Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಇನ್ವೆಸ್ಟ್ ಕರ್ನಾಟಕ 2025ʼ ಜಾಗತಿಕ...

ʼಇನ್ವೆಸ್ಟ್ ಕರ್ನಾಟಕ 2025ʼ ಜಾಗತಿಕ ಹೂಡಿಕೆದಾರರ ಸಮಾವೇಶ |10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ನಿರೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್

7 ಲಕ್ಷ ಕೋಟಿ ಬಂಡವಾಳ ಹರಿವು ದೃಢ, 18 ರಾಷ್ಟ್ರಗಳು ಸಮಾವೇಶದಲ್ಲಿ ಭಾಗಿ

ವಾರ್ತಾಭಾರತಿವಾರ್ತಾಭಾರತಿ3 Feb 2025 5:12 PM IST
share
ʼಇನ್ವೆಸ್ಟ್ ಕರ್ನಾಟಕ 2025ʼ ಜಾಗತಿಕ ಹೂಡಿಕೆದಾರರ ಸಮಾವೇಶ |10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ನಿರೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ʼಇನ್ವೆಸ್ಟ್ ಕರ್ನಾಟಕ 2025ʼ ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ರಾಜ್ಯದಲ್ಲಿ ಸುಮಾರು 10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆಯಾಗಬಹುದು ಎಂದು ಅಂದಾಜು ಮಾಡಲಾಗಿದೆ. ಇಲ್ಲಿಯವರೆಗೂ ಸುಮಾರು 7 ಲಕ್ಷ ಕೋಟಿ ಬಂಡವಾಳದ ಹರಿವನ್ನು ದೃಢೀಕರಿಸಲಾಗಿದೆʼ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ʼಇನ್ವೆಸ್ಟ್ ಕರ್ನಾಟಕ 2025ʼರ ಕುರಿತು ವಿಧಾನಸೌಧದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಿದ್ಧತಾ ಪರಿಶೀಲನೆ ಸಭೆ ನಂತರ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು.

“60ಕ್ಕೂ ಹೆಚ್ಚು ಗಣ್ಯ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಇವರು ನಾನಾ ವಿಚಾರಗಳನ್ನು ಹಂಚಿಕೊಳ್ಳಲಿದ್ದು, 2 ಸಾವಿರದಷ್ಟು ಹೂಡಿಕೆದಾರರು ಸಮಾವೇಶದಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಂಡಿದ್ದಾರೆ. 18 ರಾಷ್ಟ್ರಗಳು ಸಮಾವೇಶದಲ್ಲಿ ಭಾಗವಹಿಸಲಿದ್ದು, 9 ದೇಶಗಳು ತಮ್ಮ ಪೆವಿಲಿಯನ್ ಗಳನ್ನು ತೆರಯಲು ಮುಂದೆ ಬಂದಿದ್ದಾರೆ. 10 ದೇಶಗಳ ಉನ್ನತ ಮಟ್ಟದ ಕೈಗಾರಿಕಾ ವಲಯದ ನಾಯಕರು ತಾಂತ್ರಿಕ ವಲಯದ ಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ” ಎಂದು ಹೇಳಿದರು.

“ಕರ್ನಾಟಕ ರಾಜ್ಯ ನೂತನ ಕೈಗಾರಿಕಾ ನೀತಿ 2025-30 ಅನ್ನು ಈ ಸಮಾವೇಶದಲ್ಲಿ ಘೋಷಣೆ ಮಾಡಲಾಗುವುದು. ದೇಶದ ಅನೇಕ ರಾಜ್ಯಗಳ ನೀತಿಗಳನ್ನು ಅಧ್ಯಯನ ಮಾಡಲಾಗಿದ್ದು ಎಲ್ಲದಕ್ಕಿಂತ ಉತ್ತಮವಾದ, ಆಕರ್ಷಣೀಯವಾದ ನೀತಿಯನ್ನು ಪರಿಚಯಿಸಲಾಗುವುದು. ಜೊತೆಗೆ ಕ್ಲೀನ್ ಮೊಬಿಲಿಟಿ ನೀತಿ 2025-30 ಅನ್ನು ಅನಾವರಣ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಏಕಗವಾಕ್ಷಿ ಅನುಕೂಲತೆಯನ್ನು ತರಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೂಡಿಕೆದಾರರು ಮತ್ತು ಖರೀದಿದಾರರ ನಡುವೆ ಹೊಂದಾಣಿಕೆ ಏರ್ಪಡಿಸುವ ಕೆಲಸ ಮಾಡಲಾಗುವುದು. 4 ಸಾವಿರ ಎಸ್ ಎಂಇಗಳಿಗೆ ಇಲಾಖೆ ವತಿಯಿಂದ ತರಬೇತಿ ನೀಡಿ ಸಮಾವೇಶಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ” ಎಂದರು.

ಮೂರು ಲಕ್ಷ ಡಾಲರ್ ಮೊತ್ತದ ಬಹುಮಾನ ವಿತರಣೆ :

“ಅನೇಕ ಹೂಡಿಕೆದಾರರು ಬೆಂಗಳೂರು ಸೇರಿದಂತೆ ಹೊರಗಿನ ಜಿಲ್ಲೆಗಳಲ್ಲಿ ಸಾಕಷ್ಟು ಉದ್ಯೋಗ ಸೃಷ್ಟಿಗೆ ಒತ್ತನ್ನು ನೀಡಿದ್ದಾರೆ. ಇವರಿಗೆ ಮೂರು ಲಕ್ಷ ಡಾಲರ್ ಮೊತ್ತದ ಬಹುಮಾನ ನೀಡಲಾಗುವುದು. ನವೋದ್ಯಮಗಳ ಪ್ರತಿ ವಿಭಾಗಕ್ಕೆ ಒಟ್ಟು 1 ಲಕ್ಷ ಡಾಲರ್ ಬಹುಮಾನ ಮೊತ್ತ ನಿಗದಿ ಮಾಡಲಾಗಿದೆ” ಎಂದು ಹೇಳಿದರು.

“ಸುಮಾರು 30 ಕ್ಕೂ ಹೆಚ್ಚು ನವ ನವೀನ ರೀತಿಯ ಆಲೋಚನೆ ಹೊಂದಿರುವ ನವೋದ್ಯಮಗಳು ಕರ್ನಾಟಕ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಭಾಗವಹಿಸುತ್ತಿವೆ. ಸುಮಾರು 1 ಸಾವಿರಕ್ಕೂ ಹೆಚ್ಚು ನವೋದ್ಯಮಗಳಿಂದ ಪ್ರದರ್ಶನಕ್ಕೆ ಅರ್ಜಿಗಳು ಬಂದಿದ್ದವು. ಇವರಲ್ಲಿ ವಿನೂತನ ಚಿಂತನೆಗಳನ್ನು ಹೊಂದಿರುವ 45 ನವೋದ್ಯಮಗಳಿಗೆ ಅವಕಾಶ ಕಲ್ಪಿಸಲಾಗಿದೆ” ಎಂದರು.

“ಒಟ್ಟು 85 ಮಳಿಗೆಗಳು ಇರಲಿದ್ದು ಇಲ್ಲಿ ವಸ್ತುಪ್ರದರ್ಶನಕ್ಕೆ, ಮಾಹಿತಿ ಸಂವಹನಕ್ಕೆ ಅವಕಾಶ ಕಲ್ಪಿಸಲಾಗುವುದು. ತಾಂತ್ರಿಕ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ಸರ್ಕಾರ ಬೆಂಗಳೂರಿಗಿಂತ ಇತರೇ ಜಿಲ್ಲೆಗಳಲ್ಲಿ ಹೆಚ್ಚು ಬಂಡವಾಳ ಹೂಡಿಕೆಗೆ ಪ್ರೋತ್ಸಾಹ ನೀಡುತ್ತಿದೆ. ಬೆಂಗಳೂರಿಗಿಂತ ಹೊರಗಿನ ಜಿಲ್ಲೆಗಳಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿ ಮಾಡಬೇಕು ಎಂದು ಎಲ್ಲಾ ಹೂಡಿಕೆದಾರರಿಗೆ ಮನವಿ ಮಾಡಲಾಗಿದೆ” ಎಂದು ತಿಳಿಸಿದರು.

“ಇದೇ ಫೆ.11 ರಿಂದ 14 ನೇ ತಾರೀಕಿನ ತನಕ ನಡೆಯುವ ಸಮಾವೇಶದ ಯಶಸ್ಸಿಗೆ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ಅವರ ನೇತೃತ್ವದ ತಂಡ ಸುಮಾರು 16 ದೇಶಗಳಿಗೆ ಭೇಟಿ ಮಾಡಿ ಅನೇಕರಿಗೆ ಆಹ್ವಾನ ನೀಡಿ ನಮ್ಮ ಕರ್ನಾಟಕದಲ್ಲಿರುವ ಮಾನವ ಸಂಪನ್ಮೂಲ, ಸಂಪತ್ತು ಸರ್ಕಾರದ ಅನುಕೂಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಫೆ.11 ರಂದು ಉದ್ಘಾಟನೆಯಾದ ನಂತರ ಒಂದಷ್ಟು ಒಡಂಬಡಿಕೆಗಳಿಗೆ ಸಹಿ ಹಾಕುವ ಕಾರ್ಯಕ್ರಮವಿರಲಿದೆ” ಎಂದರು.

“ಕರ್ನಾಟಕ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಮುನ್ನುಡಿ ಬರೆದಿದ್ದೇ ಕರ್ನಾಟಕ. ಮೊದಲನೇ ಬಾರಿ ವಿಧಾನಸೌಧದ ಬಾಂಕ್ವೆಂಟ್ ಹಾಲ್ ನಲ್ಲಿ ಇದನ್ನು ನಡೆಸಲಾಗಿತ್ತು. ಇದನ್ನು ಗಮನಿಸಿದ ಅನೇಕ ರಾಜ್ಯಗಳು ಇದನ್ನು ಅನುಕರಣೆ ಮಾಡಿದ್ದವು. ಕರ್ನಾಟಕ ಸರ್ಕಾರದ ಮೇಲೆ ನಂಬಿಕೆಯನ್ನಿಟ್ಟು ಬರುತ್ತಿರುವ ಎಲ್ಲಾ ಹೂಡಿಕೆದಾರರಿಗೆ ಅಭಿನಂದನೆಗಳು. ಎಲ್ಲಾ ರೀತಿಯಲ್ಲಿಯೂ ಕರ್ನಾಟಕ ಪ್ರಜ್ವಲಿಸಲಿದೆ. ಉದ್ಯೋಗ ಸೃಷ್ಟಿ ಸೇರಿದಂತೆ ಉತ್ಪಾದನೆಗೆ ಅನುಕೂಲಕರ ವಾತಾವರಣ ಉಂಟಾಗಲಿದೆ ಎಂಬುದು ನಮ್ಮ ನಂಬಿಕೆ” ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X