Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ರಾಜ್ಯಕ್ಕೆ ಹೂಡಿಕೆ ಆಕರ್ಷಣೆ’ |...

‘ರಾಜ್ಯಕ್ಕೆ ಹೂಡಿಕೆ ಆಕರ್ಷಣೆ’ | ಅಮೆರಿಕದ ಕಂಪೆನಿಗಳೊಂದಿಗೆ ಸಚಿವ ಎಂ.ಬಿ.ಪಾಟೀಲ್ ಮಾತುಕತೆ

ವಾರ್ತಾಭಾರತಿವಾರ್ತಾಭಾರತಿ26 Sept 2023 6:42 PM IST
share
‘ರಾಜ್ಯಕ್ಕೆ ಹೂಡಿಕೆ ಆಕರ್ಷಣೆ’ | ಅಮೆರಿಕದ ಕಂಪೆನಿಗಳೊಂದಿಗೆ ಸಚಿವ ಎಂ.ಬಿ.ಪಾಟೀಲ್ ಮಾತುಕತೆ

ಅಮೆರಿಕ(ವಾಷಿಂಗ್ಟನ್ ಡಿ.ಸಿ), ಸೆ.26: ಕರ್ನಾಟಕಕ್ಕೆ ಹೆಚ್ಚಿನ ಪ್ರಮಾಣದ ವಿದೇಶಿ ಹೂಡಿಕೆಯನ್ನು ಆಕರ್ಷಿಸಬೇಕೆಂಬ ಗುರಿಯೊಂದಿಗೆ ಅಮೆರಿಕ ಪ್ರವಾಸ ಕೈಗೊಂಡಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಮೊದಲ ದಿನವಾದ ಸೋಮವಾರದಂದು ಆರ್.ಟಿ.ಎಕ್ಸ್ ಏರೋಸ್ಪೇಸ್ ಕಂಪೆನಿ, ಇಂಟೆಲ್ ಸ್ಯಾಟ್ ಮತ್ತು ಅಮೆರಿಕ-ಭಾರತ ಎಸ್‍ಎಂಇ ಕೌನ್ಸಿಲ್ ಜತೆ ಮಹತ್ವದ ಮಾತುಕತೆಗಳನ್ನು ನಡೆಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು, ಅಮೆರಿಕದ ಕಂಪೆನಿಗಳಿಗೆ ಬೆಂಗಳೂರಿನಲ್ಲಿ ಮಾತ್ರವಲ್ಲದೆ ರಾಜಧಾನಿಯ ಆಚೆಗೂ ಹೂಡಿಕೆಗೆ ಇರಲು ಉಜ್ವಲ ಅವಕಾಶಗಳು ಮತ್ತು ಅದಕ್ಕೆ ರಾಜ್ಯ ಸರಕಾರವು ನೀಡುತ್ತಿರುವ ಪ್ರೋತ್ಸಾಹಗಳ ಬಗ್ಗೆ ಮನವರಿಕೆ ಮಾಡಿಕೊಡಲಾಯಿತು ಎಂದಿದ್ದಾರೆ.

ಬೆಂಗಳೂರಿನಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಹೊಂದಿರುವ ಆರ್.ಟಿ.ಎಕ್ಸ್ ರಾಜ್ಯದಲ್ಲಿ ಪೂರೈಕೆ ಸರಪಳಿ ಮತ್ತು ವಿದ್ಯುನ್ಮಾನ ಸಾಧನಗಳ ಉತ್ಪಾದನೆಯತ್ತ ಆಸಕ್ತಿ ತೋರಿಸಿದ್ದು, ಈ ಬಗ್ಗೆ ಅದರ ಉನ್ನತ ಮಟ್ಟದ ಪ್ರತಿನಿಧಿಗಳೊಂದಿಗೆ ವಿಚಾರ ವಿನಿಮಯ ನಡೆಸಲಾಗಿದೆ. ಇದರ ಜತೆಗೆ ಬಾಹ್ಯಾಕಾಶ ನವೋದ್ಯಮಗಳ ಕ್ಷೇತ್ರದಲ್ಲಿ ಸಹಭಾಗಿತ್ವ ಹೊಂದುವ ಕುರಿತು ಚರ್ಚಿಸಲಾಯಿತು ಎಂದು ಅವರು ಹೇಳಿದ್ದಾರೆ.

ಇಂಟೆಲ್ ಸ್ಯಾಟ್ ಕಂಪೆನಿಯೊಂದಿಗೆ ಭಾರತೀಯ ಬಾಹ್ಯಾಕಾಶ ನವೋದ್ಯಮಗಳ ಮೂಲಕ `ಸ್ಯಾಟಲೈಟ್ ಸೋರ್ಸಿಂಗ್’ ಕುರಿತು ಮತ್ತಷ್ಟು ವಿಸ್ತೃತ ಸ್ವರೂಪದಲ್ಲಿ ಕಾರ್ಯ ಚಟುವಟಿಕೆ ವಿಸ್ತರಿಸುವ ಕುರಿತು ಚರ್ಚಿಸಲಾಯಿತು. ಇದಲ್ಲದೆ, ಬಾಹ್ಯಾಕಾಶ ಸಂವಹನದಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಮಶೀನ್ ಲನಿರ್ಂಗ್ ಗಳಿಗೆ ಇರುವ ಪಾತ್ರಗಳು ಮತ್ತು ಸಾಫ್ಟ್ ವೇರ್ ಆಧಾರಿತ ಪರಿಹಾರಗಳನ್ನು ಕುರಿತು ಸಹಭಾಗಿತ್ವವನ್ನು ಬೆಳೆಸಿಕೊಳ್ಳಬೇಕಾದ ಅಗತ್ಯವನ್ನು ಮಾತುಕತೆಯ ಸಂದರ್ಭದಲ್ಲಿ ಮನಗಾಣಲಾಯಿತು ಎಂದು ಎಂ.ಬಿ.ಪಾಟೀಲ್ ವಿವರಿಸಿದ್ದಾರೆ.

ಏತನ್ಮಧ್ಯೆ, ರಾಜ್ಯ ಸರಕಾರ ಮತ್ತು ಶಿಕ್ಷಣ ಸಂಸ್ಥೆಗಳೊಂದಿಗೆ ಪ್ರತಿಭೆಗಳನ್ನು ಉತ್ತೇಜಿಸುವಂತಹ ವ್ಯವಸ್ಥೆಯನ್ನು ಪಾಲುದಾರಿಕೆಯಲ್ಲಿ ಅಭಿವೃದ್ಧಿ ಪಡಿಸುವ ಕುರಿತು ಮಾತುಕತೆಯಲ್ಲಿ ಪ್ರಸ್ತಾಪಿಸಲಾಗಿದೆ. ಅಲ್ಲದೆ, ದೀರ್ಘಾವಧಿ ಯೋಜನೆಯ ಭಾಗವಾಗಿ ರಾಜ್ಯದಲ್ಲಿ ಗ್ಲೋಬಲ್ ಕೇಪಬಿಲಿಟಿ ಸೆಂಟರ್ (ಜಿಸಿಸಿ) ಸ್ಥಾಪಿಸುವ ಕುರಿತು ಈ ಸಂದರ್ಭದಲ್ಲಿ ಚರ್ಚಿಸಲಾಯಿತು ಎಂದು ಅವರು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಯುಎಸ್-ಇಂಡಿಯಾ ಎಸ್‍ಎಂಇ ಕೌನ್ಸಿಲ್‍ನ 30ಕ್ಕೂ ಹೆಚ್ಚು ಸಿಇಒಗಳನ್ನು ಭೇಟಿಯಾಗಿ ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಇರುವ ಹೇರಳ ಅವಕಾಶಗಳನ್ನು ಮತ್ತು ಸರಕಾರವು ಉದ್ಯಮಗಳ ಬೆಳವಣಿಗೆಗೆ ರೂಪಿಸಿರುವ ಉಪಕ್ರಮಗಳ ಬಗ್ಗೆ ಎಂ.ಬಿ.ಪಾಟೀಲ್ ಗಮನ ಸೆಳೆದರು.

ಕರ್ನಾಟಕದಲ್ಲಿ ವಾಣಿಜ್ಯ ಮತ್ತು ಬಂಡವಾಳ ಹೂಡಿಕೆಯನ್ನು ಉತ್ತೇಜಿಸಲು ಸಚಿವರು ನೀಡುತ್ತಿರುವ ಮೌಲಿಕ ಕೊಡುಗೆಯನ್ನು ಪರಿಗಣಿಸಿ, ಯುಎಸ್-ಇಂಡಿಯಾ ಎಸ್‍ಎಂಇ ಕೌನ್ಸಿಲ್ ವತಿಯಿಂದ ಅವರಿಗೆ ‘ಔಟ್ ಸ್ಟ್ಯಾಂಡಿಂಗ್ ಬಿಜಿನೆಸ್ ಪೆÇ್ರಮೋಷನ್ ಅವಾರ್ಡ್’ ನೀಡಿ ಪುರಸ್ಕರಿಸಲಾಯಿತು.

ಮಾತುಕತೆಯಲ್ಲಿ ಕೈಲ್ ಬೆಲಾರ್ಡ್ ಕಂಪೆನಿಯ ಉಪಾಧ್ಯಕ್ಷ ಕ್ಸೇವಿಯರ್ ರಮಿಸ್, ಆರ್.ಟಿಎಕ್ಸ್ ಕಂಪೆನಿಯ ನಿರ್ದೇಶಕ ಹೆನ್ರಿ ಬಿ.ಮಾರ್ಟಿನ್, ಕ್ಲೌಡಿಯಾ ಡಯಾಮಾಂಟ್ ಕಂಪೆನಿಯ ಉಪಾಧ್ಯಕ್ಷ ರೋರಿ ವೆಲ್ಶ್, ರಾಜೀವ್ ಗಡ್ರೆ, ಇಂಟೆಲ್ ಸ್ಯಾಟ್ ಕಂಪೆನಿಯ ಹಿರಿಯ ನಿರ್ದೇಶಕ ಕೆನ್ ಟಕಗಿ, ಯುಎಸ್-ಇಂಡಿಯಾ ಎಸ್‍ಎಂಇ ಕೌನ್ಸಿಲ್‍ನ ಎಲಿಶಾ ಪುಲಿವರ್ತಿ, ಗ್ಲೋಬಲ್ ಎಲಿಯಂಟ್ ಸಂಸ್ಥಾಪಕ ರಾಜನ್ ನಟರಾಜನ್, ಮಾಂಟ್ಗೊಮೆರಿ ರಾಜ್ಯಾಡಳಿತದ ಉನ್ನತಾಧಿಕಾರಿ ಮಾರ್ಕ್ ಎಲ್ರಿಚ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ರಾಜ್ಯ ಸರಕಾರದ ಉನ್ನತ ಮಟ್ಟದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಸಚಿವರ ಆಪ್ತ ಕಾರ್ಯದರ್ಶಿ ನರೇಂದ್ರ ಇದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X