Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಒಳಮೀಸಲಾತಿಗೆ ಆಯೋಗ ರಚನೆʼ ವಿಳಂಬ ನೀತಿ...

ʼಒಳಮೀಸಲಾತಿಗೆ ಆಯೋಗ ರಚನೆʼ ವಿಳಂಬ ನೀತಿ ಅಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

"ಒಳಮೀಸಲಾತಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸೂಕ್ತ ಅಂಕಿ-ಅಂಶಗಳು ಅಗತ್ಯ"

ವಾರ್ತಾಭಾರತಿವಾರ್ತಾಭಾರತಿ31 Oct 2024 3:22 PM IST
share
ʼಒಳಮೀಸಲಾತಿಗೆ ಆಯೋಗ ರಚನೆʼ ವಿಳಂಬ ನೀತಿ ಅಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಒಳಮೀಸಲಾತಿ ಕುರಿತು 3 ದಶಕಗಳ ನಿರಂತರ ಬೇಡಿಕೆ, ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿಯನ್ನು ಕಲ್ಪಿಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಪರಿಶಿಷ್ಟ ಜಾತಿಗಳಲ್ಲಿ 101 ಒಳ ಪಂಗಡಗಳಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ವೈಜ್ಞಾನಿಕವಾಗಿ ಒಳಮೀಸಲಾತಿಯನ್ನು ಜಾರಿಗೊಳಿಸಲು ಸರಕಾರ ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟನೆ ನೀಡಿರುವ ಅವರು, ʼರಾಜ್ಯ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಕಮಿಷನ್‌ ಆಫ್‌ ಇನ್‌ಕ್ವೈರಿ ಅಕ್ಟ್‌ 1952 ಅನ್ವಯ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ. ಸದರಿ ಆಯೋಗವು ಎರಡು ತಿಂಗಳ ಒಳಗಾಗಿ ವರದಿ ಸಲ್ಲಿಸುವ ಷರತ್ತು ವಿಧಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಂದಿನ ತೀರ್ಮಾನದವರೆಗೆ ರಾಜ್ಯ ಸರಕಾರದ ಅಧೀನದ ಸಿವಿಲ್‌ ಸೇವೆಗಳಲ್ಲಿನ ಹಾಗೂ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸದಿರುವ ನಿರ್ಧಾರವನ್ನು ಸಹ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ತೆಲಂಗಾಣ ಸರಕಾರ ಸಹ ಒಳಮೀಸಲಾತಿ ಜಾರಿ ಸಂಬಂಧ ಈಗಾಗಲೇ ಇದೇ ಮಾದರಿಯಲ್ಲಿ ಒಂದು ಆಯೋಗ ರಚನೆ ಮಾಡಿದೆ. ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಒಳಮೀಸಲಾತಿಯನ್ನು ವೈಜ್ಞಾನಿಕವಾಗಿ, ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸೂಕ್ತ ಅಂಕಿ ಅಂಶಗಳ ಅಗತ್ಯವಿರುತ್ತದೆ. ಈ ಅಂಕಿ ಅಂಶಗಳನ್ನು ವೈಜ್ಞಾನಿಕವಾಗಿ ನಿರ್ಧರಿಸಲು ರಾಜ್ಯ ಸರಕಾರವು ಆಯೋಗವನ್ನು ರಚನೆ ಮಾಡಲು ನಿರ್ಧರಿಸಿದೆ. ಆಯೋಗವು ನಿಗಧಿತ ಗಡುವಿನೊಳಗೆ ವರದಿಯನ್ನು ಸಲ್ಲಿಸಲು ಬೇಕಾದ ಅಗತ್ಯ ಕ್ರಮಗಳನ್ನು ಸರಕಾರವು ತೆಗೆದುಕೊಳ್ಳಲಿದೆ. ಆಯೋಗದ ವರದಿ ಬಂದ ತಕ್ಷಣ ಒಳಮೀಸಲಾತಿಯನ್ನು ಜಾರಿಗೊಳಿಸಲು ಕ್ರಮವಹಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ,

ಒಳಮೀಸಲಾತಿ ನೀಡುವುದು ಸಂವಿಧಾನ ಬದ್ಧವಾದ ಕ್ರಮ ಎಂದು ಸುಪ್ರೀಂಕೋರ್ಟ್‌ ಇತ್ತೀಚೆಗೆ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಒಳ ಮೀಸಲಾತಿ ಜಾರಿಗೊಳಿಸುವ ಕ್ರಾಂತಿಕಾರಿ ನಿರ್ಣಯ ಕೈಗೊಂಡಿದೆ. ಸಮರ್ಪಕವಾಗಿ, ವೈಜ್ಞಾನಿಕವಾಗಿ ಹಾಗೂ ವಿವಾದಗಳಿಗೆ ಆಸ್ಪದ ನೀಡದಂತೆ ಒಳ ಮೀಸಲಾತಿಯನ್ನು ಅನುಷ್ಠಾನಗೊಳಿಸಬೇಕೆಂಬ ಉದ್ದೇಶದಿಂದ ಸರಕಾರ ಆಯೋಗ ರಚಿಸಿದ್ದು, ಇದರಲ್ಲಿ ಯಾವುದೇ ವಿಳಂಬ ನೀತಿ ಅಥವಾ ಕಾಲಹರಣ ತಂತ್ರ ಇರುವುದಿಲ್ಲ. ಸಾಮಾಜಿಕ ನ್ಯಾಯದ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರಕಾರ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X