ಬಿಸಿಯೂಟ ತಯಾರಕರ ಗೌರವ ಧನ ಹೆಚ್ಚಳ: ರಾಜ್ಯ ಸರಕಾರ ಆದೇಶ

ಬೆಂಗಳೂರು : 2025-26ನೆ ಸಾಲಿನ ಆಯವ್ಯಯ ಘೋಷಣೆಯಂತೆ ಸರಕಾರಿ ಶಾಲೆಗಳಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಧನ 1 ಸಾವಿರ ರೂ.,ಗಳಷ್ಟು ಹೆಚ್ಚಿಸಿ ರಾಜ್ಯ ಸರಕಾರ ಮಹತ್ವದ ಆದೇಶ ಹೊರಡಿಸಿದೆ.
2022-23ನೆ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ಸೂಚಿಸಲಾಗಿದ್ದು, ಈ ಮೂಲಕ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ 1,26,103 ಅಡುಗೆ ಸಿಬ್ಬಂದಿಯ ಗೌರವ ಧನ ಹೆಚ್ಚಳ ಆಗಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
Next Story





