Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮನೆ ಬಾಗಿಲಿಗೆ ಆಸ್ತಿ ದಾಖಲೆ ತಲುಪಿಸುವ...

ಮನೆ ಬಾಗಿಲಿಗೆ ಆಸ್ತಿ ದಾಖಲೆ ತಲುಪಿಸುವ ವ್ಯವಸ್ಥೆ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

► 'ಬೆಂಗಳೂರಿನ ನಾಗರಿಕರು ಸರಕಾರಿ ಕಚೇರಿಗಳನ್ನು ಅಲೆಯುವ ಅಗತ್ಯ ಇರುವುದಿಲ್ಲ' ►'ಬ್ರ್ಯಾಂಡ್ ಬೆಂಗಳೂರಿಗೆ ಸಾರ್ವಜನಿಕರಿಂದ 30 ಸಾವಿರಕ್ಕೂ ಹೆಚ್ಚು ಸಲಹೆಗಳು ಬಂದಿವೆ'

ವಾರ್ತಾಭಾರತಿವಾರ್ತಾಭಾರತಿ15 July 2023 10:22 PM IST
share
ಮನೆ ಬಾಗಿಲಿಗೆ ಆಸ್ತಿ ದಾಖಲೆ ತಲುಪಿಸುವ ವ್ಯವಸ್ಥೆ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ಜು.15: ಬೆಂಗಳೂರಿನ ನಾಗರಿಕರು ಇನ್ನು ಮುಂದೆ ತಮ್ಮ ಆಸ್ತಿ ದಾಖಲೆಗಳಿಗೆ ಸರಕಾರಿ ಕಚೇರಿಗಳನ್ನು ಅಲೆಯುವ ಅಗತ್ಯ ಇರುವುದಿಲ್ಲ. ಸರಕಾರವೆ ಅವರ ಮನೆ ಬಾಗಿಲಿಗೆ ಅವರ ಆಸ್ತಿ ದಾಖಲೆಗಳನ್ನು ತಲುಪಿಸುವ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಶನಿವಾರ ವಿಧಾನಸೌಧದಲ್ಲಿ ‘ಬ್ರಾಂಡ್ ಬೆಂಗಳೂರು’ ಕುರಿತು ವರ್ಚುಯೆಲ್ ಮೂಲಕ ಬೆಂಗಳೂರು ನಿವಾಸಿಗಳ ಕ್ಷೇಮಾಭಿವೃದ್ಧಿ ಮತ್ತು ನಾಗರಿಕ ಸಂಘಗಳ ಪ್ರತಿನಿಧಿಗಳ ಜತೆ ಸಂವಾದ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಖಾತೆ ಎಂದು ಕರೆಯುವ ಬದಲು ಅದಕ್ಕೆ ಬೇರೆ ಹೆಸರು ಇಟ್ಟು, ಎಲ್ಲ ಆಸ್ತಿ ದಾಖಲೆಗಳನ್ನು ಒದಗಿಸಲಾಗುವುದು. ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಹಳ್ಳಿಗಳಲ್ಲಿ ಮನೆ ಬಾಗಿಲಿಗೆ ಪಾಣಿಗಳನ್ನು ನೀಡುವ ‘ಭೂಮಿ’ ವ್ಯವಸ್ಥೆ ಮಾಡಲಾಗಿತ್ತು ಎಂದರು.

ಇದೇ ಮಾದರಿಯಲ್ಲಿ ಬೆಂಗಳೂರು ನಗರದಲ್ಲಿ ಮನೆ ಬಾಗಿಲಲ್ಲೆ ಆಸ್ತಿ ದಾಖಲೆಗಳನ್ನು ನೀಡುವ ವ್ಯವಸ್ಥೆ ಜಾರಿಗೆ ತರಲಾಗುವುದು. ಇನ್ನು ಆಸ್ತಿ ತೆರಿಗೆ ವಿಚಾರವಾಗಿ ಇಂದಿನ ಸಭೆಯಲ್ಲಿ ಚರ್ಚೆಯಾಗಿದ್ದು, ಕಾನೂನು ರೀತಿಯಲ್ಲಿ ತೆರಿಗೆ ಕಟ್ಟುತ್ತಿರುವವರಿಗೆ ತೊಂದರೆಯಾಗುತ್ತಿದ್ದು, ತೆರಿಗೆ ಕಟ್ಟದವರಿಗೆ ರಕ್ಷಣೆ ಸಿಗುತ್ತಿದೆ ಎಂಬ ವಿಚಾರವನ್ನು ಪ್ರಸ್ತಾಪಿಸಲಾಯಿತು. ನಾವು ಮನೆ ಬಾಗಿಲಲ್ಲೆ ಆಯಾ ಆಸ್ತಿ ದಾಖಲೆಗಳನ್ನು ತಲುಪಿಸಿದರೆ, ಯಾರ ಬಳಿ ಎಷ್ಟು ಆಸ್ತಿ ಇದೆ ಎಂಬ ಸ್ಪಷ್ಟ ಚಿತ್ರಣ ಸಿಗುತ್ತದೆ. ಆಗ ಯಾರೂ ಕೂಡ ಆಸ್ತಿ ತೆರಿಗೆ ಪಾವತಿಸದೇ ತಪ್ಪಿಸಿಕೊಳ್ಳಲು ಆಗುವುದಿಲ್ಲ ಎಂದು ಅವರು ಹೇಳಿದರು.

ಆಸ್ತಿ ತೆರಿಗೆ ವಿಚಾರದಲ್ಲಿ ದೊಡ್ಡವರು, ಸಣ್ಣವರು ಎಂಬ ಬೇಧ ಮಾಡುವುದಿಲ್ಲ. ಈ ವಿಚಾರದಲ್ಲಿ ಯಾರು ತೆರಿಗೆ ಪಾವತಿಸಿಲ್ಲ ಎಂದು ಮ್ಯಾಪಿಂಗ್ ಮಾಡುತ್ತೇವೆ. ನಾವು ನಮ್ಮ ಸಂಪನ್ಮೂಲ ವೃದ್ಧಿಸಿಕೊಳ್ಳದಿದ್ದರೆ ಬೆಂಗಳೂರು ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. ನಾವು ಕೈಗೆತ್ತಿಕೊಳ್ಳಲು ಮುಂದಾಗಿರುವ ಬೃಹತ್ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣ ಮಾಡಿಕೊಳ್ಳಬೇಕು. ಹೀಗಾಗಿ ಎಲ್ಲರೂ ತೆರಿಗೆ ಪಾವತಿಸುವಂತೆ ನೋಡಿಕೊಳ್ಳಬೇಕು. ಇನ್ನು ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಮಕ್ಕಳ ಅಭಿಪ್ರಾಯವನ್ನು ಪಡೆಯಲು ಸಲಹೆ ಬಂದಿದ್ದು, ಮಕ್ಕಳ ಸಲಹೆಯನ್ನು ಸರಕಾರ ಪರಿಗಣಿಸಲಿದೆ ಎಂದು ಶಿವಕುಮಾರ್ ತಿಳಿಸಿದರು.

ಈ ವಿಚಾರವಾಗಿ ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳ ಜೊತೆ ಸಭೆ ಆಯೋಜಿಸುವಂತೆ ಒಂದು ಸಂಸ್ಥೆಗೆ ಸೂಚನೆ ನೀಡಿದ್ದೇನೆ. ಎಲ್ಲರ ಅಭಿಪ್ರಾಯ ಪಡೆಯಲು ಸಾಧ್ಯವಾಗದೆ ಇರುವುದರಿಂದ ಸಂವಾದ ಕಾರ್ಯಕ್ರಮದ ಮೂಲಕ ಬೆಂಗಳೂರಿನ ವಿಚಾರವಾಗಿ ಮಕ್ಕಳು ಯಾವ ರೀತಿ ಕನಸು ಕಾಣುತ್ತಿದ್ದಾರೆ ಎಂದು ಅವರ ಅಭಿಪ್ರಾಯ ತಿಳಿಯಲಾಗುವುದು. ಬೀದಿ ಬದಿ ವ್ಯಾಪಾರಿಗಳಿಗೆ ಈಗಾಗಲೆ ಕಾನೂನು ಇದ್ದು, ಪಾದಚಾರಿ ಮಾರ್ಗಗಳ ಮೇಲೆ ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಿಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು, ಪಾದಾಚಾರಿಗಳಿಗೂ ಅನುಕೂಲ ಆಗುವಂತೆ ನೀತಿ ರೂಪಿಸಲಾಗುವುದು ಎಂದು ಅವರು ಹೇಳಿದರು.

ಇನ್ನು ತ್ಯಾಜ್ಯ ವಿಲೇವಾರಿ ವಿಚಾರ ಹಿಂದಿನ ಸಭೆಯಲ್ಲಿ ಚರ್ಚೆಯಾಗಿದ್ದು ಎಲ್ಲೆಂದರಲ್ಲಿ ರಸ್ತೆಗಳ ಪಕ್ಕದಲ್ಲಿ ತ್ಯಾಜ್ಯಗಳನ್ನು ಸುರಿಯುತ್ತಿದ್ದಾರೆ. ಈ ವಿಚಾರವಾಗಿ ಪಾಲಿಕೆ ಅಧಿಕಾರಿಗಳನ್ನು ಸ್ಥಳಕ್ಕೆ ಕರೆದುಕೊಂಡು ಹೋಗಿ ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದ್ದೇನೆ. ರಾಜ್ಯದಲ್ಲಿ ವಾಹನಗಳ ಮಾಲಕರ ಸಂಘದ ಜೊತೆ ಮಾತನಾಡಿದ್ದು ಎಲ್ಲೆಂದರಲ್ಲಿ ಜನ ತ್ಯಾಜ್ಯ ವಿಲೇವಾರಿ ಮಾಡದಂತೆ ಸೂಚನೆ ನೀಡಿದ್ದೇನೆ. ಯಾವ ವಾಹನಗಳು ಎಲ್ಲಿ ತ್ಯಾಜ್ಯ ವಿಲೇವಾರಿ ಮಾಡಿವೆ ಎಂಬ ದಾಖಲೆ ಸಲ್ಲಿಸುವ ಬಗ್ಗೆಯೂ ಸೂಚನೆ ನೀಡಿದ್ದೇನೆ ಎಂದು ಶಿವಕುಮಾರ್ ತಿಳಿಸಿದರು.

ಎಲ್ಲೆಲ್ಲಿ ಹೆಚ್ಚಾಗಿ ಘನ ತ್ಯಾಜ್ಯ ವಿಲೇವಾರಿ ಮಾಡಲಾಗುತ್ತಿದೆ ಎಂಬ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. ಯಾವ ವಾಹನಗಳು ತ್ಯಾಜ್ಯ ವಿಲೇವಾರಿ ಮಾಡಿದೆ ಎಂಬುದನ್ನು ಪತ್ತೆಹಚ್ಚಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬೆಂಗಳೂರಿನ ಸ್ವಚ್ಛತೆ ಕಾಪಾಡುವ ವಿಚಾರವಾಗಿ ಈ ತಿಂಗಳಲ್ಲಿ ಎರಡು ಮೂರು ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು. ಈಗ ಅದರ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಾಗುವುದಿಲ್ಲ. ಇನ್ನು ಬೆಂಗಳೂರಿನಲ್ಲಿ ಜಾಹೀರಾತು ವಿಚಾರವಾಗಿ ನೂತನ ನೀತಿಯನ್ನು ರಚಿಸಲಾಗುವುದು. ಆ ಮೂಲಕ ಹೆಚ್ಚಿನ ಆದಾಯ ಬರುವಂತೆ ಮಾಡಲಾಗುವುದು ಎಂದು ಅವರು ಹೇಳಿದರು.

ಬೆಂಗಳೂರಿನ ಅಭಿವೃದ್ಧಿ ವಿಚಾರವಾಗಿ ಸುಮಾರು 6 ರಿಂದ 7 ವಿಭಾಗಗಳಲ್ಲಿ ಸಾರ್ವಜನಿಕರಿಂದ ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚು ಸಲಹೆಗಳು ಬಂದಿವೆ. ಈ ಸಲಹೆಗಳ ಪರಿಶೀಲನೆ ಹಾಗೂ ವರ್ಗೀಕರಣಕ್ಕೆ ಕೆಲವು ಸಂಘ ಸಂಸ್ಥೆಗಳ ಜೊತೆ ಚರ್ಚೆ ಮಾಡಲಾಗಿದೆ. ಇಂದಿನ ಸಭೆಯಲ್ಲಿ ಸರಕಾರ ನಾಗರಿಕರ ಸಮಸ್ಯೆಗಳನ್ನು ಆಗಾಗ ಆಲಿಸುತ್ತಿರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.

ಹಳ್ಳಿಗಳಲ್ಲಿ ಗ್ರಾಮ ಸಭೆಗಳ ಮಾದರಿಯಲ್ಲಿ ವಾರ್ಡ್ ಮಟ್ಟದಲ್ಲಿ ವಾರ್ಡ್ ಸಭೆಗಳನ್ನು ಮಾಡಬೇಕು. ಆ ಮೂಲಕ ಸ್ಥಳೀಯ ನಾಗರಿಕರ ಅಭಿಪ್ರಾಯ ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ. ರಸ್ತೆ ಗುಂಡಿ ವಿಚಾರವಾಗಿ ಬೆಂಗಳೂರು ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಜೊತೆ ಪ್ರತ್ಯೇಕ ಸಭೆ ಮಾಡಲಾಗುವುದು. ಈ ವಿಚಾರವಾಗಿ ಗೃಹಮಂತ್ರಿಗಳ ಜೊತೆ ಮಾತನಾಡಿದ್ದು, ಕಲಾಪ ಮುಗಿದ ಬಳಿಕ ಸಭೆ ಮಾಡುತ್ತೇನೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X