Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಒಳಮೀಸಲಾತಿʼ ವಿಶೇಷ ಸಚಿವ ಸಂಪುಟ...

ʼಒಳಮೀಸಲಾತಿʼ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ; ಯಾರಿಗೆ ಎಷ್ಟು?

ವಾರ್ತಾಭಾರತಿವಾರ್ತಾಭಾರತಿ24 April 2026 6:03 PM IST
share
ʼಒಳಮೀಸಲಾತಿʼ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ; ಯಾರಿಗೆ ಎಷ್ಟು?

ಬೆಂಗಳೂರು : ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15ರಷ್ಟು ಮೀಸಲಾತಿಯಲ್ಲಿ ಎಡಗೈ ಸಮುದಾಯಕ್ಕೆ ಶೇ.5.25, ಬಲಗೈ ಸಮುದಾಯಕ್ಕೆ ಶೇ.5.25 ಹಾಗೂ ಭೋವಿ, ಲಂಬಾಣಿ ಸೇರಿದಂತೆ ಇತರ ಸ್ಪೃಶ್ಯ ಸಮುದಾಯಗಳಿಗೆ ಶೇ.4.5ರಷ್ಟು ಹಂಚಿಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟದ ವಿಶೇಷ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಶುಕ್ರವಾರ ವಿಶೇಷ ಸಚಿವ ಸಂಪುಟ ಸಭೆಯ ಬಳಿಕ ಸಂಪುಟದ ಸಹದ್ಯೋಗಿಗಳೊಂದಿಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಳ ಮೀಸಲಾತಿಗೆ ಸಂಬಂಧಿಸಿದಂತೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ತಾಂತ್ರಿಕ ಸಮಿತಿ ಮಾಡಬೇಕೆಂದು ಕಳೆದ ಸಂಪುಟ ಸಭೆಯಲ್ಲಿ ತೀರ್ಮಾನ ಆಗಿತ್ತು. ಆ ಸಮಿತಿ ಇಂದು ತನ್ನ ವರದಿ ನೀಡಿದೆ ಎಂದರು.

ವರದಿಯಲ್ಲಿ ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15ರಷ್ಟು ಮೀಸಲಾತಿಯಲ್ಲಿ ಎಡಗೈ ಸಮುದಾಯಕ್ಕೆ ಶೇ.5.3, ಬಲಗೈ ಸಮುದಾಯಕ್ಕೆ ಶೇ.5.3 ಹಾಗೂ ಇತರರಿಗೆ ಶೇ.4.4 ಹಂಚಿಕೆ ಮಾಡುವಂತೆ ಶಿಫಾರಸ್ಸು ಮಾಡಲಾಗಿತ್ತು. ಆದರೆ, ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ಮೀಸಲಾತಿ ಪ್ರಮಾಣವನ್ನು ಶೇ.5.25, 5.25 ಹಾಗೂ 4.5 ಹಂಚಿಕೆ ಮಾಡಲು ಸರ್ವಾನುಮತದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಬೇಕು ಎಂದು ಹಲವು ದಶಕಗಳಿಂದ ಹೋರಾಟ ನಡೆಯುತ್ತಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷದ ವತಿಯಿಂದ ಚಿತ್ರದುರ್ಗದಲ್ಲಿ ಪರಿಶಿಷ್ಟರ ಸಮಾವೇಶ ಮಾಡಿ, ಒಳ ಮೀಸಲಾತಿ ಜಾರಿ ಮಾಡುವ ಕುರಿತು ಸರ್ವಾನುಮತದ ತೀರ್ಮಾನ ಮಾಡಿದೆವು ಎಂದು ಹೇಳಿದರು.

ಒಳ ಮೀಸಲಾತಿ ನೀಡುವ ಭರವಸೆಯನ್ನು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲೂ ಸೇರಿಸಲಾಗಿತ್ತು. 2024ರ ಆ.1ರಂದು ಸುಪ್ರೀಂಕೋರ್ಟ್‍ನ 7 ನ್ಯಾಯಮೂರ್ತಿಗಳ ಪೀಠವು ಒಳ ಮೀಸಲಾತಿಗೆ ಸಂವಿಧಾನ ವಿರೋಧವಿಲ್ಲ ಎಂದು ತೀರ್ಪು ನೀಡಿತು. ಅದರ ಆಧಾರದಲ್ಲಿ ನಮ್ಮ ಸರಕಾರ ನ್ಯಾ.ನಾಗಮೋಹನ್ ದಾಸ್ ನೇತೃತ್ವದಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿ ವರದಿ ಪಡೆದು, ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಕಲ್ಪಿಸುವ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಮುಖ್ಯಮಂತ್ರಿ ತಿಳಿಸಿದರು.

ನಾಗಮೋಹನ್ ದಾಸ್ ಆಯೋಗವು ಪರಿಶಿಷ್ಟ ಜಾತಿಗಳನ್ನು ಎ, ಬಿ, ಸಿ, ಡಿ ಎಂದು ವರ್ಗೀಕರಣ ಮಾಡಿ ಕ್ರಮವಾಗಿ ಶೇ.6, 5, 4, 1 ಪ್ರಮಾಣದಲ್ಲಿ ಮೀಸಲಾತಿ ಹಂಚಲು ಶಿಫಾರಸ್ಸು ಮಾಡಿತ್ತು. ಆದರೆ, ಸಚಿವ ಸಂಪುಟವು ಅದನ್ನು ಎ, ಬಿ ಮತ್ತು ಸಿ ವರ್ಗ ಎಂದು ಪರಿಗಣಿಸಿ, ಮೀಸಲಾತಿಯನ್ನು ಶೇ.6, 6, 5ರಂತೆ ಹಂಚಲು ನಿರ್ಧಾರ ಮಾಡಿತು ಎಂದು ಸಿದ್ದರಾಮಯ್ಯ ಹೇಳಿದರು.

ಆನಂತರ, ಕಾನೂನು ಮಾಡಿ, ರಾಜ್ಯಪಾಲರು ಅಂಕಿತ ಹಾಕಿದರು. ಆದರೆ ರೋಸ್ಟರ್ ಬಿಂದುವಿನಲ್ಲಿ ಗೊಂದಲ ನಿರ್ಮಾಣವಾಗಿ, ಅಲೆಮಾರಿ ಸಮುದಾಯ ನ್ಯಾಯಾಲಯದ ಮೊರೆ ಹೋಯಿತು. ನಾಗಮೋಹನ್ ದಾಸ್ ಆಯೋಗವು ಎಸ್.ಸಿ(ಶೇ.17), ಎಸ್.ಟಿ(ಶೇ.7) ಮೀಸಲಾತಿಯನ್ನು ಶೇ.24ಕ್ಕೆ ಹೆಚ್ಚಿಸಿದ ಪರಿಣಾಮ, ಒಟ್ಟಾರೆ ಮೀಸಲಾತಿಯು ಶೇ.56ಕ್ಕೆ ಏರಿಕೆಯಾಗಿತ್ತು. ಆದರೆ, ನ್ಯಾಯಾಲಯವು ಮೀಸಲಾತಿ ಪ್ರಮಾಣ ಶೇ.50 ಮೀರಬಾರದು ಎಂದು ಸೂಚಿಸಿದೆ ಎಂದು ಅವರು ತಿಳಿಸಿದರು.

ಈ ಹಿನ್ನೆಲೆಯಲ್ಲಿ ಮಾ.27ರಂದು ವಿಶೇಷ ಸಚಿವ ಸಂಪುಟ ಸಭೆ ಕರೆದು ಚರ್ಚೆ ಮಾಡಲು ತೀರ್ಮಾನಿಸಲಾಗಿತ್ತು. ಆದರೆ, ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣಕ್ಕಾಗಿ ಸಭೆ ಮಾಡಲು ಆಗಿರಲಿಲ್ಲ. ಎ.16ರಂದು ಸಚಿವ ಸಂಪುಟ ಸಭೆಯಲ್ಲಿ ಎ.24ರಂದು ವಿಶೇಷ ಸಚಿವ ಸಂಪುಟ ಸಭೆ ಕರೆಯಲು ನಿರ್ಧರಿಸಲಾಯಿತು ಎಂದು ಸಿದ್ದರಾಮಯ್ಯ ಹೇಳಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಭರವಸೆಯನ್ನು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗಿತ್ತು. ಇಡೀ ದೇಶದಲ್ಲಿ ಎಲ್ಲ ರಾಜ್ಯಗಳಲ್ಲೂ ಒಳ ಮೀಸಲಾತಿಯ ಬೇಡಿಕೆ ಇದೆ. ಹರಿಯಾಣ, ಪಂಜಾಬ್, ತೆಲಂಗಾಣ, ಆಂಧ್ರಪ್ರದೇಶದಲ್ಲಿ ಒಳ ಮೀಸಲಾತಿ ನೀಡಿದ್ದಾರೆ. ರಾಜ್ಯದಲ್ಲಿ 101 ಸಮುದಾಯಗಳನ್ನು ಮನವೊಲಿಸಿ ಕೈಗೊಂಡಿರುವ ಈ ತೀರ್ಮಾನ ಇಡೀ ದೇಶಕ್ಕೆ ಮಾದರಿಯಾದದ್ದು ಎಂದು ತಿಳಿಸಿದರು.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, ಇದು ರಾಜ್ಯದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಬೇಕಾದ ದಿನ. 40 ವರ್ಷಗಳ ಹೋರಾಟಕ್ಕೆ ಇಂದು ನ್ಯಾಯ ಸಿಕ್ಕಿದೆ. ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಈ ತೀರ್ಮಾನ ಮಹತ್ವದ್ದಾಗಿದೆ. ಬಸವಣ್ಣವರ ಸಮಾನತೆ ತತ್ವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯರೂಪಕ್ಕೆ ತಂದಿದ್ದಾರೆ. ರಾಜ್ಯದ 101 ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಎಡಗೈ-ಬಲಗೈ ವಿವಾದವು ಇಂದಿನಿಂದ ಅಂತ್ಯ. ನಾವು ಎಲ್ಲರೂ ಅಣ್ಣತಮ್ಮಂದಿರಾಗಿ ಒಗ್ಗಟ್ಟಿನಿಂದ ಮುಂದುವರೆಯುತ್ತೇವೆ ಎಂದು ಹೇಳಿದರು.

ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಾತನಾಡಿ, ಎಲ್ಲ ದಲಿತ ಸಂಘಟನೆಗಳು, ಸ್ವಾಮಿಗಳು, ಶಾಸಕರು, ಮಂತ್ರಿಗಳು ಸಮಾಲೋಚನೆ ಮಾಡಿದ್ದೇವೆ. ಒಕ್ಕೊರಲಿನಿಂದ ಈ ತೀರ್ಮಾನವನ್ನು ಕೈಗೊಂಡಿದ್ದೇವೆ. ಧಾರವಾಡ ವಿವಿಯು ಒಳ ಮೀಸಲಾತಿಯಡಿಯಲ್ಲಿ ನೇಮಕಾತಿ ನಿಮಯಗಳನ್ನು ರಚನೆ ಮಾಡದೆಯೆ, ಅಧಿಸೂಚನೆ ಹೊರಡಿಸಿದ್ದರಿಂದ ರಾಜ್ಯಾದ್ಯಂತ ಗೊಂದಲಗಳು ಸೃಷ್ಟಿಯಾಯಿತು ಎಂದು ಹೇಳಿದರು.

ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳಲು ಸರಕಾರದ ವಿರುದ್ಧ ಎತ್ತಿ ಕಟ್ಟಲು ಪ್ರಯತ್ನ ಮಾಡಿದರು. ಈಗ ರೋಸ್ಟರ್ ಪಾಯಿಂಟ್‍ನಲ್ಲಿ ಎ.ಬಿ,ಸಿ ಮೂರು ಗುಂಪುಗಳಿವೆ. ಸಿ ಗುಂಪಿನಲ್ಲಿ ಅಲೆಮಾರಿಗಳನ್ನು ಇಟ್ಟಿದ್ದೇವೆ. ಮೂರು ಗುಂಪುಗಳಿಗೂ ಒಂದೆ ಬಾರಿಗೆ ಮೀಸಲಾತಿ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ. ಒಂದು ವೇಳೆ ಶೇ.15ರಷ್ಟು ಮೀಸಲಾತಿಯಡಿಯಲ್ಲಿ ಭರ್ತಿಯಾಗದಿದ್ದರೆ, ಉಳಿದ ಹುದ್ದೆಗಳನ್ನು ಎಸ್.ಸಿ ಸಾಮಾನ್ಯ ಎಂದು ಪರಿಗಣಿಸಿ ಭರ್ತಿ ಮಾಡಲಾಗುವುದು ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಚಿವರಾದ ಎಚ್.ಕೆ.ಪಾಟೀಲ್, ಆರ್.ಬಿ.ತಿಮ್ಮಾಪುರ್, ಪ್ರಿಯಾಂಕ್ ಖರ್ಗೆ, ಬೈರತಿ ಸುರೇಶ್, ಡಾ.ಎಂ.ಸಿ.ಸುಧಾಕರ್, ಶಾಸಕ ಎ.ಎಸ್.ಪೊನ್ನಣ್ಣ ಉಪಸ್ಥಿತರಿದ್ದರು.

56,432 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ‘ಒಳ ಮೀಸಲಾತಿಯ ವಿಚಾರದಲ್ಲಿ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿತ್ತು. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ 56,432 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಣೆ ಮಾಡಿದ್ದೇನೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದ ಮೀಸಲಾತಿಯ ಅನುಪಾತದಂತೆಯೆ ನೇಮಕಾತಿಗಳು ನಡೆಯಲಿವೆ. ನ್ಯಾಯಾಲಯದ ಮುಂದಿನ ಆದೇಶದವರೆಗೆ ಇದೇ ಅನುಪಾತ ಜಾರಿಯಲ್ಲಿರುತ್ತದೆ. ಈ ಹಿಂದೆ ಹೊರಡಿಸಿದ್ದ ಅಧಿಸೂಚನೆಗಳನ್ನು ಹಿಂಪಡೆದು, ನಾಳೆಯೆ ಹೊಸ ಅಧಿಸೂಚನೆಗಳನ್ನು ಹೊರಡಿಸಿ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು. ನಮ್ಮ ಸರಕಾರ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು, ಸಾಮಾಜಿಕ ನ್ಯಾಯದ ತತ್ವದ ಮೇಲೆ ನಂಬಿಕೆ ಇರಿಸಿದೆ. ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ’

-ಸಿದ್ದರಾಮಯ್ಯ, ಮುಖ್ಯಮಂತ್ರಿ

Tags

Cabinet MeetingInternal Reservation
share
ವಾರ್ತಾಭಾರತಿ
ವಾರ್ತಾಭಾರತಿ
Next Story
X