Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಇ-ಸ್ವತ್ತು ಯೋಜನೆಯ ಸಮರ್ಪಕವಾಗಿ...

ಇ-ಸ್ವತ್ತು ಯೋಜನೆಯ ಸಮರ್ಪಕವಾಗಿ ಜಾರಿಗೊಳಿಸಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ4 Nov 2025 9:32 PM IST
share
ಇ-ಸ್ವತ್ತು ಯೋಜನೆಯ ಸಮರ್ಪಕವಾಗಿ ಜಾರಿಗೊಳಿಸಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು : ಗ್ರಾಮೀಣ ಪ್ರದೇಶಗಳ ಸುಮಾರು ಒಂದು ಕೋಟಿ ಆಸ್ತಿಗಳನ್ನು ‘ಇ-ಸ್ವತ್ತು’ ತೆಕ್ಕೆಗೆ ತರುವ ಮೂಲಕ ಮನೆ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ(ಸಿಇಒ) ಗ್ರಾಮೀಣಾಭಿವೃದ್ಧಿ ಮತ್ತ ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.

ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ‘ಇ-ಸ್ವತ್ತು’ ಅನುಷ್ಠಾನ ಮತ್ತು ಇತರ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಈ ಕುರಿತ ನಿಯಮಗಳನ್ನು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮನನ ಮಾಡಿಸಲು ಜಿಲ್ಲಾ ಮಟ್ಟದಲ್ಲಿ ವಿಶೇಷ ತರಬೇತಿ ಆಯೋಜಿಸಬೇಕು ಎಂದು ಸಲಹೆ ನೀಡಿದರು.

ರಾಜ್ಯದ ಲಕ್ಷಾಂತರ ಜನರು ಈ ಯೋಜನೆಯ ಲಾಭ ಪಡೆಯಲು ಕಾಯುತ್ತಿದ್ದಾರೆ. ಸಾರ್ವಜನಿಕರಿಗೆ ಸುಲಲಿತವಾಗಿ ಹಾಗೂ ಪಾರದರ್ಶಕವಾಗಿ ಇ-ಸ್ವತ್ತು ಪ್ರಯೋಜನ ದೊರೆಯುವಂತೆ ಸಿಬ್ಬಂದಿಯನ್ನು ಸಜ್ಜು ಮಾಡಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ನೆರವು ಪಡೆದು ಈ ಆಂದೋಲನವನ್ನು ಯಶಸ್ವಿಗೊಳಿಸಬೇಕು ಎಂದು ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದರು.

ಕೆಲವು ಜಿಲ್ಲೆಗಳಲ್ಲಿ ಆಸ್ತಿ ತೆರಿಗೆ ಸಂಗ್ರಹ ಕುಂಠಿತವಾಗಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಪ್ರಿಯಾಂಕ್, ತೆರಿಗೆ ವಸೂಲಾತಿಗೆ ಆದ್ಯತೆ ನೀಡಲು ಗ್ರಾಮ ಪಂಚಾಯತಿ ಸಿಬ್ಬಂದಿಗೆ ಸೂಚನೆ ನೀಡಲು ಹಾಗೂ ಸಭೆ, ವಿಮರ್ಶೆ, ಸ್ಥಳ ಪರೀಕ್ಷೆ ಮೂಲಕ ಗಮನಹರಿಸಲು ತಾಲೂಕು ಪಂಚಾಯತಿ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ಸಾರ್ವಜನಿಕರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಬೇಕು. ಕೆಳ ಹಂತದ ಅಧಿಕಾರಿಗಳಿಗೆ ಕಳುಹಿಸಿದ ದೂರುಗಳ ಸ್ಥಿತಿಗತಿಗಳ ವಿವರಗಳನ್ನು ಪಡೆದು, ಸಮಸ್ಯೆ ಬಗೆಹರಿದ ನಂತರ ದೂರುದಾರರಿಗೆ ಉತ್ತರ ನೀಡಬೇಕು ಎಂದು ಪ್ರಿಯಾಂಕ್ ಖರ್ಗೆ ಸಲಹೆ ನೀಡಿದರು.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಸಮೀರ್ ಶುಕ್ಲಾ, ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ಮತ್ತು ಅಧಿಕಾರಿಗಳು ಇದ್ದರು.

Tags

e-swathuPriyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X