ಭಾರತೀಯ ಸೈನಿಕರ ಶ್ರೇಯಸ್ಸಿಗಾಗಿ ಮಸೀದಿಗಳಲ್ಲಿ ಶುಕ್ರವಾರ ವಿಶೇಷ ಪ್ರಾರ್ಥನೆ : ಝಮೀರ್ ಅಹ್ಮದ್

ಸಚಿವ ಝಮೀರ್ ಅಹ್ಮದ್ ಖಾನ್
ಬೆಂಗಳೂರು : ಪೆಹಲ್ಗಾಮ್ ದಾಳಿ ಹಿನ್ನೆಲೆಯಲ್ಲಿ ʼಆಪರೇಷನ್ ಸಿಂಧೂರʼ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತೀಯ ಸೈನಿಕರ ಪರವಾಗಿ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ವಕ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿದಂತೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ದೇಶದ ಹೆಮ್ಮೆಯ ಸೈನಿಕರ ಶ್ರೇಯಸ್ಸಿಗಾಗಿ ಹಾಗೂ ಶಕ್ತಿ ತುಂಬಲು ಶುಕ್ರವಾರದ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ಈ ಕುರಿತು ವಕ್ಫ್ ಬೋರ್ಡ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸಚಿವ ಝಮೀರ್ ಅಹ್ಮದ್ ಖಾನ್ ಅವರು ಪತ್ರ ಬರೆದು ಸೂಚನೆ ನೀಡಿದ್ದಾರೆ.
Next Story





