Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆರೆಸೆಸ್ಸ್ ಪ್ರೇರಣೆಯಿಂದಲೇ ದಲಿತ,...

ಆರೆಸೆಸ್ಸ್ ಪ್ರೇರಣೆಯಿಂದಲೇ ದಲಿತ, ಶೋಷಿತರಿಗೆ ಆರ್ಥಿಕ ಚೈತನ್ಯ ತಂದ 'ಮನರೇಗಾ' ಕಾಯ್ದೆ ರದ್ದು: ಕೇಂದ್ರ ಸರಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ3 Jan 2026 2:14 PM IST
share
ಆರೆಸೆಸ್ಸ್ ಪ್ರೇರಣೆಯಿಂದಲೇ ದಲಿತ, ಶೋಷಿತರಿಗೆ ಆರ್ಥಿಕ ಚೈತನ್ಯ ತಂದ ಮನರೇಗಾ ಕಾಯ್ದೆ ರದ್ದು: ಕೇಂದ್ರ ಸರಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: 2005 ರಲ್ಲಿ ಅಂದಿನ ಮನಮೋಹನ್‌ ಸಿಂಗ್‌ ನೇತೃತ್ವದ ಯುಪಿಎ ಸರ್ಕಾರವು ಜಾರಿಗೊಳಿಸಿದ್ದ ಮನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ) ಕಾಯ್ದೆಯನ್ನು ಬುಡಮೇಲು ಮಾಡಿ ʼVB G RAM Gʼ (ವಿಕಸಿತ್‌ ಭಾರತ್‌ ಗ್ಯಾರಂಟಿ ಫಾರ್‌ ರೋಜಗಾರ್‌ ಅಜೀವಿಕ್‌ ಮಿಷನ್‌ (ಗ್ರಾಮೀಣ)) ಕಾಯ್ದೆ ಎಂದು ಮೋದಿಯವರ ನೇತೃತ್ವದ ಒಕ್ಕೂಟ ಸರ್ಕಾರ ಇತ್ತೀಚಿಗೆ ನಡೆದ ಚಳಿಗಾಲದ ಅಧಿವೇಶನದಲ್ಲಿ ಬದಲಾಯಿಸಿದೆ. ಆ ಮೂಲಕ ಕಳೆದ 20 ವರ್ಷಗಳಿಂದ ದೇಶದ ಗ್ರಾಮೀಣ ಕೂಲಿಕಾರರು ಮತ್ತು ಸಣ್ಣ ರೈತರ ಜೀವನೋಪಾಯಕ್ಕೆ ಆಧಾರವಾಗಿದ್ದ ಹಾಗೂ ಉದ್ಯೋಗವನ್ನು ಸ್ಥಳೀಯವಾಗಿಯೇ ಕೇಳಿ ಪಡೆಯುವ ಹಕ್ಕು ನೀಡಿದ್ದ ಮನರೇಗಾ ಕಾಯ್ದೆಯನ್ನು, ಮೋದಿ ಸರ್ಕಾರವು ಜನರ ಜೊತೆ ಚರ್ಚೆ ಮಾಡದೆ, ರಾಜ್ಯಗಳ ಜೊತೆ ಸಮಾಲೋಚನೆ ಮಾಡದೆ, ಅಭಿಪ್ರಾಯವನ್ನೂ ಪಡೆಯದೆ ಸರ್ವಾಧಿಕಾರಿ ಧೋರಣೆಯ ಮೂಲಕ ಧ್ವಂಸ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರವು ಡಿಸೆಂಬರ್‌, 17 ರಂದು ಕೇವಲ 8 ಗಂಟೆಗಳ ಕಾಲ ಚರ್ಚೆ ಮಾಡುವ ಮೂಲಕ ಸದನವನ್ನು ಬುಲ್ಡೋಜ್‌ ಮಾಡಿ ಡಿಸೆಂಬರ್‌, 18 ರಂದು ಈ ಮನೆಹಾಳು ಕಾಯ್ದೆಯನ್ನು ಪಾಸ್‌ ಮಾಡಿಕೊಂಡಿದೆ. ಆ ಮೂಲಕ ದೇಶದ 12.16 ಕೋಟಿ ಕಾರ್ಮಿಕರನ್ನು, ಅವರಲ್ಲಿ ಶೇ.53.61 ರಷ್ಟು ಸಂಖ್ಯೆಯಲ್ಲಿದ್ದ 6.21 ಕೋಟಿ ಮಹಿಳೆಯರ ಬದುಕನ್ನು ಹಾಗೂ ಶೇ.17 ರಷ್ಟು ಪರಿಶಿಷ್ಟ ಜಾತಿ ಹಾಗೂ ಶೇ.11 ರಷ್ಟು ಪರಿಶಿಷ್ಟ ಪಂಗಡದ ನರೇಗಾ ಕೂಲಿ ಕಾರ್ಮಿಕರ ಬದುಕಿಗೆ ಬೆಂಕಿ ಇಟ್ಟಿದೆ. ಕರ್ನಾಟಕದಲ್ಲಿ 2025-26 ರಲ್ಲಿ ಉತ್ತಮ ಮಳೆಯಾದ ಸಂದರ್ಭದಲ್ಲೂ 71.18 ಲಕ್ಷ Active ನರೇಗಾ ಕೂಲಿ ಕಾರ್ಮಿಕರಿದ್ದಾರೆ. ಅದರಲ್ಲಿ 36.75 ಲಕ್ಷ (ಶೇ.51.6) ಮಹಿಳೆಯರು ಇದ್ದಾರೆ. ಈ ಎಲ್ಲರ ಉದ್ಯೋಗದ ಹಕ್ಕನ್ನು ಮೋದಿ ಸರ್ಕಾರ ನೀರು ಪಾಲು ಮಾಡಿದೆ‌. ಜನರು ನೆಮ್ಮದಿಯಿಂದ ಜೀವಿಸುವ ಯಾವುದೇ ಕಾನೂನು ಆಗಲಿ, ಕಾರ್ಯಕ್ರಮವಾಗಲಿ, ಯೋಜನೆಯಾಗಲಿ ಅದನ್ನು ಹೇಗೆ ನಾಶ ಮಾಡಬೇಕು ಎಂಬುದನ್ನು ಅಧ್ಯಯನ ಮಾಡಿ ಕೊಡುವುದೇ ಬಿಜೆಪಿಯ ಮಾರ್ಗದರ್ಶಕರಾಗಿರುವ ಆರೆಸ್ಸೆಸ್‌ ನಂತಹ ಸಂಘಟನೆಗಳ ಕೆಲಸ ಎಂದು ವಾಗ್ದಾಳಿ ನಡೆಸಿದರು.

ಹಿಂದೆ ಆಡಳಿತ ನಡೆಸಿದ್ದ ಯುಪಿಎ ಸರ್ಕಾರವು ಉದ್ಯೋಗದ ಹಕ್ಕು, ಶಿಕ್ಷಣದ ಹಕ್ಕು, ಆಹಾರದ ಹಕ್ಕು, ಅರಣ್ಯವಾಸಿಗಳ ಕಾಡಿನ ಮೇಲಿನ ಹಕ್ಕು, ಮಾಹಿತಿ ಹಕ್ಕು ಮುಂತಾದ ಜನಪರವಾದ ಕಾಯ್ದೆಗಳನ್ನು ಜಾರಿಗೆ ತಂದಿತ್ತು. ಆದರೆ ಮೋದಿ ಸರ್ಕಾರ ಸುಳ್ಳು ಪ್ರಚಾರ ಮಾಡಿ 2014 ರಲ್ಲಿ ಅಧಿಕಾರಕ್ಕೆ ಬಂದ ನಂತರ ಈ ಎಲ್ಲ ಹಕ್ಕುಗಳನ್ನು ಜನರಿಗೆ ಒದಗಿಸುವ ಕಾಯ್ದೆಗಳನ್ನು ನಿರಂತರವಾಗಿ ದುರ್ಬಲಗೊಳಿಸುತ್ತಾ, ಕೊನೆಯದಾಗಿ ಕಿತ್ತು ಹಾಕುತ್ತಾ ಬಂದಿದೆ. ಜನರ ಕಲ್ಯಾಣಕ್ಕಾಗಿ ಒಂದು ಕ್ಷಣವೂ ಯೋಜನೆ ಮಾಡದ ಜನವಿರೋಧಿ ಸರ್ಕಾರವಾಗಿರುವ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ನಿರಂತರವಾಗಿ ಕಾರ್ಪೋರೇಟ್‌ ಕಂಪನಿಗಳ ಹಿತಾಸಕ್ತಿಗೆ ಅನುಗುಣವಾಗಿ ಕೆಲಸ ಮಾಡುತ್ತಿದೆ. ದೇಶದ ಸಣ್ಣ ರೈತರು, ಕೂಲಿ ಕಾರ್ಮಿಕರು, ತಾವು ವಾಸಿಸುವ ಜಾಗದಲ್ಲಿದ್ದುಕೊಂಡೇ, ತಮ್ಮ ಸಮೀಪದ ಶಾಲೆಗಳಲ್ಲಿ ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಾ, ತಮ್ಮ ಕೃಷಿ ಕೆಲಸಗಳ ಜೊತೆಯಲ್ಲಿ ಮನರೇಗಾ ಯೋಜನೆಯಲ್ಲಿ ಕೆಲಸ ಮಾಡುವ ಮೂಲಕ ತಮ್ಮ ಕುಟುಂಬವನ್ನು ಹಾಗೂ ತಮ್ಮ ಗ್ರಾಮಗಳ ಆರ್ಥಿಕತೆಯನ್ನು ಕಟ್ಟಿ ಬೆಳೆಸುತ್ತಿದ್ದರು. ಆದರೆ, ಅವುಗಳನ್ನೆಲ್ಲ ಧ್ವಂಸ ಮಾಡಿರುವ ಮೋದಿ ಸರ್ಕಾರವು ಜನರನ್ನು ಕಾರ್ಪೊರೇಟ್‌ ಕಂಪನಿಗಳಿಗೆ ಅಗ್ಗದ ಕೂಲಿ ಆಳುಗಳನ್ನಾಗಿ ಒದಗಿಸಲು ಸಂಚು ರೂಪಿಸಿದೆ. ಅದರ ಪ್ರತಿ ಫಲವೆ ಈ ಹೊಸ ಕಾಯ್ದೆ ಎಂದು ಆರೋಪಿಸಿದರು.

ಈ ಹಿಂದೆ, ಯೋಜನೆಗಳನ್ನು ಜಾರಿ ಮಾಡುವಾಗ ಪಾರ್ಲಿಮೆಂಟಿನಲ್ಲೇ ಬಿಜೆಪಿ ವಿರೋಧಿಸಿತ್ತು. ಫುಡ್ ಗ್ಯಾರಂಟಿ ಬಿಲ್‌ ಅನ್ನು ವೋಟ್‌ ಗ್ಯಾರಂಟಿ ಬಿಲ್‌ ಎಂದು ಬಿಜೆಪಿಗರು ಗೇಲಿ ಮಾಡಿದ್ದರು ಎಂದರು.

ಸಶಕ್ತವಾದ ಭಾರತವನ್ನು ನಿರ್ಮಾಣ ಮಾಡಬೇಕು, ಗ್ರಾಮೀಣ ಆರ್ಥಿಕತೆ ಸುಧಾರಿಸಿದರೆ ದೇಶವು ಪ್ರಗತಿ ಪಥದಲ್ಲಿ ಮುನ್ನಡೆಯುತ್ತದೆ ಎಂಬ ಗಾಂಧೀಜಿಯವರ ಕನಸುಗಳನ್ನು ಪ್ರೇರಣೆಯಾಗಿಟ್ಟುಕೊಂಡು ಯುಪಿಎ ಸರ್ಕಾರವು ಯೋಜನೆಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಎಂದು ನಾಮಕರಣ ಮಾಡಿ ಸಮರ್ಥವಾಗಿ ಜಾರಿಗೊಳಿಸಿತ್ತು. ಮೋದಿ ಸರ್ಕಾರವು ಈ ಹನ್ನೊಂದೂವರೆ ವರ್ಷಗಳಲ್ಲಿ ಹಿಂದಿನ ಸರ್ಕಾರಗಳು ಜಾರಿಗೊಳಿಸಿದ್ದ ಸುಮಾರು 30 ಕ್ಕೂ ಹೆಚ್ಚು ಯೋಜನೆಗಳ ಹೆಸರುಗಳನ್ನು ಬದಲಾಯಿಸಿ ಅವುಗಳ ಕತ್ತು ಹಿಸುಕಿದೆ. ಉದಾಹರಣೆಗೆ ನಿರ್ಮಲ ಭಾರತ್‌ ಯೋಜನೆಯನ್ನು ಸ್ವಚ್ಛ ಭಾರತ್‌, ಇಂದಿರಾ ಆವಾಜ್‌ ಯೋಜನೆಯನ್ನು ಪ್ರಧಾನ ಮಂತ್ರಿ ಆವಾಜ್‌ ಯೋಜನೆ ಎಂದು ಬದಲಾಯಿಸಿತು. ದೇಶವನ್ನು ಪ್ರಗತಿಪಥದತ್ತ ಕೊಂಡೊಯ್ಯಲು ಹಿಂದಿನ ಸರ್ಕಾರಗಳು ರೂಪಿಸಿದ್ದ ಬಹುಪಾಲು ಯೋಜನೆಗಳನ್ನು ಬುಡಮೇಲು ಮಾಡಿ ಅವುಗಳನ್ನು ಹಾಳು ಮಾಡಿದ್ದೆ ಮೋದಿ ಸರ್ಕಾರ ಕಳೆದ ಹನ್ನೊಂದುವರೆ ವರ್ಷಗಳಲ್ಲಿ ಮಾಡಿದ್ದ ದೊಡ್ಡ ಸಾಧನೆ ಎಂದು ಟೀಕಿಸಿದರು.

ಉತ್ತಮವಾಗಿ ಕೆಲಸ ಮಾಡುವ ಗ್ರಾಮ ಪಂಚಾಯತಿಗಳು ವರ್ಷಕ್ಕೆ ಸರಾಸರಿ ಒಂದು ಕೋಟಿ ರೂಪಾಯಿಗಳಿಗೂ ಹೆಚ್ಚಿನ ಅನುದಾನಗಳನ್ನು ಬಳಸಿಕೊಂಡು ದೇಶದಲ್ಲಿ ಕೋಟ್ಯಂತರ ಆಸ್ತಿಗಳನ್ನು ಸೃಜನೆ ಮಾಡಿವೆ. ದೇಶದಲ್ಲಿ ಬರಗಾಲವಿದ್ದ ವರ್ಷವಾದ 2024-25 ರಲ್ಲಿ 19.28 ಕೋಟಿ ಜನ ನರೇಗಾ ಯೋಜನೆಯಲ್ಲಿ ಕೆಲಸ ಮಾಡುವ ಮೂಲಕ ತಮ್ಮ ಜೀವನವನ್ನು ಕಟ್ಟಿಕೊಂಡಿದ್ದರು. ಕರ್ನಾಟಕದಲ್ಲಿ 1.35 ಕೋಟಿ ಕಾರ್ಮಿಕರು ನರೇಗಾ ಯೋಜನೆಯ ಮೂಲಕ ತಮ್ಮ ಬದುಕು ಬೀದಿ ಪಾಲಾಗದಂತೆ ನೋಡಿಕೊಂಡಿದ್ದರು. ಈಗ ಇವರೆಲ್ಲರ ಮೇಲೆ ಮೋದಿ ಸರ್ಕಾರ ತನ್ನ ಕ್ರೂರ ಕಣ್ಣುಗಳನ್ನು ಹಾಕಿದೆ ಎಂದು ಆರೋಪಿಸಿದರು.

ಮೋದಿ ಸರ್ಕಾರವು ಜನರು ಎಲ್ಲಿ ದಂಗೆ ಏಳುತ್ತಾರೋ ಎಂದು ಹೆದರಿ ಪ್ರತಿ ದಿನವೂ ಹೊಸ ಹೊಸ ಸುಳ್ಳುಗಳನ್ನು ಹೆಣೆಯುವ ಕೆಲಸ ಮಾಡುತ್ತಿದೆ. ತಮ್ಮ ಕುರುಡು ಹಿಂಬಾಲಕರ ಸೋಷಿಯಲ್‌ ಮೀಡಿಯಾಗಳಲ್ಲಿ ಈ ಯೋಜನೆಯ ಕುರಿತು ಸುಳ್ಳು ಸುಳ್ಳಾದ ಭ್ರಮೆಗಳನ್ನು ಹುಟ್ಟಿಸಲು ಪ್ರಯತ್ನಿಸುತ್ತಿದೆ. ಆದರೆ, ಜನರು ಗೋವಿನ ಮುಖದಲ್ಲಿರುವ ವ್ಯಾಘ್ರತನವನ್ನು ಅರ್ಥ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ, ಹಿಂದೆ ರೈತರ ಆಂದೋಲನ ನಡೆದ ಮಾದರಿಯಲ್ಲೇ ಈ ದುಷ್ಟ ಕಾನೂನಿನ ವಿರುದ್ಧವೂ ಆಂದೋಲನ ಪ್ರಾರಂಭವಾಗಲಿದೆ. ಹಿಂದೆ ಉತ್ತರ ಭಾರತದ ರೈತರು ಮಾತ್ರ ಬೀದಿಗಿಳಿದಿದ್ದರು. ಈಗ ರೈತರ ಜೊತೆಯಲ್ಲಿ ಗ್ರಾಮೀಣ ಕೂಲಿಕಾರರು, ಮಹಿಳೆಯರು ಬೀದಿಗೆ ಇಳಿಯಲು ಸಜ್ಜಾಗಿದ್ದಾರೆ. ಇದನ್ನು ಆದಷ್ಟು ಶೀಘ್ರ ಮೋದಿ ಸರ್ಕಾರವು ಅರ್ಥ ಮಾಡಿಕೊಂಡು ಮೊದಲಿದ್ದ ಮನರೇಗಾ ಕಾಯ್ದೆಯನ್ನು ಇನ್ನಷ್ಟು ಸಶಕ್ತಗೊಳಿಸುವ ಮೂಲಕ ಮರುಜಾರಿಗೊಳಿಸಬೇಕು. ಈ ಹೊಸ ಕಾಯ್ದೆಯನ್ನು ರದ್ದು ಮಾಡಬೇಕೆಂದು ನಮ್ಮ ಸರ್ಕಾರವು ಆಗ್ರಹಿಸುತ್ತದೆ ಎಂದು ಹೇಳಿದರು.

ಈಗಾಗಲೇ ನಾನು 2025 ಡಿ.30 ರಂದೇ ಈ ಕಾಯ್ದೆಯು ಸಂವಿಧಾನದ ಆರ್ಟಿಕಲ್‌ 258 ಮತ್ತು 280 ಕ್ಕೆ ವಿರುದ್ಧವಾಗಿದೆ. ಜನರ ಉದ್ಯೋಗದ ಹಕ್ಕುಗಳನ್ನು ಕಸಿಯುತ್ತದೆ ಹಾಗೂ ರಾಜ್ಯಗಳು ಆರ್ಥಿಕವಾಗಿ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತವೆ. ನಿರುದ್ಯೋಗ ಪ್ರಮಾಣವನ್ನು ಹೆಚ್ಚಿಸಿದಂತಾಗುತ್ತದೆ. ವಿಕೇಂದ್ರೀಕರಣದ ಮೂಲಕ ಗ್ರಾಮ ಪಂಚಾಯತಿಗಳೇ ಫಲಾನುಭವಿಗಳನ್ನು ಆಯ್ಕೆ ಮಾಡುವುದನ್ನು ರದ್ದುಗೊಳಿಸಿ ಸಂವಿಧಾನದ 73 ನೇ ತಿದ್ದುಪಡಿಯ ಆಶಯಗಳನ್ನು ನಾಶ ಮಾಡಿದಂತಾಗುತ್ತದೆ ಎಂದು ಪ್ರತಿಭಟನಾಪೂರ್ವಕವಾಗ ಪತ್ರವನ್ನು ಬರೆದಿದ್ದೇನೆ. ಸರ್ವಾಧಿಕಾರಿ ಧೋರಣೆಯ ಮೋದಿ ಸರ್ಕಾರವು ಹಿಟ್ಲರ್‌ ಮತ್ತು ಮುಸಲೋನಿ ಸ್ವಭಾವವನ್ನು ಮೈಗೂಡಿಸಿಕೊಂಡಿರುವುದರಿಂದ ಈ ಯಾವುದನ್ನೂ ಸಹ ಅರ್ಥ ಮಾಡಿಕೊಳ್ಳುತ್ತಿಲ್ಲ. ಈ ಹೊಸ ಕಾಯ್ದೆಯ ಹೆಸರಿನಲ್ಲಿ ರಾಮನ ಹೆಸರನ್ನು ಬಳಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ರಾಮನ ಹೆಸರು ಹೇಳುತ್ತಲೇ ಇಡೀ ದೆಹಲಿಯಿಂದ ಹಿಡಿದು ಗುಜರಾತ್‌ ವರೆಗೆ ಹಬ್ಬಿದ್ದ ಅರಾವಳಿ ಪರ್ವತದ ಸಂಪತ್ತನ್ನು ದೋಚಲು ಹುನ್ನಾರ ನಡೆಸಿದ್ದಾರೆ. ಮುಗ್ಧ ಆದಿವಾಸಿಗಳು ವಾಸಿಸುತ್ತಿದ್ದ ಮಧ್ಯ ಭಾರತದ ಕಾಡುಗಳನ್ನು ಧ್ವಂಸ ಮಾಡಿ, ಅಲ್ಲಿ ಗಣಿಗಾರಿಕೆ ಮಾಡಲು ಅದಾನಿ-ಅಂಬಾನಿಯವರ ಕಾರ್ಪೊರೇಟ್‌ ಕಂಪನಿಗಳಿಗೆ ವಹಿಸಿಕೊಡಲು ಹೊರಟಿದ್ದಾರೆ. ಹಾಗಾಗಿ ಯಾವ ಕಾರಣಕ್ಕೂ ಇವರು ಜನಪರವಾದ ಆಡಳಿತ ಕೊಡಲು ಸಾಧ್ಯವೇ ಇಲ್ಲ. ನೀರು, ಗಾಳಿ, ಮಣ್ಣು, ಶಿಕ್ಷಣ, ಉದ್ಯೋಗದ ಹಕ್ಕುಗಳನ್ನು ಕಸಿದು ಲೂಟಿ ಮಾಡಲು ಹೊರಟಿದ್ದಾರೆ ಎಂದು ದೂರಿದರು.

ಅನಿವಾರ್ಯವಾಗಿ ನಾವೂ ಸಹ ಸಂವಿಧಾನದ ವ್ಯಾಪ್ತಿಯಲ್ಲಿಯೆ ಇನ್ನಷ್ಟು ತೀವ್ರವಾಗಿ ಪ್ರತಿಭಟಿಸಲು ನಿರ್ಧರಿಸಿದ್ದೇವೆ. ಆದರೆ ವೋಟ್ ಚೋರಿಯ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರವು ಕಾಂಗ್ರೆಸ್‌ ಪಕ್ಷ ಅಭಿಯಾನ ಹಮ್ಮಿಕೊಂಡಿದ್ದಾಗ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಕುತಂತ್ರ ಮಾಡಿದಂತಿದೆ.

ಆರೆಸ್ಸೆಸ್‌ ಮತ್ತು ಬಿಜೆಪಿ ಸೇರಿ ಏಕಕಾಲದಲ್ಲಿ ಶೇ.53 ರಷ್ಟಿರುವ ಮಹಿಳಾ ನರೇಗಾ ಕೂಲಿ ಕಾರ್ಮಿಕರು, ಶೇ.28 ರಷ್ಟಿರುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಕಾರ್ಮಿಕರು, 5 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ವಿಕಲಚೇತನರು ಸೇರಿದಂತೆ ಗ್ರಾಮೀಣ ಆರ್ಥಿಕತೆಯ ಆಧಾರ ಸ್ತಂಭವಾಗಿದ್ದ ನರೇಗಾ ಯೋಜನೆಯನ್ನು ಕೊಂದಿದ್ದಾರೆ. ಅದೇ ಸಂದರ್ಭದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಹೆಸರನ್ನು ತೆಗೆದು ಹಾಕುವ ಮೂಲಕ ಗೋಡ್ಸೆಯ ನಂತರ ಎರಡನೇ ಬಾರಿ ಬಿಜೆಪಿಯು ಗಾಂಧಿಯನ್ನು ಹತ್ಯೆ ಮಾಡಿದಂತಾಗಿದೆ ಎಂದು ಮಾರ್ಮಿಕವಾಗಿ ನುಡಿದರು.

ಮಹಿಳೆಯರು, ದಲಿತರು ಹಾಗೂ ಶೂದ್ರರ ಕೈಯಲ್ಲಿ ಹಣ ಇರಬಾರದು ಹಾಗೂ ಅವರು ಸಂಪೂರ್ಣ ಸೇವಕರಾಗಿ ಇರಬೇಕೆಂದು ಮನುಸ್ಮೃತಿಯು ಹೇಳುತ್ತದೆ. ಮೋದಿ ಸರ್ಕಾರವು ಮನುಸ್ಮೃತಿಯಿಂದ ಪ್ರೇರಣೆ ಪಡೆದ ಆರೆಸ್ಸೆಸ್ ನಿಂದ ಮಾರ್ಗದರ್ಶನ ಪಡೆಯುತ್ತಿರುವುದರಿಂದ ಇಂತಹ ದೇಶ ವಿರೋಧಿ, ಜನ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿದೆ. ಮಾಧ್ಯಮಗಳು ಈ ವಿವರಗಳನ್ನು ಜನರಿಗೆ ವಿವರವಾಗಿ ತಿಳಿಸಿಕೊಡುವ ಕೆಲಸ ಮಾಡಬೇಕಿದೆ. ನರೇಗಾ ಕೂಲಿ ಕಾರ್ಮಿಕರು, ರೈತರು, ಸೇರಿದಂತೆ ಸಮಸ್ತ ಗ್ರಾಮೀಣ ಪ್ರದೇಶಗಳ ಜನರು ಮೋದಿ ಸರ್ಕಾರದ ದುಷ್ಟತನವನ್ನು ಅರ್ಥಮಾಡಿಕೊಂಡು ಅದನ್ನು ಸೋಲಿಸಬೇಕಿದೆ ಎಂದು ಕರೆ ನೀಡಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X