Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಒಳಜಗಳ, ಕೇಂದ್ರದ ವೈಫಲ್ಯ ಮುಚ್ಚಿಹಾಕಲು...

ಒಳಜಗಳ, ಕೇಂದ್ರದ ವೈಫಲ್ಯ ಮುಚ್ಚಿಹಾಕಲು ಬಿಜೆಪಿಯಿಂದ ಕಲಾಪಕ್ಕೆ ಅಡ್ಡಿ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ11 Dec 2023 10:19 PM IST
share
ಒಳಜಗಳ, ಕೇಂದ್ರದ ವೈಫಲ್ಯ ಮುಚ್ಚಿಹಾಕಲು ಬಿಜೆಪಿಯಿಂದ ಕಲಾಪಕ್ಕೆ ಅಡ್ಡಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ‘ತಮ್ಮ ಪಕ್ಷದೊಳಗಿನ ಒಳಜಗಳ ಮತ್ತು ಬರಗಾಲ ಪರಿಹಾರಕ್ಕೆ ಹಣ ನೀಡದ ಕೇಂದ್ರದ ವೈಫಲ್ಯವನ್ನು ಮುಚ್ಚಿಹಾಕಿ ಜನರ ಗಮನ ಬೇರೆ ಕಡೆ ಸೆಳೆಯುವ ದುರುದ್ದೇಶದಿಂದ ಬಿಜೆಪಿ ಶಾಸಕರು ವಿಧಾನಸಭೆಯಲ್ಲಿ ಧರಣಿ ನಡೆಸಿ ಕಲಾಪಕ್ಕೆ ತಡೆಯೊಡ್ಡುತ್ತಿದ್ದಾರೆ. ಇವರಿಗೆ ರಾಜ್ಯದ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ, ಜನತೆ ರಾಜಕೀಯ ಪಕ್ಷಗಳು ಮತ್ತು ನಾಯಕರಿಗೆ ಜನತೆ ಛೀಮಾರಿ ಹಾಕುತ್ತಿರುವುದಕ್ಕೆ ಚುನಾಯಿತ ಪ್ರತಿನಿಧಿಗಳ ಇಂತಹ ಬೇಜವಾಬ್ದಾರಿ ನಡವಳಿಕೆಗಳೇ ಕಾರಣ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಸೋಮವಾರ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ‘ಜನರ ತೆರಿಗೆ ಹಣದಿಂದ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಿಸಿ ವರ್ಷಕ್ಕೊಂದು ಬಾರಿ ಅಧಿವೇಶನ ನಡೆಸುತ್ತಿರುವುದರ ಮುಖ್ಯ ಉದ್ದೇಶವೇ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುವುದಾಗಿದೆ. ಇಂತಹ ಚರ್ಚೆಗೆ ಅವಕಾಶವನ್ನೆ ಕೊಡದೆ ಇರುವ ಬಿಜೆಪಿ ಶಾಸಕರು ತಾವು ಉತ್ತರ ಕರ್ನಾಟಕದ ವಿರೋಧಿಗಳು ಎನ್ನುವುದನ್ನು ಸಾಬೀತುಪಡಿಸಿದ್ದಾರೆ ಎಂದು ಟೀಕಿಸಿದ್ದಾರೆ.

‘ರಾಜ್ಯದಲ್ಲಿ ತೀವ್ರ ಬರಗಾಲ ಇದೆ. ಸರಕಾರ ಶಕ್ತಿ ಮೀರಿ ಪರಿಹಾರ ಕಾರ್ಯವನ್ನು ನಡೆಸುತ್ತಿದೆ. ರಾಜ್ಯದ 223 ತಾಲೂಕುಗಳಲ್ಲಿ ಬರಪರಿಸ್ಥಿತಿ ಇದೆ. ಬರಪರಿಹಾರಕ್ಕಾಗಿ 18,171 ಕೋಟಿ ರೂ.ನೆರವನ್ನು ಕೇಂದ್ರ ಸರಕಾರದಿಂದ ಕೇಳಿದ್ದೇವೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ಈ ನಷ್ಟಕ್ಕೆ ಪರಿಹಾರ ನೀಡಲು 4,663 ಕೋಟಿ ರೂ.ಕೇಳಿದ್ದೇವೆ. ಸೆ. 21ರಂದು ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೆವು. ಕೇಂದ್ರದ ತಂಡ ಬಂದು ಸಮೀಕ್ಷೆ ನಡೆಸಿ, ವರದಿಯನ್ನೂ ನೀಡಿದೆ. ರಾಜ್ಯ ಸರಕಾರದ ಮನವಿಗೆ ಇಲ್ಲಿಯವರೆಗೆ ಕೇಂದ್ರ ಸ್ಪಂದಿಸಿಲ್ಲ. ನಾವು ಬರೆದ ಪತ್ರಗಳಿಗೆ ಪ್ರತಿಕ್ರಿಯೆ ಇಲ್ಲ. ಪ್ರಧಾನಿ ಭೇಟಿ ಮಾಡಲು ಅವಕಾಶ ಕೇಳಿದರೂ ಕೊಟ್ಟಿಲ್ಲ ಎಂದು ದೂರಿದ್ದಾರೆ.

ಡಬಲ್ ಎಂಜಿನ ಸರಕಾರ ಬಂದರೆ ರಾಜ್ಯದಲ್ಲಿ ಹಾಲು-ತುಪ್ಪದ ಹೊಳೆ ಹರಿಯುತ್ತದೆ ಎಂಬ ಬಿಜೆಪಿ ನಾಯಕರ ಹಸಿ ಸುಳ್ಳುಗಳನ್ನು ನಂಬಿ ಕನ್ನಡಿಗರು 25 ಮಂದಿ ಬಿಜೆಪಿ ಸದಸ್ಯರನ್ನು ಲೋಕಸಭೆಗೆ ಕಳಿಸಿದ್ದರು. ಅವರು ಇಲ್ಲಿಯ ವರೆಗೆ ಲೋಕಸಭೆಯಲ್ಲಿ ತುಟಿ ಬಿಚ್ಚಿಲ್ಲ. ವಿಧಾನಮಂಡಲದಲ್ಲಿ ಬರಗಾಲದ ಚರ್ಚೆ ನಡೆದರೆ ಕೇಂದ್ರ, ರಾಜ್ಯಕ್ಕೆ ಮಾಡುತ್ತಿರುವ ಈ ಅನ್ಯಾಯದ ವಿವರಗಳೆಲ್ಲವೂ ಹೊರ ಬಂದು ರಾಜ್ಯದ ಜನರ ಎದುರು ತಲೆತಗ್ಗಿಸುವಂತಾಗುತ್ತದೆ ಎನ್ನುವ ಕಾರಣಕ್ಕಾಗಿಯೇ ಪಿಳ್ಳೆ ನೆಪಗಳನ್ನು ಮುಂದಿಟ್ಟು ರಾಜ್ಯದ ಬಿಜೆಪಿ ಶಾಸಕರು ಧರಣಿ ನಡೆಸಿ ಕಲಾಪ ನಡೆಯದಂತೆ ತಡೆಯೊಡ್ಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

‘ಸಾಮಾನ್ಯವಾಗಿ ಆಡಳಿತ ಪಕ್ಷಗಳು ವಿಪಕ್ಷಗಳನ್ನು ಎದುರು ಹಾಕಿಕೊಳ್ಳಲು ಹಿಂದೇಟು ಹಾಕುತ್ತದೆ. ನಮ್ಮ ರಾಜ್ಯದಲ್ಲಿ ವಿಪಕ್ಷಗಳಿಗೆ ಆಡಳಿತ ಪಕ್ಷವನ್ನು ಎದುರಿಸುವ ಧೈರ್ಯವೇ ಇಲ್ಲ. ಪ್ರಧಾನಿ ಮೋದಿಯವರಂತೆ ನಾವೇನು ವಿಪಕ್ಷವನ್ನೇ ನಿರ್ನಾಮ ಮಾಡುವ ಬಗ್ಗೆ ಮಾತನಾಡುವುದಿಲ್ಲ. ಒಂದು ಸಮರ್ಥ ವಿಪಕ್ಷ ಇರಬೇಕು ಎಂದು ಬಯಸುವವರು ನಾವು. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಅನಗತ್ಯವಾದ ಧರಣಿಯನ್ನು ಕೈಬಿಟ್ಟು ಕಲಾಪದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

-

share
ವಾರ್ತಾಭಾರತಿ
ವಾರ್ತಾಭಾರತಿ
Next Story
X