Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿಯ ನಡವಳಿಕೆಯಿಂದ ದೇಶದ ಸಂಸತ್...

ಬಿಜೆಪಿಯ ನಡವಳಿಕೆಯಿಂದ ದೇಶದ ಸಂಸತ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆತ್ತಲಾಗಿದೆ: ಎಚ್.ವಿಶ್ವನಾಥ್

ವಾರ್ತಾಭಾರತಿವಾರ್ತಾಭಾರತಿ20 Dec 2023 3:10 PM IST
share
ಬಿಜೆಪಿಯ ನಡವಳಿಕೆಯಿಂದ ದೇಶದ ಸಂಸತ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆತ್ತಲಾಗಿದೆ: ಎಚ್.ವಿಶ್ವನಾಥ್

ಮೈಸೂರು: ಕೇಂದ್ರದ ಬಿಜೆಪಿ ಸರ್ಕಾರದ ನಡವಳಿಕೆಯಿಂದ ದೇಶದ ಸಂಸತ್ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆತ್ತಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂಸತ್ ಭವನದೊಳಗೆ ನುಸುಳಿದ ನುಸುಳುಕೋರರಿಗೆ ಪಾಸ್ ಕೊಟ್ಟವರು ಯಾರು? ಅವರು ಮೂರು ಸುತ್ತಿನ ಬೇಹುಗಾರಿಕೆ ಬೇಧಿಸಿ ಒಳಹೋಗಿ ದಾಳಿ ನಡೆಸಿದ್ದಾರೆ ಎಂದರೆ ಎಂತಹ ಭದ್ರತೆ ಇದೆ. ಇದು ಸಂಸತ್ ಗೆ ಬರೆದ ದ್ರೋಹ, ಇದರ ಚರ್ಚೆಗೆ ಪ್ರತಿಪಕ್ಷಗಳು ಮುಂದಾರೆ ಅಮಾನತ್ತುಗೊಳಿಸಲಾಗುತ್ತದೆ. ಇದು ಯಾವ ನ್ಯಾಯ? ಎಂದು ಪ್ರಶ್ನಿಸಿದರು.

ದೇಶದ ಸಂಸತ್, ರಾಜ್ಯಸಭೆ, ವಿಧಾನಸಭೆ, ವಿಧಾನಪರಿಷತ್ ಚರ್ಚೆ ಮಾಡಲೆಂದೇ ಇರುವುದು ಅಲ್ಲಿ ಚರ್ಚೆಗೆ ಅವಕಾಶ ಮಾಡಿಕೊಡಲಿಲ್ಲ ಎಂದರೆ ಎಲ್ಲಿಗೆ ಹೋಗಬೇಕು. ಸಂಸತ್ ಭವನದೊಳಗೆ ನುಸುಳಲು ಪಾಸ್ ನೀಡಿವರು ಯಾರು. ಯಾಕೆ ಇಂತಹ ಘಟನೆ ಸಂಭವಿಸಿತು ಎಂದು ಚರ್ಚೆ ಮಾಡಲು ಮುಂದಾದ 142 ಸಂಸದರನ್ನು ಅಮಾನತುಗೊಳಿಸುವುದು ಯಾವ ನ್ಯಾಯ? ಕೂಡಲೇ ಕೇಂದ್ರ ಸರ್ಕಾರ ಅಮಾನತು ಆದೇಶವನ್ನು ಹಿಂಪಡೆದು ಸಮಾಧಾನಕರ ಚರ್ಚೆಗೆ ಅವಕಾಶ ಕಲ್ಪಿಸಬೇಕು.‌ ದೇಶದ ಜನ ದಡ್ಡರಲ್ಲ ಶೇ.75 ರಷ್ಟು ಸಾಕ್ಷರತೆಯನ್ನು ಹೊಂದಿದ್ದಾರೆ ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಹೇಳಿದರು.

ಒಬ್ಬ ಪ್ರಧಾನಮಂತ್ರಿ ಇಂತಹ ದೊಡ್ಡ ಘಟನೆ ಕುರಿತು ಬೀದಿಯಲ್ಲಿ ನಿಂತು ಉತ್ತರ ಕೊಡುವುದಲ್ಲ, ಪ್ರಜಾಪ್ರಭುತ್ವದ ಶಕ್ತಿ ಕೇಂದ್ರದಲ್ಲಿ ನಿಂತು ಉತ್ತರಕೊಡಬೇಕು. ಆದರೆ ನಮ್ಮ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಂಸದರ ಪ್ರಶ್ನೆಗಳನ್ನು ಎದುರಿಸುವ ಧೈರ್ಯವೂ ಇಲ್ಲ, ಮಾಧ್ಯಮದವರ ಮುಂದೆ ಬರುವ ತಾಕತ್ತು ಇಲ್ಲ ಎಂದು ಕಿಡಿಕಾರಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಂಸದೀಯ ವ್ಯವಾಹರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಸಂಸದರ ಅಮಾನತು ಆದೇಶವನ್ನು ಹಿಂಪಡೆದು ಚರ್ಚೆಗೆ ಅವಕಾಶ ಮಾಡಿಕೊಟ್ಟು ಸತ್ಯವನ್ನು ಜನರಿಗೆ ತಿಳಿಸುವ ಕೆಲವನ್ನು ಮಾಡಬೇಕು ಎಂದು ಒತ್ತಾಯಿಸಿದರು.

ಖರ್ಗೆ ಪ್ರಧಾನಿ ಅಭ್ಯರ್ಥಿ ಘೋಷಣೆ ಒಳ್ಳೆಯ ಬೆಳವಣಿಗೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂಡಿಯಾ ಮೈತ್ರಿ ಕೂಟ ಪ್ರಧಾನ ಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿರುವುದು ಸಂತೋಷಕರ ವಿಚಾರ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ತಿಳಿಸಿದರು.

ದೇಶದ ಉತ್ತಮ ಸಂಸದೀಯ ನಾಯಕ ರಾಜ್ಯ ಮತ್ತು ದೇಶದಲ್ಲಿ ಹಲವಾರು ಸಚಿವ ಸ್ಥಾನಗಳನ್ನು ಅಲಂಕರಿಸಿ ಉತ್ತಮವಾದ ಆಡಳಿತ ನೀಡಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಿರುವುದು ದೇಶದ ಜನತಂತ್ರ ವ್ಯವಸ್ಥೆ ಸಂತೋಷ ಪಡಲಿದೆ. ಶೋಶಿತ ಸಮುದಾಯದಿಂದ ಬಂದಂತಹ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನ ಮಂತ್ರಿಯಾಗಲಿ ಎಂದು ಹಾರೈಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X