Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕರ್ನಾಟಕ ಜೊತೆ ವಾಣಿಜ್ಯ ಬಾಂಧವ್ಯ...

ಕರ್ನಾಟಕ ಜೊತೆ ವಾಣಿಜ್ಯ ಬಾಂಧವ್ಯ ವೃದ್ಧಿಗೆ ಬವೇರಿಯಾ ಆಸಕ್ತಿ : ಎಂ.ಬಿ.ಪಾಟೀಲ್

ಜರ್ಮನಿಯಲ್ಲಿ ಇನ್ವೆಸ್ಟ್ ಕರ್ನಾಟಕ ರೋಡ್ ಶೋ

ವಾರ್ತಾಭಾರತಿವಾರ್ತಾಭಾರತಿ5 Dec 2024 6:55 PM IST
share
ಕರ್ನಾಟಕ ಜೊತೆ ವಾಣಿಜ್ಯ ಬಾಂಧವ್ಯ ವೃದ್ಧಿಗೆ ಬವೇರಿಯಾ ಆಸಕ್ತಿ : ಎಂ.ಬಿ.ಪಾಟೀಲ್

ಮ್ಯೂನಿಚ್(ಜರ್ಮನಿ): ‘ಕೃತಕ ಬುದ್ಧಿಮತ್ತೆ ಮತ್ತು ಸೆಮಿಕಂಡಕ್ಟರ್ ಡಿಸೈನ್‍ನಂತಹ ಗಮನಾರ್ಹ ಬೆಳವಣಿಗೆಯ ಸಾಧ್ಯತೆ ಇರುವ ವಲಯಗಳಲ್ಲಿ ಕರ್ನಾಟಕ ರಾಜ್ಯ ಸರಕಾರದ ಜೊತೆ ಕೆಲಸ ಮಾಡಲು ಜರ್ಮನಿಯ ಸ್ವತಂತ್ರ ರಾಜ್ಯ ಬವೇರಿಯಾವು ಆಸಕ್ತಿ ವ್ಯಕ್ತಪಡಿಸಿದೆ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಗುರುವಾರ ಇನ್ವೆಸ್ಟ್ ಕರ್ನಾಟಕದ ಅಂತರರಾಷ್ಟ್ರೀಯ ರೋಡ್ ಶೋ ಅಂಗವಾಗಿ ಜರ್ಮನಿ ಪ್ರವಾಸದಲ್ಲಿ ಇರುವ ಸಚಿವರ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು, ಬವೇರಿಯಾದ ಆರ್ಥಿಕ ವ್ಯವಹಾರಗಳ ರಾಜ್ಯ ಕಾರ್ಯದರ್ಶಿ ರೋಲ್ಯಾಂಡ್ ವೀಗರ್ಟ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿತು.

ಸಭೆಯಲ್ಲಿ ಉಭಯ ರಾಜ್ಯಗಳ ನಡುವಣ ವಾಣಿಜ್ಯ ಬಾಂಧವ್ಯ ವೃದ್ಧಿಸುವ ಮಾರ್ಗೋಪಾಯಗಳನ್ನು ಪ್ರಮುಖವಾಗಿ ಚರ್ಚಿಸಲಾಯಿತು. ಮುಂದಿನ ವರ್ಷ ಕರ್ನಾಟಕಕ್ಕೆ ಬವೇರಿಯಾದ ವಾಣಿಜ್ಯ ನಿಯೋಗ ಕಳಿಸಿಕೊಡುವುದಾಗಿ ವೀಗರ್ಟ್ ಅವರು ಭರವಸೆ ನೀಡಿದ್ದಾರೆ ಎಂದು ಪಾಟೀಲ್ ತಿಳಿಸಿದ್ದಾರೆ.

ಸಚಿವ ಎಂ.ಬಿ.ಪಾ‌ಟೀಲ್ ಬವೇರಿಯಾದ ಯುರೋಪ್ ಹಾಗೂ ಅಂತರರಾಷ್ಟ್ರೀಯ ವ್ಯವಹಾರಗಳ ರಾಜ್ಯ ಸಚಿವ ಎರಿಕ್ ಬಿಸ್ವೆಂಜರ್ ಅವರನ್ನೂ ಭೇಟಿಯಾಗಿ ಮಾತುಕತೆ ನಡೆಸಿದರು. ಸಮಾಲೋಚನೆಯಲ್ಲಿ ಜೈವಿಕ ತಂತ್ರಜ್ಞಾನ ಹಾಗೂ ನವೋದ್ಯಮಗಳಲ್ಲಿ ಬಾಂಧವ್ಯ ವೃದ್ಧಿ ಬಗ್ಗೆ ಹೆಚ್ಚಿನ ಒತ್ತು ಕೊಡಲಾಗಿತ್ತು.

ಆಹಾರ ಹಾಗೂ ಪಾನೀಯ ಕೈಗಾರಿಕೆಗಳಲ್ಲಿ ಬಳಕೆಯಾಗುವ ಸಲಕರಣೆಗಳನ್ನು ತಯಾರಿಸುವ ಜಾಗತಿಕ ಪ್ರಮುಖ ಸಂಸ್ಥೆ ಜಿಇಎ ಗ್ರೂಪ್ ಸೇರಿದಂತೆ ಜರ್ಮನಿಯ ಪ್ರಮುಖ ಕೈಗಾರಿಕೆಗಳ ಮುಖ್ಯಸ್ಥರ ಜೊತೆಗೂ ರಾಜ್ಯದ ನಿಯೋಗವು ಮಾತುಕತೆ ನಡೆಸಿತು. ಭವಿಷ್ಯದ ಯೋಜನೆಗಳ ಭಾಗವಾಗಿ ಬೆಂಗಳೂರಿನಲ್ಲಿ ಇರುವ ತನ್ನ ಕಾರ್ಯಾಚರಣೆಯನ್ನು ವಿಸ್ತರಿಸುವ ಬಗ್ಗೆ ಕಂಪನಿಯ ಮುಖ್ಯ ಕಾರ್ಯಾಚರಣೆ ಅಧಿಕಾರಿ(ಸಿಒಒ)ಜೋಹಾನ್ನೆಸ್ ಗಿಲೋಥ್ ಭರವಸೆ ನೀಡಿದ್ದಾರೆ.

ಬವೇರಿಯಾ ಕೈಗಾರಿಕಾ ಸಂಘ (ಬಿಐಎ) ಮತ್ತು ಐಎಚ್‍ಕೆ ಮ್ಯೂಂಚೆನ್ ಜೊತೆಗಿನ ಸಭೆಯಲ್ಲಿ ರಾಜ್ಯದ ನಿಯೋಗವು, ನಾವೀನ್ಯತೆ, ಸುಲಲಿತ ಉದ್ದಿಮೆ-ವಹಿವಾಟು ಹಾಗೂ ಪರಿಣತ ಮಾನವ ಸಂಪನ್ಮೂಲಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರಕಾರ ಕೈಗೊಂಡಿರುವ ಉಪಕ್ರಮಗಳನ್ನು ವಿವರಿಸಲಾಯಿತು.

ರಾಜ್ಯ ಸರಕಾರದ ಜೊತೆ ಸಹಯೋಗ ವಿಸ್ತರಿಸಲು ಹಾಗೂ ಕರ್ನಾಟಕದಲ್ಲಿನ ಬಂಡವಾಳ ಹೂಡಿಕೆಯ ಅವಕಾಶಗಳನ್ನು ತನ್ನ ಸದಸ್ಯರ ಗಮನಕ್ಕೆ ತರುವುದರ ಬಗ್ಗೆ ಈ ಎರಡೂ ಸಂಘಟನೆಗಳು ರಾಜ್ಯದ ನಿಯೋಗಕ್ಕೆ ಭರವಸೆ ನೀಡಿವೆ. ಬವೇರಿಯಾದ ಜೈವಿಕ ತಂತ್ರಜ್ಞಾನದ ಪ್ರಮುಖ ಸಂಘಟನೆಯಾಗಿರುವ ಬಿಯೊಎಂ ಜೊತೆಗಿನ ಸಭೆಯಲ್ಲಿ ಸಚಿವ ಪಾಟೀಲ್ ಕ್ವಿನ್‍ಸಿಟಿ ಯೋಜನೆ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿನ ಕರ್ನಾಟಕದ ಸಾಮರ್ಥ್ಯಗಳನ್ನು ವಿವರಿಸಿದರು.

ಜರ್ಮನಿಯಲ್ಲಿ ನಡೆದ ರೋಡ್ ಶೋ, ಕರ್ನಾಟಕವು ಜಾಗತಿಕ ಹೂಡಿಕೆಯ ಪ್ರಮುಖ ತಾಣವಾಗಿರುವುದನ್ನು ಸ್ಥಳೀಯ ಹೂಡಿಕೆದಾರರಿಗೆ ಯಶಸ್ವಿಯಾಗಿ ಪರಿಚಯಿಸಿದೆ. ಈ ವೇಳೆ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತ ಗುಂಜನ್ ಕೃಷ್ಣ ಹಾಜರಿದ್ದರು.

Tags

Invest KarnatakaGermanyMB Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X