Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಡೆಂಗ್ಯೂ ಪ್ರಕರಣಗಳ ಹೆಚ್ಚಳ :...

ಡೆಂಗ್ಯೂ ಪ್ರಕರಣಗಳ ಹೆಚ್ಚಳ : ಮುನ್ನೆಚ್ಚರಿಕೆ ಕ್ರಮಕ್ಕೆ ಗ್ರಾ.ಪಂ.ಗಳಿಗೆ ಪ್ರಿಯಾಂಕ್ ಖರ್ಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ7 July 2024 7:42 PM IST
share
ಡೆಂಗ್ಯೂ ಪ್ರಕರಣಗಳ ಹೆಚ್ಚಳ : ಮುನ್ನೆಚ್ಚರಿಕೆ ಕ್ರಮಕ್ಕೆ ಗ್ರಾ.ಪಂ.ಗಳಿಗೆ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ರವಿವಾರ ಈ ಸಂಬಂಧ ಮಾಹಿತಿ ನೀಡಿರುವ ಅವರು, ‘ಕುಡಿಯುವ ನೀರಿನ ಸರಬರಾಜು ಟ್ಯಾಂಕ್‍ಗಳು, ತೆರೆದ ತೊಟ್ಟಿಗಳು ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಶುಚಿಗೊಳಿಸಲು ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ ಹರಡುವುದನ್ನು ತಡೆಗಟ್ಟಲು ಮತ್ತು ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ಹಲವು ತುರ್ತು ಕ್ರಮಗಳನ್ನು ಸೂಚಿಸಿದ್ದು, ಪಂಚಾಯತಿ ಮಟ್ಟದಲ್ಲಿ ಲೋಪವಾಗದಂತೆ ಅನುಷ್ಠಾನಗೊಳಿಸಬೇಕೆಂದು ಹೇಳಿದ್ದಾರೆ.

ಮನೆ, ಅಂಗಡಿ-ಮುಂಗಟ್ಟುಗಳು, ಹೊಟೇಲ್‍ಗಳು, ವಾಣಿಜ್ಯ ಸಂಕೀರ್ಣಗಳು, ಸಾರ್ವಜನಿಕ ಸ್ಥಳಗಳು ಹಾಗೂ ಖಾಲಿ ಜಾಗಗಳಲ್ಲಿ ನೀರು ದೀರ್ಘಕಾಲ ನಿಲ್ಲದಂತೆ ಕ್ರಮವಹಿಸಬೇಕು ಮತ್ತು ಆವರಣಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳುಬೇಕು. ನಿರುಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಶೀಘ್ರವಾಗಿ ಹಾಗೂ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕು ಎಂದು ಸೂಚಿಸಿದ್ದಾರೆ.

ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ ಮಳೆನೀರು ಸಂಗ್ರಹವಾಗದಂತೆ ಹಾಗೂ ನೀರಿನ ಶೇಖರಣೆಗಳಲ್ಲಿ ಈಡಿಸ್ ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮವಹಿಸುವುದು. ಗ್ರಾಮಗಳಲ್ಲಿರುವ ಸಮುದಾಯದ ಶೌಚಾಲಯಗಳಲ್ಲಿ ಹಾಗೂ ಮನೆಗಳ ಶೌಚಾಲಯಗಳ ಪಕ್ಕದಲ್ಲಿರುವ ನೀರಿನ ತೊಟ್ಟಿಗಳಿಗೆ ಮುಚ್ಚಳವನ್ನು ಅಳವಡಿಸಬೇಕು ಎಂದು ಹೇಳಿದ್ದಾರೆ.

ಗ್ರಾಮಗಳಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಕಟ್ಟಿಸಿರುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಕಡ್ಡಾಯವಾಗಿ ಸ್ವಚ್ಛಗೊಳಿಸಬೇಕು. ಖಾಲಿ ನಿವೇಶನಗಳಲ್ಲಿ ಘನತ್ಯಾಜ್ಯ ವಸ್ತುಗಳು ಮತ್ತು ಮಳೆ ನೀರು ಸಂಗ್ರಹವಾಗದಂತೆ ಕ್ರಮವಹಿಸಲು ನಿವೇಶನಗಳ ಮಾಲಕರಿಗೆ ಸೂಚನೆ ನೀಡಬೇಕು. ಸೂಚನೆ ಪಾಲಿಸದವರಿಗೆ ನಿಯಮಾನುಸಾರ ದಂಡ ವಿಧಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರಿಯಾಂಕ್ ಖರ್ಗೆ ಕಟ್ಟೆಚ್ಚರ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X