Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆಜಿಎಫ್‍ನಲ್ಲಿ ಇಂಟಿಗ್ರೇಟೆಡ್...

ಕೆಜಿಎಫ್‍ನಲ್ಲಿ ಇಂಟಿಗ್ರೇಟೆಡ್ ಟೌನ್‍ಶಿಪ್ | ಡಿಪಿಆರ್ ಸಿದ್ಧಪಡಿಸಲು ಸಚಿವ ಬೈರತಿ ಸುರೇಶ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ4 Dec 2024 8:55 PM IST
share
ಕೆಜಿಎಫ್‍ನಲ್ಲಿ ಇಂಟಿಗ್ರೇಟೆಡ್ ಟೌನ್‍ಶಿಪ್ | ಡಿಪಿಆರ್ ಸಿದ್ಧಪಡಿಸಲು ಸಚಿವ ಬೈರತಿ ಸುರೇಶ್ ಸೂಚನೆ

ಬೆಂಗಳೂರು : ಕೋಲಾರ ಜಿಲ್ಲೆಯ ಕೆ.ಜಿ.ಎಫ್ ನಲ್ಲಿ ಇಂಟಿಗ್ರೇಟೆಡ್ ಟೌನ್‍ಶಿಪ್ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿ(ಡಿಪಿಆರ್)ಯನ್ನು ಸಿದ್ಧಪಡಿಸುವಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸೂಚನೆ ನೀಡಿದ್ದಾರೆ.

ಬುಧವಾರ ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧಿಕಾರಿಗಳು, ಕೆಜಿಎಫ್ ಮತ್ತು ಬಂಗಾರಪೇಟೆ ತಹಶೀಲ್ದಾರ್ ಹಾಗೂ ಕೆಜಿಎಫ್ ನಗರಾಭಿವೃದ್ಧಿ ಆಯುಕ್ತರು ಹಾಗೂ ನಗರ ಯೋಜನಾ ಆಯುಕ್ತರನ್ನು ಒಳಗೊಂಡಂತೆ ಸಭೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್‍ನಲ್ಲಿ ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕೋಲಾರ ಚಿನ್ನದ ಗಣಿ ಪ್ರದೇಶ(ಕೆ.ಜಿ.ಎಫ್), ಬಳ್ಳಾರಿ ಮತ್ತು ತುಮಕೂರಿನ ವಸಂತ ನರಸಾಪುರದಲ್ಲಿ ಇಂಟಿಗ್ರೇಟೆಡ್ ಟೌನ್‍ಶಿಪ್ ನಿರ್ಮಾಣದ ಬಗ್ಗೆ ಘೋಷಿಸಿದ್ದಾರೆ. ಅಂತೆಯೇ ಕೆಜಿಎಫ್ ಪಟ್ಟಣದಲ್ಲಿ ಇಂಟಿಗ್ರೇಟೆಡ್ ಟೌನ್‍ಶಿಪ್ ನಿರ್ಮಾಣ ಮಾಡಲು ಕಾರ್ಯಸಾಧ್ಯತೆಯ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸುವಂತೆ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ಅವರು ಸೂಚನೆ ನೀಡಿದರು.

ಕೆಜಿಎಫ್ ಇಂಟಿಗ್ರೇಟೆಡ್ ಟೌನ್‍ಶಿಪ್ ನಿರ್ಮಾಣಕ್ಕಾಗಿ ಬಿಇಎಂಎಲ್ ಸುಪರ್ಧೀಯಲ್ಲಿರುವ ರಾಜ್ಯ ಸರಕಾರದ ಸುಮಾರು 960 ಎಕರೆ ಜಮೀನು ಇದ್ದು, ಇದರಲ್ಲಿ ಕೆ.ಜಿ.ಎಫ್ ತಾಲೂಕಿನಲ್ಲಿ ಬಂಗಾರದ ಗಣಿ ಗ್ರಾಮದ ಸರ್ವೆ ನಂ.3 ರಲ್ಲಿ 294 ಎಕರೆ ಜಾಗವನ್ನು ಗುರುತಿಸಲಾಗಿದೆ. ಬಿಇಎಂಎಲ್ ಸುಪರ್ಧೀಯಲ್ಲಿದ್ದ ಕೆಲವು ಎಕರೆ ಜಾಗವನ್ನು ನಗರಾಭಿವೃದ್ಧಿ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಉಳಿದ ಜಮೀನನ್ನು ಪಡೆಯಲು ಕ್ರಮ ವಹಿಸುವಂತೆ ಬೈರತಿ ಸುರೇಶ್ ಸೂಚಿಸಿದರು.

ಚೆನೈ-ಬೆಂಗಳೂರು ಎಕ್ಸ್‌ ಪ್ರೆಸ್ ಹೆದ್ದಾರಿ ಕೆ.ಜಿ.ಎಫ್ ಮೂಲಕ ಹಾದು ಹೋಗಿದ್ದು, ಇಂಟಿಗ್ರೇಟೆಡ್ ಟೌನ್‍ಶಿಪ್ ನಿರ್ಮಾಣ ಮಾಡಲು ಉದ್ದೇಶಿಸಿರುವ ಜಾಗದಿಂದ 2.5 ಕಿ.ಮೀ ಅಂತರದಲ್ಲಿದೆ. ಎಕ್ಸ್‌ ಪ್ರೆಸ್ ಹೆದ್ದಾರಿಯಿಂದ ಟೌನ್‍ಶಿಪ್‍ಗೆ ನೇರ ಸಂಪರ್ಕ ಕಲ್ಪಿಸಲು ಸಾಧ್ಯವೇ ಎಂಬುವುದನ್ನು ಪರಿಶೀಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ತಿಳಿಸಿದರು.

ಎಕ್ಸ್‌ ಪ್ರೆಸ್ ಹೆದ್ದಾರಿಯ ಮೂಲಕ ಟೌನ್‍ಶಿಪ್‍ಗೆ ಗೆ ನೇರ ರಸ್ತೆ ಕಲ್ಪಿಸಲು ಸಾಧ್ಯವಾಗದಿದ್ದಲ್ಲಿ, ಸರ್ವಿಸ್ ರಸ್ತೆ, ಎಲಿವೇಟೆಡ್ ರಸ್ತೆ ಅಥವಾ ಮ್ಯಾಜಿಕ್ ಬಾಕ್ಸ್ ಮೂಲಕ ರಸ್ತೆ ನಿರ್ಮಾಣ ಮಾಡಲು ಸಾಧ್ಯವಿದೆಯೇ ಎನ್ನುವುದನ್ನು ಸಮೀಕ್ಷೆ ಮಾಡಿ ಅದಷ್ಟು ಬೇಗ ವರದಿ ನೀಡುವಂತೆ ಕೆ.ಜಿ.ಎಫ್ ನಗರ ಯೋಜನಾ ಪ್ರಾಧಿಕಾರದ ಆಯುಕ್ತರಿಗೆ ಬೈರತಿ ಸುರೇಶ್ ಸೂಚಿಸಿದರು.

ಟೌನ್‍ಶಿಪ್ ನಿರ್ಮಾಣ ಮಾಡಲು ತಗಲುವ ವೆಚ್ಚದ ಬಗ್ಗೆ ಡಿಪಿಆರ್ ಅನ್ನು ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಮೂಲಕ ನೀಡುವಂತೆ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ಸೂಚಿಸಿದ ಅವರು, ಇದಕ್ಕಾಗಿ ಖಾಸಗಿ ಕಂಪನಿಗಳನ್ನು ಆಹ್ವಾನಿಸಲು ಟೆಂಡರ್ ಕರೆಯಲು ತಿಳಿಸಿದರು.

ವಸತಿ ಯೋಜನೆ, ಕೈಗಾರಿಕೆಗಳು, ಆರೋಗ್ಯ ಘಟಕಗಳು, ಶೈಕ್ಷಣಿಕ ಸಂಸ್ಥೆಗಳು, ವಾಣಿಜ್ಯ ಮುಂಗಟ್ಟುಗಳು, ಬ್ಯಾಂಕ್‍ಗಳು, ಉದ್ಯಾನವನ, ಮನೋರಂಜನ ತಾಣಗಳು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ, ಸದರಿ ಯೋಜನೆಯಿಂದಾಗಿ ಸ್ಥಳೀಯರಿಗೆ ಉದ್ಯೋಗ ಅವಕಾಶ ಮತ್ತು ಉತ್ತಮ ವಸತಿ ಯೋಜನೆಯ ವಿಭಿನ್ನ ಹಾಗೂ ವಿಶಿಷ್ಟವಾದ ಟೌನ್‍ಶಿಪ್ ಅನ್ನು ಕೆ.ಜಿ.ಎಫ್ ನಲ್ಲಿ ನಿರ್ಮಾಣ ಮಾಡಲು ನಗರಾಭಿವೃದ್ಧಿ ಇಲಾಖೆ ಮುಂದಾಗಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ಅಧ್ಯಕ್ಷರು ಹಾಗೂ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಎಂ.ದೀಪಾ, ಕೆ.ಯು.ಐ.ಡಿ.ಎಫ್.ಸಿ ವ್ಯವಸ್ಥಾಪಕ ನಿರ್ದೇಶಕ ಬಿ. ಶರತ್, ಮುಖ್ಯ ಅಭಿಯಂತರ ನಂದೀಶ್ ಕುಮಾರ್, ಬಂಗಾರಪೇಟೆ ಮತ್ತು ಕೆ.ಜಿ.ಎಫ್ ತಹಶೀಲ್ದಾರ್, ಕೆ.ಜಿ.ಎಫ್ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಸೇರಿದಂತೆ ಕೆಲ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X