Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದೇಶದ ಸಂಸತ್ ಭವನವೇ...

ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯೇ: ಸಿದ್ದರಾಮಯ್ಯ ಪ್ರಶ್ನೆ

ಸಂಸತ್ ಭವನದ ಮೇಲೆ ನಡೆದಿರುವ ದಾಳಿ ಖಂಡನೀಯ ಎಂದ ಸಿಎಂ

ವಾರ್ತಾಭಾರತಿವಾರ್ತಾಭಾರತಿ13 Dec 2023 4:34 PM IST
share
ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯೇ:  ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಲೋಕಸಭೆಯಲ್ಲಿ ಗಂಭೀರ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಪ್ರಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ʼ ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯೇʼ ಎಂದು ಪ್ರಶ್ನಿಸಿದ್ದಾರೆ.

ಈ ಸಂಬಂಧ ʼಎಕ್ಸ್‌ʼ ನಲ್ಲಿ ಬರೆದುಕೊಂಡಿರುವ ಅವರು, "ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ, ಬಹಳ ಪ್ರಮುಖವಾಗಿ ದೇಶದ ಗೃಹ ಸಚಿವ ಅಮಿತ್‌ ಶಾ ಅವರ ಕರ್ತವ್ಯವಾಗಿದೆ" ಎಂದು ಹೇಳಿದ್ದಾರೆ.

ʼಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ ಎಂದು ಪ್ರಶ್ನಿಸಿದ್ದಾರೆ.

ʼಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ ಪ್ರತಾಪ್‌ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆʼ ಎಂದು ಹೇಳಿದ್ದಾರೆ.

" ದೇಶದ ಹೃದಯದಂತಿರುವ ಸಂಸತ್ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿ ಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ? ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯಾ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ" ಎಂದು ತಮ್ಮ ಪ್ರಶ್ನೆಗಳಿಗೆ ಉತ್ತರಿಸುವಂತೆ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X