Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಏರಿಕೆ;...

ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಏರಿಕೆ; ಕ್ಯಾಮರಾ ಟ್ರ್ಯಾಪ್ ನಲ್ಲಿ ಈ ಬಾರಿ 435 ಹುಲಿಗಳು ಪತ್ತೆ: ಸಚಿವ ಈಶ್ವರ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ27 July 2023 1:03 PM IST
share
ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಏರಿಕೆ; ಕ್ಯಾಮರಾ ಟ್ರ್ಯಾಪ್ ನಲ್ಲಿ ಈ ಬಾರಿ 435 ಹುಲಿಗಳು ಪತ್ತೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು, ಜು.27: ಹುಲಿಗಳ ಸಂರಕ್ಷಣೆಗಾಗಿ ರಾಜ್ಯದಲ್ಲಿ ಕೈಗೊಂಡ ವಿವಿಧ ಉಪಕ್ರಮಗಳ ಫಲವಾಗಿ ವ್ಯಾರ್ಘಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದ್ದು, ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಹೆಚ್ಚು ಆಗಿದೆ ಎಂದು ವಿಶ್ಲೇಷಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಹುಲಿದಿನಕ್ಕೆ 2 ದಿನಗಳ ಮುನ್ನ ರಾಷ್ಟ್ರೀಯ ಪ್ರಾಣಿ ಹುಲಿ ಗಣತಿಯ ವಿವರ ಬಿಡುಗಡೆ ಮಾಡಿರುವ ಅವರು, ರಾಷ್ಟ್ರೀಯ ಹುಲಿ ಪ್ರಾಧಿಕಾರ (ಎನ್.ಟಿ.ಸಿ.ಎ.) ಮಾರ್ಗಸೂಚಿಯ ಪ್ರಕಾರ ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ಹುಲಿ ಗಣತಿ ಮಾಡಲಾಗುತ್ತದೆ. ಇದರ ಭಾಗವಾಗಿ ಆನೆ, ಮಾಂಸಹಾರಿ ಮತ್ತು ಸಸ್ಯಹಾರಿ ಪ್ರಾಣಿಗಳ ಗಣತಿಯನ್ನೂ ದೇಶಾದ್ಯಂತ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಪಶ್ಚಿಮ ಘಟ್ಟದ ಹೆಚ್ಚಿನ ಭಾಗ ಹೊಂದಿರುವ ಕರ್ನಾಟಕವು ಹುಲಿಗಳ ಸಂರಕ್ಷಣೆಯಲ್ಲಿ ಮುಂಚೂಣಿಯಲ್ಲಿದ್ದು,2021-22ರ ಅವಧಿಯಲ್ಲಿ ಹುಲಿ ಗಣತಿಯನ್ನು ವೈಜ್ಞಾನಿಕವಾಗಿ ಹಾಗೂ ಸಮರ್ಪಕವಾಗಿ ನಡೆಸಿದ್ದು, ರಾಜ್ಯದ 5 ಹುಲಿ ಸಂರಕ್ಷಿತ ಪ್ರದೇಶಗಳಾದ ನಾಗರಹೊಳೆ, ಬಂಡೀಪುರ, ಭದ್ರಾ, ಬಿಳಿಗಿರಿರಂಗನಾಥಸ್ವಾಮಿ ದೇವಸ್ಥಾನ ಹಾಗೂ ಕಾಳಿ ಕಾನನ ಸೇರಿದಂತೆ 37 ವನ್ಯಜೀವಿ ಧಾಮಗಳಲ್ಲಿ ಒಟ್ಟು 37 ವಿಭಾಗದಲ್ಲಿ ನಡೆಸಲಾಗಿದೆ. ಈ ಗಣತಿಗೆ ಕ್ಯಾಮರಾ ಟ್ರ್ಯಾಪ್ ಮತ್ತು ಲೈನ್ ಟ್ರನ್ಸ್ಯಾಕ್ಟ್ ವಿಧಾನ ಬಳಸಲಾಗಿದೆ ಎಂದು ವಿವರಿಸಿದರು. ರಾಜ್ಯದ ಎಲ್ಲ ಸಂರಕ್ಷಿತ ಅರಣ್ಯಗಳಲ್ಲಿ ಅಳವಡಿಸಲಾಗಿದ್ದ 5399 ಕ್ಯಾಮರಾ ಟ್ರ್ಯಾಪ್ ನಲ್ಲಿ 66 ಲಕ್ಷಕ್ಕೂ ಹಚ್ಚು ವನ್ಯ ಜೀವಿಗಳ ಛಾಯಾಚಿತ್ರ ಕ್ರೋಡೀಕರಣವಾಗದ್ದು, ಆಧುನಿಕ ತಂತ್ರಜ್ಞಾನ ಬಳಸಿ ಹುಲಿಗಳ ಚಲನವಲನ, ಪ್ರಾದೇಶಿಕ ಪರಿಮಿತಿ (territory) ಹುಲಿಗಳ ಮೈಮೇಲಿನ ಪಟ್ಟೆಗಳ ಆಧಾರದ ಮೇಲೆ ಹುಲಿಗಳ ಸಂಖ್ಯೆಯನ್ನು ಲೆಕ್ಕಹಾಕಲಾಗಿದೆ ಎಂದು ವಿವರ ನೀಡಿದರು.

2018ರಲ್ಲಿ ನಡೆದಿದ್ದ ಅಖಿಲ ಭಾರತ ಹುಲಿ ಗಣತಿಯ ಪ್ರಕಾರ ಕರ್ನಾಟಕದಲ್ಲಿ ನಡೆದ ಕ್ಯಾಮರಾ ಟ್ರ್ಯಾಪ್ ನಲ್ಲಿ 404 ಹುಲಿಗಳು ಪತ್ತೆಯಾಗಿದ್ದವು ಇದನ್ನು ವನ್ಯಜೀವಿ ಸಂಖ್ಯಾಶಾಸ್ತ್ರದ ಪ್ರಕಾರ ವಿಶ್ಲೇಷಿಸಿದಾಗ ರಾಜ್ಯದಲ್ಲಿ 475ರಿಂದ 573 ಹುಲಿಗಳು ಇರಬಹುದು ಎಂದು ವಿಶ್ಲೇಷಿಸಲಾಗಿತ್ತು. 2022ರಲ್ಲಿ ರಾಜ್ಯದಲ್ಲಿ 435 ಹುಲಿಗಳು ಪತ್ತೆಯಾಗಿದ್ದು ಈ ಸಂಖ್ಯೆ ಇನ್ನೂ ಹೆಚ್ಚು ಆಗಬಹುದು ಎಂದು ವಿಶ್ಲೇಷಿಸಬಹುದು ಎಂದರು.

ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ 612, ಭದ್ರಾದಲ್ಲಿ 330, ಬಿಆರ್.ಟಿ.ಯಲ್ಲಿ 288, ಕಾಳಿಯಲ್ಲಿ 448, ನಾಗರಹೊಳೆಯಲ್ಲಿ 502 ಕ್ಯಾಮರಾ ಪಾಯಿಂಟ್ ಅಳವಡಿಸಲಾಗಿತ್ತು. ಇದರಲ್ಲಿ 376 ಅನನ್ಯ (ವಿಶಿಷ್ಟ) ಹುಲಿಗಳು ಪತ್ತೆಯಾಗಿವೆ ಎಂದು ವಿವರ ನೀಡಿದರು.

ಇದರಲ್ಲದೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ 80, ಬೆಳಗಾವಿ ವಿಭಾಗದಲ್ಲಿ 119, ಭದ್ರಾವತಿ ವಿಭಾಗದಲ್ಲಿ 121, ಕಾವೇರಿ ವನ್ಯಜೀವಿ ಧಾಮದಲ್ಲಿ 473, ಚಿಕ್ಕಮಗಳೂರು ವನ್ಯಜೀವಿ ಅರಣ್ಯದಲ್ಲಿ 41, ಹಳಿಯಾಳದಲ್ಲಿ 106, ಕಾರವಾರ ವಿಭಾಗದಲ್ಲಿ 135, ಕೊಪ್ಪ ವನ್ಯಜೀವಿಧಾಮದಲ್ಲಿ 50, ಕುದುರೇಮುಖ ವಿಭಾಗದಲ್ಲಿ 173, ಮಡಿಕೇರಿ (ಬ್ರಹ್ಮಗಿರಿ, ಪುಷ್ಪಗಿರಿ ಮತ್ತು ತಲಕಾವೇರಿ) ವಿಭಾಗದಲ್ಲಿ 175, ಮಲೆ ಮಹದೇಶ್ವರ ಬೆಟ್ಟದಲ್ಲಿ 432, ಮೈಸೂರು ವಿಭಾಗದಲ್ಲಿ 36, ಶಿವಮೊಗ್ಗ ವನ್ಯಜೀವಿ ಧಾಮದಲ್ಲಿ 182, ಶಿರಸಿ ವಿಭಾಗದಲ್ಲಿ 107, ವಿರಾಜಪೇಟೆ ವಿಭಾಗದಲ್ಲಿ 111, ಯಲ್ಲಾಪುರ ವಿಭಾಗದಲ್ಲಿ 94 ಸೇರಿ ರಾಜ್ಯದಲ್ಲಿ ಒಟ್ಟಾರೆ 4786 ಕ್ಯಾಮರಾ ಪಾಯಿಂಟ್ ಅಳವಡಿಸಲಾಗಿತ್ತು, ಈ ಎಲ್ಲ ಕ್ಯಾಮರಾಗಳಲ್ಲಿ 1 ಲಕ್ಷ 61ಸಾವಿರದ 53 ರಾತ್ರಿಯ ವೇಳೆ ಸಂಚಾರದ ಚಿತ್ರೀಕರಣ ಪ್ರಯತ್ನ ಮಾಡಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ನಮ್ಮ ದೇಶದಲ್ಲಿ ಇನ್ನೂ ಅರಣ್ಯ ಸುರಕ್ಷಿತವಾಗಿ ಉಳಿದಿರುವುದಕ್ಕೆ ದೇಶದ ಪ್ರಧಾನಮಂತ್ರಿಗಳಾದ್ದ ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧೀ ಅವರು ಕಾರಣ ಎಂದರೆ ತಪ್ಪಾಗಲಾರದು ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧೀ ಅವರು ನಿಜವಾದ ಪರಿಸರ ಪ್ರೇಮಿಗಳಾಗಿದ್ದರು. ಅವರು ಅರಣ್ಯ ಸಂರಕ್ಷಣಾ ಕಾಯಿದೆ, ವನ್ಯಜೀವಿ ಸಂರಕ್ಷಣಾ ಕಾಯಿದೆ, ಅರಣ್ಯ ಹಕ್ಕು ಕಾಯಿದೆಗಳನ್ನು ಜಾರಿಗೆ ತಂದಿದ್ದಷ್ಟೇ ಅಲ್ಲದೆ ಅದನ್ನು ಅನುಷ್ಠಾನಕ್ಕೆ ತಂದರು. ಇಲ್ಲವಾಗಿದ್ದರೆ, ಈ ವೇಳೆಗೆ ಅರಣ್ಯವೂ ಇರುತ್ತಿರಲಿಲ್ಲ. ಅರಣ್ಯವಾಸಿಗಳಿಗೆ ಅವರ ಹಕ್ಕೂ ದೊರಕುತ್ತಿರಲಿಲ್ಲ. ವನ್ಯಮೃಗಗಳೂ ಉಳಿಯುತ್ತಿರಲಿಲ್ಲ ಎಂದರು.

ಪ್ರಪಂಚದಲ್ಲೇ ಮೊದಲ ಬಾರಿಗೆ ಹುಲಿ ಗಣತಿ ನಡೆದಿದ್ದು ಭಾರತದಲ್ಲೇ. ಜಾರ್ಖಂಡ್‌ನ ಪಲ್ಮಾವ್ ಹುಲಿ ರಕ್ಷಿತಾರಣ್ಯದಲ್ಲಿ ಪ್ರಾಯೋಗಿಕ ಗಣತಿ ನಡೆದಿತ್ತು. 1972ರಲ್ಲಿ ವನ್ಯಜೀವಿ ಕಾಯ್ದೆ ಜಾರಿಗೆ ಬಂದ ನಂತರ 1972ರಿಂದ ಹುಲಿ ಗಣತಿಯನ್ನು ಆರಂಭಿಸಲಾಯಿತು ಮತ್ತು ಪ್ರತಿ 4 ಸಾಲಿನಲ್ಲಿ ಒಮ್ಮೆ ಗಣತಿ ಕಾರ್ಯ ನಡೆಸಲಾಗುತ್ತಿದೆ ಎಂದು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X