Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಮನ್‌ ವೆಲ್ತ್ ಮಹಿಳಾ ಸಂಸದೀಯಪಟುಗಳ...

ಕಾಮನ್‌ ವೆಲ್ತ್ ಮಹಿಳಾ ಸಂಸದೀಯಪಟುಗಳ ಭಾರತೀಯ ಪ್ರಾದೇಶಿಕ ಸಮ್ಮೇಳನ ಉದ್ಘಾಟನೆ

ಮಹಿಳೆಯರಿಲ್ಲದ ಪ್ರಜಾಪ್ರಭುತ್ವ ರೆಕ್ಕೆಯಿಲ್ಲದ ಹಕ್ಕಿಯಂತೆ : ಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ17 Nov 2026 3:41 PM IST
share
ಕಾಮನ್‌ ವೆಲ್ತ್ ಮಹಿಳಾ ಸಂಸದೀಯಪಟುಗಳ ಭಾರತೀಯ ಪ್ರಾದೇಶಿಕ ಸಮ್ಮೇಳನ ಉದ್ಘಾಟನೆ

ಬೆಂಗಳೂರು: “ಐತಿಹಾಸಿಕ ಮಹಿಳಾ ಮೀಸಲು ವಿಧೇಯಕ ಸಂಸತ್ತಿನ ಚಳಿಗಾಲದ ಅಧಿವೇಶನ ಅಂಗೀಕಾರವಾಗುವ ನಿರೀಕ್ಷಿಯಲ್ಲಿದ್ದೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಲಾಗಿದ್ದ ಕಾಮನ್‌ ವೆಲ್ತ್ ಮಹಿಳಾ ಸಂಸದೀಯಪಟುಗಳ ಭಾರತೀಯ ಪ್ರಾದೇಶಿಕ ವಿಭಾಗದ ಮೊದಲ ಸಮ್ಮೇಳನವನ್ನು ಶಿವಕುಮಾರ್ ಅವರು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.

“ಡಿಸೆಂಬರ್ ನ ಅಧಿವೇಶನ ಇತಿಹಾಸ ನಿರ್ಮಿಸಲಿದೆ. ಈ ಮೀಸಲಾತಿಯಿಂದಾಗಿ ನಾವು ಎಷ್ಟು ಜನರು ಸಂಸತ್ ಹಾಗೂ ವಿಧಾನಸೌಧದಿಂದ ಹೊರಬರಬೇಕಾಗುವುದೋ, ತಿಳಿಯದು. ಆದರೆ ಶೇ. 50 ರಷ್ಟು ಹೆಚ್ಚುವರಿ ಕ್ಷೇತ್ರಗಳಿರುವುದು ಎಂದು ಹೇಳಲಾಗುತ್ತಿದೆ. ಯಾವ ಕ್ಷೇತ್ರಗಳಲ್ಲಿ ಮೀಸಲಾತಿ ಬರುವುದು ಎಂದು ತಿಳಿದಿಲ್ಲ” ಎಂದು ಹೇಳಿದರು.

ಮಹಿಳಾ ಮೀಸಲಾತಿಯಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದಲಾವಣೆ

“ಮಹಿಳಾ ಮೀಸಲಾತಿಯಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆ ಆಗಲಿದೆ. ಮಹಿಳೆಯರನ್ನು ಗೌರವಿಸುವುದು ನಮ್ಮ ಕರ್ತವ್ಯ. ಮಹಿಳೆಯರ ಬೆಂಬಲವಿಲ್ಲದೆ ಪುರುಷರು ಯಶಸ್ವಿಯಾಗಲು ಸಾಧ್ಯವಿಲ್ಲ. ಇದು ನಮ್ಮ ಪ್ರಗತಿ ಪರ ಸಮಾಜದ ತಳಪಾಯವೂ ಹೌದು” ಎಂದು ಅಭಿಪ್ರಾಯಪಟ್ಟರು.

“ಅನುಭವ ಮಂಟಪ ಸಂಸದೀಯ ವ್ಯವಸ್ಥೆಯನ್ನು 12 ನೇ ಶತಮಾನದಲ್ಲಿಯೇ ಪರಿಚಯಿಸಿದೆ. ವಿಧಾನಸೌಧದ ಪ್ರವೇಶದ್ವಾರದಲ್ಲಿ ಮಹಿಳೆಯರಿಗೆ ನಮ್ಮ ರಾಜ್ಯ ನೀಡಿರುವ ಪ್ರಾಮುಖ್ಯತೆಯನ್ನು ತೋರಿಸುವ ಚಿತ್ರವಿದೆ. ಇದನ್ನು ನೀವು ತಪ್ಪದೇ ವೀಕ್ಷಿಸಿ” ಎಂದು ತಿಳಿಸಿದರು.

“ನಮ್ಮಲ್ಲಿ ಶೇ. 42ರಷ್ಟು ವೈದ್ಯರು ಮಹಿಳೆಯರು, ಶೇ. 80ರಷ್ಟು ಅರೆ ವೈದ್ಯಕೀಯ ಸಿಬ್ಬಂದಿ ಮಹಿಳೆಯರು. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿಯೂ ಶೇ.40ರಷ್ಟು ಮಹಿಳೆಯರಿದ್ದಾರೆ. ಮಹಿಳೆಯರ ಸಬಲೀಕರಣಕ್ಕಾಗಿ ನಮ್ಮ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತು. ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದೆವು. ಐದರಲ್ಲಿ ನಾಲ್ಕು ಗ್ಯಾರಂಟಿಗಳು ಮಹಿಳೆಯರನ್ನು ಸಶಕ್ತಗೊಳಿಸುವ ಯೋಜನೆಗಳಾಗಿವೆ” ಎಂದು ಸಿಎಂ ತಿಳಿಸಿದರು.

ಮಹಿಳೆಯರಿಲ್ಲದ ಪ್ರಜಾಪ್ರಭುತ್ವ ರೆಕ್ಕೆಯಿಲ್ಲದ ಹಕ್ಕಿಯಂತೆ

“ಮಹಿಳೆಯರ ಸಾಮಾಜಿಕ ಅರ್ಥಿಕ ಪರಿಸ್ಥಿತಿ ಜೊತೆಗೆ ರಾಜಕೀಯ ಸಬಲೀಕರಣವೂ ಆಗಬೇಕಿದೆ ಎಂಬುದು ನಮ್ಮ ನಂಬಿಕೆ. ಮಹಿಳೆಯರಿಲ್ಲದ ಪ್ರಜಾಪ್ರಭುತ್ವ ರೆಕ್ಕೆಯಿಲ್ಲದ ಹಕ್ಕಿಯಂತೆ. ಎತ್ತರಕ್ಕೇರಲು ಸಾಧ್ಯವಿಲ್ಲ. ನೀವೆಲ್ಲರೂ ಒಂದಾಗಿ ಈ ಸಮ್ಮೇಳನದಲ್ಲಿ ನಡೆಸುವ ಚರ್ಚೆ ಹೊಸ ಬೆಳಕನ್ನು ಮೂಡಿಸಬೇಕು. ದೇಶದಲ್ಲಿ ಹಲವಾರು ನಾಯಕಿಯರನ್ನು ನಾವು ಕಾಣಬಹುದು. ಸಂಸತ್ತು, ಶಾಸನ ಸಭೆಗಳಲ್ಲಿ ಭವಿಷ್ಯಕ್ಕಾಗಿ ನೀವು ಇನ್ನಷ್ಟು ಸದೃಢರಾಗಬೇಕು” ಎಂದು ಕರೆ ನೀಡಿದರು.

ಹುದ್ದೆ ಅಲಂಕರಿಸಿದರೆ ಸಾಲದು; ಆಡಳಿತಕ್ಕೆ ಹೊಸ ದಿಶೆ ನೀಡಬೇಕು

“ಮಹಿಳೆಯರು ಕೇವಲ ಹುದ್ದೆಗಳನ್ನು ಅಲಂಕರಿಸುವುದಷ್ಟೇ ಅಲ್ಲ, ತೀರ್ಮಾನಗಳಲ್ಲಿ ತಮ್ಮ ಅಭಿಪ್ರಾಯ ಮಂಡಿಸಬೇಕು. ಶಾಸನ ರೂಪಿಸುವಲ್ಲಿ ಕೊಡುಗೆ ನೀಡಬೇಕು. ಆಡಳಿತಕ್ಕೆ ಹೊಸ ದಿಶೆಯನ್ನು ನೀಡಬೇಕು. ರಾಜೀವ್ ಗಾಂಧಿಯವರು 1988-89 ರ ಅವಧಿಯಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ. 50 ರ ಮೀಸಲಾತಿ ಜಾರಿಗೆ ತಂದರು. ನಂತರ ಎಲ್ಲ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿಯೂ ಮೀಸಲಾತಿ ಜಾರಿಯಾಯಿತು. ಈ ಅವಕಾಶವನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳಬೇಕು. ಮಹಿಳೆಯರು ಆಯ್ಕೆಯಾದ ನಂತರ ಅವರ ಪತಿ ಅಥವಾ ಪುತ್ರ ಅಧಿಕಾರ ಚಲಾಯಿಸಬಾರದು” ಎಂದು ಸಿಎಂ ತಿಳಿಸಿದರು.

“ಮಹಿಳೆಯರು ರಾಜಕಾರಣ ಪ್ರವೇಶಿಸುವುದು ಸುಲಭವಲ್ಲ. ಸಾಮಾಜಿಕವಾಗಿ, ಕೌಟುಂಬಿಕವಾಗಿ ಹಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ನೀವು ಮಹಿಳಾ ರಾಜಕಾರಣಿಗಳ ಪಾಲ್ಗೊಳ್ಳುವಿಕೆಯನ್ನು ಪ್ರೋತ್ಸಾಹಿಸಬೇಕು. ತಳಹಂತದ ಪ್ರಜಾಪ್ರಭುತ್ವದಲ್ಲಿ ಲಕ್ಷಾಂತರ ಮಹಿಳೆಯರು ಸಾರ್ವಜನಿಕ ಬದುಕಿಗೆ ಪ್ರವೇಶಿಸುತ್ತಾರೆ. ಪಂಚಾಯಿತಿಯಿಂದ ಸಂಸತ್ತಿನ ವರೆಗೆ ಮಹಿಳೆಯರು ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು” ಎಂದು ಕರೆ ನೀಡಿದರು.

“15 ಲಕ್ಷಕ್ಕೂ ಹೆಚ್ಚು ಮಹಿಳೆಯರು ಪಂಚಾಯಿತಿ ಮಟ್ಟದಲ್ಲಿ ಅಧಿಕಾರದಲ್ಲಿದ್ದಾರೆ. ಅವರು ಸುಶಿಕ್ಷಿತರಾಗಿದ್ದು ವ್ಯವಸ್ಥೆಯ ಬಗ್ಗೆ ಅರಿವು ಹೊಂದಿದ್ದಾರೆ. ರಸ್ತೆ , ಸೇತುವೆ, ಬಾವಿ, ಶಾಲೆ ಅಭಿವೃದ್ಧಿ, ಮತ್ತಿತರ ಅಭಿವೃದ್ಧಿ ಕಾರ್ಯಗಳಲ್ಲಿ ಕೈಜೋಡಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಗೆ ಬುನಾದಿ ಹಾಕಿದ ಎಲ್ಲರಿಗೂ ತಾವು ಧನ್ಯವಾದಗಳು. ಮಹಿಳೆಯರು ಆಯವ್ಯಯ ಚರ್ಚೆಯಲ್ಲಿ ಭಾಗವಹಿಸುವ ಸಂದರ್ಭದಲ್ಲಿ ಸಮಸ್ಯೆಗಳ ಅರಿವನ್ನು ಹೊಂದಿರುತ್ತಾರೆ. ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರ ಸುದೀರ್ಘ ಹೋರಾಟದ ಫಲವಾಗಿದೆ. ನಮ್ಮ ನಾಯಕಿ ಸೋನಿಯಾ ಗಾಂಧಿಯವರು ಮಹಿಳಾ ಮೀಸಲಾತಿ ಜಾರಿಗೊಳಿಸುವ ಪ್ರಯತ್ನ ಮಾಡಿದ್ದರು. ಆದರೆ ಲೋಕಸಭೆಯಲ್ಲಿ ನಮಗೆ ಬೆಂಬಲ ದೊರೆಯಲಿಲ್ಲ” ಎಂದು ಸ್ಮರಿಸಿದರು.

Tags

CommonwealthDK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X