ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಮಕ್ಕೆ ಮುಂದಾದ ಪೊಲೀಸ್ ಇಲಾಖೆ!
ಜಿಲ್ಲೆಗಳಲ್ಲಿ ದಾಖಲಾದ ಎಫ್ಐಆರ್ ಮಾಹಿತಿ ನೀಡಲು ಸೂಚನೆ

ಚಕ್ರವರ್ತಿ ಸೂಲಿಬೆಲೆ
ಬೆಂಗಳೂರು: ಯುವ ಬ್ರಿಗೇಡ್ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದ್ದು, ರಾಜ್ಯ ಪೊಲೀಸ್ ಇಲಾಖೆ, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ಎಫ್ಐಆರ್ ಹಾಗೂ ತೆಗೆದುಕೊಂಡ ಕ್ರಮದ ಬಗ್ಗೆ ಮಾಹಿತಿ ನೀಡುವಂತೆ ಆದೇಶಿಸಿದೆ.
2022ರಿಂದ 2025ರ ಮೇ 31ರವರೆಗೆ ದಾಖಲಾಗಿರುವ ಪ್ರಕರಣಗಳ ಮಾಹಿತಿ ಹಾಗೂ ಎಫ್ಐಆರ್ ಪ್ರತಿಗಳನ್ನು ಬೆಂಗಳೂರಿನಲ್ಲಿರುವ ಪೊಲೀಸ್ ಪ್ರಧಾನ ಕಚೇರಿಗೆ ಕಳುಹಿಸುವಂತೆ ಆದೇಶಿಸಲಾಗಿದೆ.
ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರು ಬರೆದ ಪತ್ರದ ಮೇರೆಗೆ ಎಫ್ಐಆರ್ ಪ್ರತಿ, ತೆಗೆದುಕೊಂಡ ಕ್ರಮಗಳು ಹಾಗೂ ಪ್ರಸ್ತುತ ಹಂತದ ಮಾಹಿತಿ ಒದಗಿಸುವಂತೆ ಎಲ್ಲ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆದೇಶದಲ್ಲಿ ಸೂಚಿಸಲಾಗಿದೆ. ಇದೀಗ ಈ ಪತ್ರವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Next Story





