ಹುಬ್ಬಳ್ಳಿ- ಧಾರವಾಡದ ಮೊದಲ ಮಹಿಳಾ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ರೇಣುಕಾ ಕೆ. ಸುಕುಮಾರ್ ನೇಮಕ

ರೇಣುಕಾ ಕೆ ಸುಕುಮಾರ್
ಧಾರವಾಡ, ಆ. 9: ಹುಬ್ಬಳ್ಳಿ ಧಾರವಾಡದ ಮೊದಲ ಮಹಿಳಾ ಪೊಲೀಸ್ ಕಮಿಷನರ್ ಆಗಿ ಐಪಿಎಸ್ ಅಧಿಕಾರಿ ರೇಣುಕಾ ಕೆ ಸುಕುಮಾರ್ ಅವರನ್ನು ರಾಜ್ಯ ಸರಕಾರ ಬುಧವಾರ ನೇಮಕ ಮಾಡಿದೆ.
ಐಪಿಎಸ್ ಅಧಿಕಾರಿ ಸಂತೋಷ್ ಬಾಬು ಬದಲಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ರೇಣುಕಾ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
2011 ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ರೇಣುಕಾ ಅವರು ಈ ಹಿಂದೆ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
ಸದ್ಯ ಪ್ರಭಾರಿ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿ ಸಂತೋಷ್ ಬಾಬು ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ.
Next Story







