Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಾಹನ ದಟ್ಟಣೆ ನಿಯಂತ್ರಣಕ್ಕೆ ʼನೂತನ...

ವಾಹನ ದಟ್ಟಣೆ ನಿಯಂತ್ರಣಕ್ಕೆ ʼನೂತನ ರಸ್ತೆ ಗ್ರಿಡ್ ವ್ಯವಸ್ಥೆʼ : ಸಿಎಂ ಡಿ.ಕೆ.ಶಿವಕುಮಾರ್

ರಾಜ್ಯದ ವಿವಿಧೆಡೆ ನಿರ್ಮಿಸಿರುವ 16 ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ

ಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿ19 Nov 2026 5:43 PM IST
share
ವಾಹನ ದಟ್ಟಣೆ ನಿಯಂತ್ರಣಕ್ಕೆ ʼನೂತನ ರಸ್ತೆ ಗ್ರಿಡ್ ವ್ಯವಸ್ಥೆʼ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: "ರಾಜ್ಯದಲ್ಲಿರುವ ಎಲ್ಲಾ ನಗರಗಳಲ್ಲೂ ವಾಹನ ದಟ್ಟಣೆ ಹೆಚ್ಚಾಗಿದೆ. ಈ ಕಾರಣಕ್ಕೆ ನಮ್ಮ ಸರ್ಕಾರ ಹೊಸ ನಗರ ಯೋಜನೆ ರೂಪಿಸಿದೆ. ಇದರಲ್ಲಿ ಶಿಸ್ತು ಬದ್ಧ ರಸ್ತೆ ನಿರ್ಮಾಣಕ್ಕೆ 'ನೂತನ ರಸ್ತೆ ಗ್ರಿಡ್ ವ್ಯವಸ್ಥೆ' ಜಾರಿ ಮಾಡುವ ಚಿಂತನೆಯಿದೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ಬೆಂಗಳೂರಿನ ಜವಾಹರಲಾಲ್ ನೆಹರು ತಾರಾಲಯ ಸಭಾಂಗಣದಲ್ಲಿ ನಡೆದ ರಾಜ್ಯದ ವಿವಿಧೆಡೆ ನಿರ್ಮಿಸಿರುವ 16 ಇಂದಿರಾ ಕ್ಯಾಂಟೀನ್ ಗಳು, ಸ್ವಚ್ಛಭಾರತ್ ಮಿಷನ್ (ನಗರ) ಯೋಜನೆಯಡಿ ಕಾಮಗಾರಿಗಳು ಹಾಗೂ ಯಂತ್ರೋಪಕರಣಗಳ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಗುರುವಾರ ಮಾತನಾಡಿದರು.

"ಮೈಸೂರು, ಬೆಳಗಾವಿಯಲ್ಲಿ ರಸ್ತೆಗಳು ವಿಶಾಲವಾಗಿವೆ. ಆದರೆ, ಬೆಂಗಳೂರಿನ ಲ್ಲಿ ಈ ರೀತಿ ಇಲ್ಲ. ಇವೆಲ್ಲ ಯೋಜಿತವಾಗಿ ನಗರವನ್ನು ಅಭಿವೃದ್ಧಿ ಪಡಿಸುವುದರಿಂದ ಮಾತ್ರ ಸಾಧ್ಯ. ಅಗತ್ಯವಿರುವ ಪ್ರಮಾಣ ಪತ್ರಗಳನ್ನು ನಗರಯೋಜನೆ ಇಲಾಖೆಯಲ್ಲಿ ಪಡೆದುಕೊಳ್ಳಿ. ಇಂಧನ ಇಲಾಖೆಯವರು ಇಲ್ಲಿಗೆ ಬಂದು ಪ್ರಮಾಣ ಪತ್ರ ಪಡೆದುಕೊಳ್ಳುವುದು ನಡೆಯುತ್ತಿದೆ. ಎಲ್ಲವೂ ಇನ್ನು ಮುಂದೆ ಕೊನೆಗೊಳ್ಳಲಿದೆ. ಯೋಜಿತವಾಗಿ ನಗರ ನಿರ್ಮಾಣಕ್ಕಾಗಿಯೇ ನಾಡಪ್ರಭು ಕೆಂಪೇಗೌಡರ ಹೆಸರಲ್ಲಿ ನಗರಯೋಜನಾ ಕಾಲೇಜು ಆರಂಭಿಸಿದ್ದೇವೆ. ವಿದ್ಯಾರ್ಥಿಗಳ ದಾಖಲಾತಿ ಆರಂಭಗೊಂಡಿದೆ" ಎಂದರು.

ನಗರಸಭೆಗಳಿಗೆ ಹೆಚ್ಚಿನ ಅನುದಾನ

'ನಮ್ಮ ಸರ್ಕಾರ ನಗರಸಭೆಗಳು ಹಾಗೂ ಕಾರ್ಪೋರೇಷನ್ ಗಳಿಗೆ ಹೆಚ್ಚಿನ ಅನುದಾನ ನೀಡುವ ಬಗ್ಗೆ ತೀರ್ಮಾನ ಕೈಗೊಂಡಿದೆ. ಕಳೆದ 3 ವರ್ಷಗಳಿಂದ ಅನುದಾನದಲ್ಲಿ ವ್ಯತ್ಯಾಸವಾಗಿತ್ತು. ಆದರೆ, ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ದೊರೆಯಲಿದೆ. ಆದರೆ, ಪ್ರತಿಯೊಂದು ಪೈಸೆಗೂ ಲೆಕ್ಕ ಇಡಬೇಕು. ಯೋಜನೆಯ ಫೋಟೋ, ವೀಡಿಯೋ ಮಾಡಬೇಕು. ಉದಾಹರಣೆಗೆ ಶಿವಕುಮಾರ್ ಮನೆಯಿಂದ ಯತೀಂದ್ರ, ಯತೀಂದ್ರ ಮನೆಯಿಂದ ಶಿವಕುಮಾರ್ ಮನೆಯ ರಸ್ತೆಗಳನ್ನು ತೋರಿಸಿ ಬಿಲ್ ಮಾಡುವಂತಿಲ್ಲ. ಗುಣಮಟ್ಟದಲ್ಲಿ ರಾಜಿ ಇಲ್ಲ. ಅಕ್ರಮ ವ್ಯವಹಾರಗಳಿಗೆ ಕಠಿಣ ಕ್ರಮ ಕೈಗೊಳ್ಳುತ್ತೇನೆ. ಶಾಸಕರು, ಕಾರ್ಪೊರೇಟರ್ ಗಳು ಹೇಳಿದರು ಅಂತ ಕಳ್ಳಲೆಕ್ಕ, ಕಳ್ಳಬಿಲ್ ಗಳು ಮಾಡಿದರೇ ನೀವೇ ಜವಾಬ್ದಾರರು" ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

"ಬಡವನ ತಟ್ಟೆಯಲ್ಲಿ ಅನ್ನ ಇದ್ದಾಗ ಮಾತ್ರ ಅಭಿವೃದ್ಧಿಗೆ ಬೆಲೆ ಬರುತ್ತದೆ. ದುಡಿಯುವವರ ಮುಖದಲ್ಲಿ ನಗು ಇದ್ದರೆ ನಮ್ಮ ಕೆಲಸ ಸಾರ್ಥಕವಾಗುತ್ತದೆ. ಹಸಿವಿಗೆ ಜಾತಿ, ಧರ್ಮ ಅನ್ನೋದು ಇಲ್ಲ. ಎಷ್ಟೇ ದೊಡ್ಡ ಶ್ರೀಮಂತರಾಗಿದ್ದರೂ ಹಸಿವಾದಾಗ ಜಾತಿ ಧರ್ಮ ನೋಡಲ್ಲ. ಎಲ್ಲಿ, ಏನು ಸಿಗುತ್ತದೆಯೋ ಅದನ್ನು ತಿಂದು ಹೊಟ್ಟೆ ತುಂಬಿಸಿಕೊಳ್ಳುತ್ತಾನೆ. ಕೆಲವರು ಹಸಿವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಾರೆ. ನಾವು ಆ ರೀತಿ ಮಾಡಲ್ಲ. ಬಿಜೆಪಿ, ಜನತಾದಳದ ಕ್ಷೇತ್ರದಲ್ಲಿ ಎಷ್ಟೋ ಕಡೆ ಇಂದಿರಾ ಕ್ಯಾಂಟೀನ್ ಸ್ಥಗಿತಗೊಳಿಸಿದ್ದಾರೆ" ಎಂದು ಹೇಳಿದರು.

"ಇಂದಿರಾ ಕ್ಯಾಂಟೀನ್ ನಲ್ಲಿ ಸಿಸಿ ಟಿವಿ ಕ್ಯಾಮೆರ ಹಾಕಿ ಕೇಂದ್ರೀಕೃತ ವ್ಯವಸ್ಥೆ ಮಾಡಬೇಕು. ಇದರಿಂದ ಪ್ರತಿದಿನ ಎಷ್ಟು ಜನ ಬಂದು ಹೋಗುತ್ತಾರೆ ಎನ್ನುವ ಮಾಹಿತಿ ದೊರೆಯುತ್ತದೆ. ದಿನಕ್ಕೆ ಒಬ್ಬರಂತೆ ಸರತಿಯಲ್ಲಿ ಅಧಿಕಾರಿಗಳು ಇಂದಿರಾ ಕ್ಯಾಂಟೀನ್ ನಲ್ಲಿ ಊಟ ಮಾಡಿ, ಊಟ ಚೆನ್ನಾಗಿದೆಯೋ ಇಲ್ಲವೋ ಅಂತ ಗುಣಮಟ್ಟ ಪರೀಕ್ಷೆ ಮಾಡಿ ಸಹಿ ಹಾಕಿ ಬರಬೇಕು. ಹೀಗೆ ಮಾಡುವುದರಿಂದ ಅಲ್ಲಿ ಕೆಲಸ ಮಾಡುವವರಿಗೆ ಭಯ, ಭಕ್ತಿ ಇರುತ್ತದೆ. ಇದು ಬಡವರಿಗಾಗಿ ಮಾಡುತ್ತಿರುವ ಕೆಲಸವಾದ್ದರಿಂದ ಪಾರದರ್ಶಕವಾಗಿರಿ" ಎಂದು ಕಿವಿಮಾತು ಹೇಳಿದರು.

"ನಾನು ನಗರಾಭಿವೃದ್ಧಿ ಸಚಿವನಾಗಿದ್ದೆ. ಸ್ವಚ್ಛತೆ ಸವಾಲಿನ ಕೆಲಸ ಅನ್ನೋ ಅನುಭವ ಆಗಿದೆ. ಪೌರಕಾರ್ಮಿಕರು ಕಷ್ಟಪಟ್ಟು ಕೆಲಸ ಮಾಡುತ್ತಾರೆ. ತಂತ್ರಜ್ಞಾನ ಬಳಸಿಕೊಂಡು ವೇಗವಾಗಿ ಕೆಲಸ ಮಾಡಿ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ನಿಮ್ಮ ನೆರವಿಗೆ ನಿಲ್ಲಲಿವೆ" ಎಂದರು.

ಬಡವರಿಗೆ ನಿವೇಶನಗಳ ಹಂಚಿಕೆ

"ನಮ್ಮ ಸರ್ಕಾರ ಪೌರಕಾರ್ಮಿಕರಿಗಾಗಿ ಮನೆಗಳ ನಿರ್ಮಾಣಕ್ಕೆ ಚಿಂತನೆ ನಡೆಸಿದೆ. ಪ್ರತಿ ಕ್ಷೇತ್ರದಲ್ಲೂ ಬಡವರಿಗೆ ನಿವೇಶನಗಳನ್ನು ಹಂಚಿಕೆ ಮಾಡುವ ದಿಟ್ಟ ತೀರ್ಮಾನ ಮಾಡಿದೆ. ನಿಮಗೂ ಎಲ್ಲಾ ಸೌಕರ್ಯಗಳು ನೀಡುತ್ತಿದ್ದೇವೆ. ನೀವು ನಿಷ್ಠೆಯಿಂದ ಕೆಲಸ ಮಾಡಬೇಕು. ಜನರಿಗಾಗಿ ಕೆಲಸ ಮಾಡಲು ಇದು ಒಳ್ಳೆ ಅವಕಾಶ. ನಮಗೆ 5 ವರ್ಷಕ್ಕೊಂದು ಬಾರಿ ಜನರ ಮುಂದೆ ಹೋಗಿ ಅಧಿಕಾರ ನವೀಕರಣ ಮಾಡಿಕೊಳ್ಳಬೇಕು. ನಿಮಗೆ ಆ ರೀತಿ ಇಲ್ಲ. ಬದ್ದತೆಯಿಂದ, ಆತ್ಮತೃಪ್ತಿಯಿಂದ ಕೆಲಸ ಮಾಡಿ. ನಮ್ಮ ಸರ್ಕಾರ ನಿಮ್ಮನ್ನು ನಂಬಿದೆ, ನೀವು ಸರ್ಕಾರವನ್ನು ನಂಬಿ" ಎಂದರು.

"ಇಂದಿರಾ ಅಂದರೆ ಹಸಿವು ದೂರ. ಇಂದಿರಾ ಅಂದರೆ ಬಡತನ ದೂರ. ಈ ದೇಶದ ಹಸಿದ ಹೊಟ್ಟೆಗಳಿಗೆ, ದುಡಿಯುವ ಕೈಗಳಿಗೆ ಶಕ್ತಿ ತುಂಬಿದ್ದು ಇಂದಿರಾಗಾಂಧಿ. ಈ ದೇಶದ ಆರ್ಥಿಕತೆಗೆ, ಅಭಿವೃದ್ಧಿಗೆ, ಸಾಮಾನ್ಯ ಜನರ ಬಡವರ ಬದುಕಿಗೆ ಬಲ ತುಂಬಿದ ಧೀಮಂತ ಮಹಿಳೆ ಇಂದಿರಾಗಾಂಧಿ. ಅವರ ಹೆಸರು ಉಳಿಸಿಕೊಂಡು ಹೋಗುವುದು ನಮ್ಮ, ನಿಮ್ಮ ಕರ್ತವ್ಯ. ಈ ಜವಾಬ್ದಾರಿಯನ್ನು ನೀವು ತೆಗೆದುಕೊಳ್ಳಬೇಕು. ಹಸಿವು ಮುಕ್ತ ಕರ್ನಾಟಕವನ್ನು ನಿರ್ಮಾಣ ಮಾಡುವುದು ನಮ್ಮ ಗುರಿ. ಎಷ್ಟೇ ಕಷ್ಟ ಇರಲಿ. 5 ಗ್ಯಾರಂಟಿ ಕೊಟ್ಟಿದ್ದೇವೆ. ಬೆಲೆ ಗಗನಕ್ಕೆ ಏರುತ್ತಿದೆ. ಆದಾಯ ಪಾತಾಳಕ್ಕೆ ಹೋಗುತ್ತಿದೆ. ಆದರೂ ನಾವು ಅನ್ನಭಾಗ್ಯವನ್ನು ನೀಡುತ್ತಿದ್ದೇವೆ. ಇಂದಿರಾ ಕ್ಯಾಂಟೀನ್ ಅನ್ನು ಮುಂದುವರಿಸುತ್ತಿದ್ದೇವೆ" ಎಂದರು.

Tags

Indira canteensDK ShivakumarCongress
share
ಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿ
ಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿ
Next Story
X