Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆಕೆಆರ್ ಟಿಸಿ ಸಿಬ್ಬಂದಿಗೆ ಅಪಘಾತ...

ಕೆಕೆಆರ್ ಟಿಸಿ ಸಿಬ್ಬಂದಿಗೆ ಅಪಘಾತ ಪರಿಹಾರ ವಿಮಾ ಯೋಜನೆ ಜಾರಿ

ವಾರ್ತಾಭಾರತಿವಾರ್ತಾಭಾರತಿ21 Dec 2023 11:28 PM IST
share
ಕೆಕೆಆರ್ ಟಿಸಿ ಸಿಬ್ಬಂದಿಗೆ ಅಪಘಾತ ಪರಿಹಾರ ವಿಮಾ ಯೋಜನೆ ಜಾರಿ

ಬೆಂಗಳೂರು: ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಕೆಆರ್ ಟಿಸಿ) ಸಿಬ್ಬಂದಿಗಾಗಿ ಪ್ರೀಮಿಯಂ‌ ರಹಿತ 1.20 ಕೋಟಿ ರೂ.ಮೊತ್ತದ ಅಪಘಾತ ಪರಿಹಾರ ವಿಮಾ ಯೋಜನೆ ಜಾರಿಗೊಳಿಸಿದೆ.

ಗುರುವಾರ ಪ್ರೀಮಿಯಂ ರಹಿತ ಅಪಘಾತ ಪರಿಹಾರ ವಿಮಾ ಯೋಜನೆ ಜಾರಿ ಸಂಬಂಧ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಕರ್ನಾಟಕ ವಲಯ ಮುಖ್ಯಸ್ಥ ನವನೀತ್ ಕುಮಾರ್ ಒಡಂಬಡಿಕೆ ವಿನಿಮಯ ಮಾಡಿಕೊಂಡರು.

ಈ ಕುರಿತು ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ನಿಗಮದ ಸಿಬ್ಬಂದಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತದಿಂದಾಗಿ ಆಗುತ್ತಿರುವ ಸಾವು-ನೋವಿನ ಪ್ರಮಾಣ ಗಮನಿಸಿ, ನಿಗಮವು ನೌಕರರು ವೈಯಕ್ತಿಕ, ಕರ್ತವ್ಯನಿರತ ಸಮಯದಲ್ಲಿ ಅಪಘಾತದಿಂದಾಗಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ, ಅಂಗ ನ್ಯೂನತೆಗೆ ಒಳಗಾದಲ್ಲಿ ಸಿಬ್ಬಂದಿಗೆ ಗಣನೀಯ ಮೊತ್ತದಷ್ಟು ಹಣ ದೊರೆಯುವಂತೆ ಮಾಡುವ ಉದ್ದೇಶದಿಂದ ಪ್ರೀಮಿಯಂ ರಹಿತ ಅಪಘಾತ ಪರಿಹಾರ ವಿಮಾ ಯೋಜನೆ ಜಾರಿಗೊಳಿಸಿದೆ ಎಂದರು.

ಯೋಜನೆಯಡಿ ಯೂನಿಯನ್ ಬ್ಯಾಂಕಿನಲ್ಲಿ ವೇತನ ಪಡೆಯುತ್ತಿರುವ ನೌಕರರು ಅಪಫಾತದಲ್ಲಿ ನಿಧನರಾದಲ್ಲಿ ಅಂತಹ ನೌಕರರ ಅವಲಂಬಿತರಿಗೆ 1.20 ಕೋಟಿ ರೂ.ಅಪಘಾತ ವಿಮೆ ಹಣ ದೊರಕಲಿದೆ. ನೌಕರರು ಶಾಶ್ವತ ಅಂಗನ್ಯೂನತೆ, ಭಾಗಶಃ ಶಾಶ್ವತ ಅಂಗನ್ಯೂನತೆಗೆ ಒಳಗಾದಲ್ಲಿ 1 ಕೋಟಿಗಳನ್ನು ಪಡೆಯಬಹುದಾಗಿದ್ದು, ಡೆಬಿಟ್‍ಕಾರ್ಡ್ ಮೇಲೆ 15 ಲಕ್ಷ ರೂ., ಅಪಘಾತ ವಿಮಾ ಸೌಲಭ್ಯವನ್ನು ಜಾರಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

Tags

KKRTC
share
ವಾರ್ತಾಭಾರತಿ
ವಾರ್ತಾಭಾರತಿ
Next Story
X