Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ ಮತ್ತಷ್ಟು ಜಪಾನ್ ಹೂಡಿಕೆಗೆ...

ರಾಜ್ಯದಲ್ಲಿ ಮತ್ತಷ್ಟು ಜಪಾನ್ ಹೂಡಿಕೆಗೆ ಅಗತ್ಯ ಉಪಕ್ರಮ: ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ10 Jan 2024 10:04 PM IST
share
ರಾಜ್ಯದಲ್ಲಿ ಮತ್ತಷ್ಟು ಜಪಾನ್ ಹೂಡಿಕೆಗೆ ಅಗತ್ಯ ಉಪಕ್ರಮ: ಎಂ.ಬಿ.ಪಾಟೀಲ್

ಬೆಂಗಳೂರು: ಕರ್ನಾಟಕ ಮತ್ತು ಜಪಾನ್ ನಡುವಿನ ಸಂಬಂಧ ಮೊದಲಿನಿಂದಲೂ ರಚನಾತ್ಮಕವಾಗಿದೆ. ಇದನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ರಾಜ್ಯ ಸರಕಾರವು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಇದಕ್ಕೆ ಪೂರಕವಾಗಿ ಜಪಾನಿನ ಕಂಪೆನಿಗಳು ರಾಜ್ಯದಲ್ಲಿ ಮತ್ತಷ್ಟು ಹೆಚ್ಚಿನ ಬಂಡವಾಳ ಹೂಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಜಪಾನ್ ದೇಶದ ಸಂಸದೀಯ ನಿಯೋಗದ ಸದಸ್ಯರ ಜತೆ ಮಾತುಕತೆ ನಡೆಸಿದ ಅವರು, ರಾಜ್ಯದಲ್ಲಿ ಟೊಯೋಟಾ, ಹಿಟಾಚಿ, ಮಿತ್ಸುಬಿಶಿ, ಹೋಂಡಾ, ಮಕಿಟಾ, ಮಕಿನೋ ಸೇರಿದಂತೆ ಜಪಾನಿನ 525ಕ್ಕೂ ಹೆಚ್ಚು ಕಂಪೆನಿಗಳು ನೆಲೆ ಹೊಂದಿದ್ದು, ಕೈಗಾರಿಕಾ ಚಟುವಟಿಕೆಗಳನ್ನು ನಡೆಸುತ್ತಿವೆ ಎಂದರು.

ಹಾಗೆಯೇ, ತುಮಕೂರಿನಲ್ಲಿ ಪ್ರತ್ಯೇಕ ಜಪಾನ್ ಕೈಗಾರಿಕಾ ಟೌನ್ ಶಿಪ್ ಇದೆ. ಜೊತೆಗೆ, ಎರಡೂ ದೇಶಗಳ ನವೋದ್ಯಮಗಳ ನಡುವಿನ ನೆರವಿಗೆ ಜಪಾನ್-ಇಂಡಿಯಾ ಸ್ಟಾರ್ಟಪ್ ಹಬ್ ಎಂಬ ಆನ್‍ಲೈನ್ ವೇದಿಕೆಯೂ ಇದೆ. ತಂತ್ರಜ್ಞಾನ ಪರಿಣತಿಗೆ ಹೆಸರಾಗಿರುವ ಜಪಾನಿನ ಮತ್ತಷ್ಟು ಕಂಪೆನಿಗಳು ರಾಜ್ಯಕ್ಕೆ ಬರಬೇಕು ಎಂದು ಅವರು ಆಹ್ವಾನ ನೀಡಿದರು.

ರಾಜ್ಯವು ಇತ್ತೀಚಿನ ವರ್ಷಗಳಲ್ಲಿ ಕೃತಕ ಬುದ್ಧಿಮತ್ತೆ, ಮಶೀನ್ ಲರ್ನಿಂಗ್, ವಿದ್ಯುಚ್ಚಾಲಿತ ವಾಹನಗಳ ತಯಾರಿಕೆ ಮುಂತಾದ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದು, ಜಾಗತಿಕ ಮಟ್ಟದ ಸಂಶೋಧನಾ ಕೇಂದ್ರಗಳನ್ನೂ ಹೊಂದಿದೆ. ಜಪಾನಿನ ಹೂಡಿಕೆದಾರರು ಇವುಗಳ ಲಾಭವನ್ನು ಪಡೆದುಕೊಂಡು, ಕರ್ನಾಟಕದಲ್ಲಿಯೆ ತಮ್ಮ ಉತ್ಪಾದನಾ/ತಯಾರಿಕಾ ಚಟುವಟಿಕೆಗಳನ್ನು ಆರಂಭಿಸಬೇಕು ಎಂದು ಎಂ.ಬಿ.ಪಾಟೀಲ್ ಕೋರಿದರು.

ವಾಣಿಜ್ಯ ವಹಿವಾಟು ಮತ್ತು ವಿದೇಶಿ ನೇರ ಹೂಡಿಕೆಯಲ್ಲಿ ಎರಡೂ ದೇಶಗಳ ನಡುವೆ ಒಳ್ಳೆಯ ನಂಟಿದೆ. ಜಪಾನ್ ದೇಶವು ಭಾರತದಲ್ಲಿ ಹೂಡಿಕೆ ಮಾಡುತ್ತಿರುವ ರಾಷ್ಟ್ರಗಳ ಪೈಕಿ ಐದನೆಯ ಸ್ಥಾನದಲ್ಲಿದೆ. ರಾಜ್ಯ ಸರಕಾರವು ರೂಪಿಸಿರುವ 2020-25ರ ನಡುವಿನ ಕೈಗಾರಿಕಾ ನೀತಿಯಲ್ಲಿ ಹತ್ತು ಹಲವು ಉದ್ಯಮಸ್ನೇಹಿ ಅಂಶಗಳನ್ನು ಅಳವಡಿಸಿಕೊಳ್ಳಲಾಗಿದೆ ಎಂದು ಅವರು ಜಪಾನ್ ನಿಯೋಗಕ್ಕೆ ಮನದಟ್ಟು ಮಾಡಿಕೊಟ್ಟರು.

ಜಪಾನ್ ನಿಯೋಗದಲ್ಲಿ ಆ ದೇಶದ ವಿವಿಧ ಪಕ್ಷಗಳ ಸಂಸದರಾದ ಹೋಂಡಾ ತಾರೋ, ಕವಾಸಕಿ ಹಿದೆಸ್ತೋ, ಯಮಾಗುಚಿ ಸುಸುಮು, ಕೋಬಯಾಶಿ ಕಝುಹಿರೋ ಮತ್ತು ಬೆಂಗಳೂರಿನಲ್ಲಿರುವ ಜಪಾನ್ ಕಾನ್ಸುಲ್ ಜನರಲ್ ನಕಾನೆ ಸುಟೋಮು, ಡೆಪ್ಯುಟಿ ಕಾನ್ಸುಲ್ ಜನರಲ್ ಕಯಾ ಹೊಕುಟೋ ಇದ್ದರು. ರಾಜ್ಯ ಸರಕಾರದ ಪರವಾಗಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X