ ವಿಚಾರದಲ್ಲಿ ಅಸಹಾಯಕತೆ ವ್ಯಕ್ತಪಡಿಸಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಧಾನಸಭೆ ಅಧಿವೇಶನದಲ್ಲಿ ನೀಡಿದ್ದ ಹೇಳಿಕೆ ಉಲ್ಲೇಖಿಸಿ ಜನವರಿ 28ರಂದು ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡಿದ್ದವು. ಮಾಧ್ಯಮಗಳ ವರದಿ ಆಧರಿಸಿ ಜನವರಿ 29ರಂದು ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಳ್ಳಲು ನ್ಯಾಯಮೂರ್ತಿ ಡಿ.ಕೆ. ಸಿಂಗ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಆದೇಶಿಸಿತ್ತು. ಅಲ್ಲದೇ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣಾ ವ್ಯಾಪ್ತಿ ಹೊಂದಿರುವ ಮುಖ್ಯ ನ್ಯಾಯಮೂರ್ತಿಗಳ ಮುಂದೆ ಈ ಅರ್ಜಿ ಮಂಡಿಸುವಂತೆ ಹೈಕೋರ್ಟ್ ರಿಜಿಸ್ಟ್ರಿಗೆ ಸೂಚಿಸಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತ್ತು.

ಈ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ನಿಗದಿಯಾಗಿತ್ತು.

ರಾಜ್ಯ ಸರ್ಕಾರದ ಪರ ವಕೀಲರು, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಮತ್ತು ಪ್ರತಿಕ್ರಿಯೆ ಸಲ್ಲಿಸಲು ಕಾಲಾವಕಾಶ ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿಗೆ ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಏಪ್ರಿಲ್ 7ಕ್ಕೆ ಮುಂದೂಡಿತು.

ಗೃಹ ಸಚಿವರು ಏನು ಹೇಳಿದ್ದರು?

ದೇವದುರ್ಗ ಕ್ಷೇತ್ರದ ಶಾಸಕಿ ಅವರಿಗೆ ಬೆದರಿಕೆ ಹಾಕಿದ ವಿಚಾರಕ್ಕೆ ಸದನದಲ್ಲಿ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವರು, ವಿವಿಧ ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಅಕ್ರಮ ಮರಳು ಗಣಿಗಾರಿಕೆ ಒಂದು ದೊಡ್ಡ ದಂಧೆ. ಇದು ಸ್ವಲ್ಪ ಮುಜುಗರದ ಸಂಗತಿಯಾಗಿರುವುದರಿಂದ ನಾನು ಯಾವುದೇ ವಿವರಣೆಯನ್ನು ನೀಡುವುದಿಲ್ಲ ಅಥವಾ ಯಾರ ಹೆಸರನ್ನೂ ಹೇಳುವುದಿಲ್ಲ. ನಾನು ಸೀಮಿತವಾಗಿ ಉತ್ತರವನ್ನು ಮಾತ್ರ ನೀಡಿದ್ದೇನೆ. ಆದರೆ, ಇದು ಅನೇಕ ಪ್ರಭಾವಿ ಜನರನ್ನು ಒಳಗೊಂಡಿದೆ. ಈ ವಿಷಯವನ್ನು ಚರ್ಚಿಸಲು ನಾನು ಸಭೆ ಕರೆಯುತ್ತೇನೆ ಎಂದಿದ್ದರು.

ಗೃಹ ಸಚಿವರೇ ಅಸಹಾಯಕರಾದರೆ ಭರವಸೆ ಉಳಿಯದು:

ಗೃಹ ಸಚಿವರ ಹೇಳಿಕೆ ಕುರಿತು ಮಾಧ್ಯಮಗಳಲ್ಲಿ ಪ್ರಕಟಗೊಂಡಿದ್ದ ವರದಿಗಳನ್ನು ಉಲ್ಲೇಖಿಸಿದ್ದ ಹೈಕೋರ್ಟ್, ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆಯಲ್ಲಿ ಎಲ್ಲ ಪಕ್ಷಗಳ ಪ್ರಭಾವಿಗಳು ಭಾಗಿಯಾಗಿದ್ದಾರೆ ಎಂದು ಗೃಹ ಸಚಿವರು ಸದನದಲ್ಲಿ ಹೇಳಿದ್ದನ್ನು ಮಾಧ್ಯಮಗಳು ವರದಿ ಮಾಡಿವೆ. ಇದಕ್ಕೆ ಕಡಿವಾಣ ಹಾಕುವ ವಿಚಾರದಲ್ಲಿ ಗೃಹ ಸಚಿವರು ಅಸಹಾಯಕತೆ ವ್ಯಕ್ತಪಡಿಸಿದ ಬಗ್ಗೆಯೂ ಮಾಧ್ಯಮಗಳು ವರದಿ ಮಾಡಿವೆ. ಮೈನಿಂಗ್ ಮಾಫಿಯಾಗೆ ಕಡಿವಾಣ ಹಾಕಲು ಈ ರೀತಿ ಒಬ್ಬ ಗೃಹ ಸಚಿವರೇ ಅಸಹಾಯಕತೆ ವ್ಯಕ್ತಪಡಿಸಿದರೆ, ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆಯನ್ನು ರಾಜ್ಯದ ಆಡಳಿತ ಯಂತ್ರದಿಂದ ತಡೆಯಬಹುದು ಎಂಬ ನಿರೀಕ್ಷೆಯಿಲ್ಲ. ಇದೊಂದು ಗಂಭೀರ ವಿಷಯವಾಗಿದ್ದು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಕೇಂದ್ರ ತನಿಖಾ ದಳ ಅಥವಾ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಯಬೇಕಾಗಿದೆ ಎಂದು ನ್ಯಾಯಮೂರ್ತಿ ಡಿ.ಕೆ. ಸಿಂಗ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಜನವರಿ 29ರಂದು ಹೇಳಿತ್ತು.

Tags

Illegal sand miningHigh CourtGovernmentsuo motuPIL
share
ವಾರ್ತಾಭಾರತಿ
ವಾರ್ತಾಭಾರತಿ
Next Story
X