ಕುತೂಹಲ ಮೂಡಿಸಿದ ಡಿ.ಕೆ ಶಿವಕುಮಾರ್- ಬಿ.ಕೆ. ಹರಿಪ್ರಸಾದ್ ಭೇಟಿ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಭೇಟಿ ಸದ್ಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಮಂಗಳವಾರ ರಾತ್ರಿ ಭೇಟಿಯಾದ ಉಭಯ ನಾಯಕರು ಕೆಲ ಕಾಲ ಮಾತುಕತೆ ನಡೆಸಿದ್ದಾರೆನ್ನಲಾಗಿದೆ.
ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿ.ಕೆ. ಹರಿಪ್ರಸಾದ್ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದರು.
ಈಡಿಗ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದ್ದ ಹರಿಪ್ರಸಾದ್, ''ನನಗೆ ಸಿಎಂ ಮಾಡುವುದೂ ಗೊತ್ತು. ಅಧಿಕಾರದಿಂದ ಇಳಿಸುವುದೂ ಗೊತ್ತು'' ಎಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
Next Story





