Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತೀವ್ರಗೊಂಡ ಕಾವೇರಿ ಹೋರಾಟ: ರಾಜ್ಯದ...

ತೀವ್ರಗೊಂಡ ಕಾವೇರಿ ಹೋರಾಟ: ರಾಜ್ಯದ ಹಲವೆಡೆ ಪ್ರತಿಭಟನೆ, ವಿಧಾನಸೌಧ ಮುತ್ತಿಗೆಗೆ ಯತ್ನ

ವಾರ್ತಾಭಾರತಿವಾರ್ತಾಭಾರತಿ21 Sept 2023 10:36 PM IST
share
ತೀವ್ರಗೊಂಡ ಕಾವೇರಿ ಹೋರಾಟ: ರಾಜ್ಯದ ಹಲವೆಡೆ ಪ್ರತಿಭಟನೆ, ವಿಧಾನಸೌಧ ಮುತ್ತಿಗೆಗೆ ಯತ್ನ

ಬೆಂಗಳೂರು, ಸೆ.21: ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸಬಾರದು ಎಂದು ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆಯ(ಟಿ. ನಾರಾಯಣಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ನಂತರ ಬಿಡುಗಡೆಗೊಳಿಸಿದರು.

ತಮಿಳುನಾಡಿಗೆ ನೀರು ಹರಿಸುವುದನ್ನು ಒತ್ತಾಯಿಸಿ ಗುರುವಾರ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಗಾಂಧಿನಗರದಿಂದ ವಿಧಾನಸೌಧದವರೆಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. 100ಕ್ಕೂ ಹೆಚ್ಚು ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಗಾಂಧಿನಗರದಲ್ಲಿರುವ ಕರವೇ ಕಚೇರಿಯಿಂದ ವಿಧಾನಸೌಧದತ್ತ ಮೆರವಣಿಗೆಯಲ್ಲಿ ಹೊರಟಿದ್ದ ಕಾರ್ಯಕರ್ತರನ್ನು ಗಾಂಧಿ ಪ್ರತಿಮೆ ವೃತ್ತದಲ್ಲೇ ಪೊಲೀಸರು ತಡೆದು ನಿಲ್ಲಿಸಿದರು. ‘ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿಯಲ್ಲಿದೆ. ಪ್ರತಿಭಟನೆಗೂ ಅವಕಾಶವಿಲ್ಲ. ಹೀಗಾಗಿ, ಮೆರವಣಿಗೆ ಕೈ ಬಿಟ್ಟು ವಾಪಸು ಹೋಗಿ’ ಎಂದು ಪೊಲೀಸರು ಎಚ್ಚರಿಸಿದರು.

ಅದಕ್ಕೆ ಒಪ್ಪದ ಕಾರ್ಯಕರ್ತರು, ಸ್ಥಳದಲ್ಲಿ ಸಾರ್ವಜನಿಕರ ವಾಹನಗಳ ಸಂಚಾರ ತಡೆದು ಪ್ರತಿಭಟನೆಗೆ ಮುಂದಾದರು. ಬ್ಯಾರಿಕೇಡ್ ಹಾಗೂ ಪೊಲೀಸರನ್ನು ತಳ್ಳಿ ಮುಂದಕ್ಕೆ ಹೋಗಲು ಯತ್ನಿಸಿದರು. ಇದೇ ಸಂದರ್ಭದಲ್ಲಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ನೂಕುನುಗ್ಗಲು ಉಂಟಾಯಿತು.

ಇದೇ ಸಂದರ್ಭದಲ್ಲಿ ಪೊಲೀಸರು, ಟಿ. ನಾರಾಯಣಗೌಡ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಎಲ್ಲರನ್ನೂ ಬಿಎಂಟಿಸಿ ಬಸ್‍ಗಳಲ್ಲಿ ನಗರ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಮೈದಾನಕ್ಕೆ ಕರೆದೊಯ್ದರು. ಕೆಲ ಗಂಟೆಗಳ ಬಳಿಕ ಎಲ್ಲರನ್ನೂ ಬಿಡುಗಡೆ ಮಾಡಿದರು. ‘ಕರ್ನಾಟಕ ಮತ್ತು ಕಾವೇರಿ ಕಣಿವೆ ಪ್ರದೇಶದಲ್ಲಿ ತೀವ್ರ ಬರಗಾಲವಿದೆ. ಇಂಥ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸಿದರೆ, ಜನರಿಗೆ ಸಂಕಷ್ಟ ಎದುರಾಗಲಿದೆ. ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ನೀರು ಹರಿಸಬಾರದು. ಜನರ ಆಗ್ರಹವನ್ನು ಧಿಕ್ಕರಿಸಿ ನೀರು ಹರಿಸಿದರೆ, ಗಂಭೀರ ಸ್ವರೂಪದ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಕರವೇ ಕಾರ್ಯಕರ್ತರು ಎಚ್ಚರಿಸಿದರು.

ವಿವಿಧೆಡೆ ಪ್ರತಿಭಟನೆ

ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಸರ್ವೋಚ್ಛ ನ್ಯಾಯಾಲಯ ನಿರ್ದೇಶನ ನೀಡಿರುವುದನ್ನು ಖಂಡಿಸಿ ಗುರುವಾರ ಮಂಡ್ಯ, ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ ನಡೆಯಿತು.

ಮಂಡ್ಯ ಬಂದ್‍ಗೆ ಕರೆ

ಸುಪ್ರೀಂ ಕೋರ್ಟ್ ಆದೇಶಕ್ಕೆ ಮಂಡ್ಯ ಜಿಲ್ಲಾ ʻರೈತ ಹಿತರಕ್ಷಣಾ ಸಮಿತಿʻ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸೆ.23ರಂದು ಮಂಡ್ಯ ಬಂದ್‍ಗೆ ಕರೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X