Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಲ್ಯಾಣ ಕರ್ನಾಟಕದಲ್ಲಿ ಬೃಹತ್...

ಕಲ್ಯಾಣ ಕರ್ನಾಟಕದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪನೆಗೆ ಈಶ್ವರ್ ಖಂಡ್ರೆ ಮನವಿ

ವಾರ್ತಾಭಾರತಿವಾರ್ತಾಭಾರತಿ14 Jun 2024 6:47 PM IST
share
ಕಲ್ಯಾಣ ಕರ್ನಾಟಕದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪನೆಗೆ ಈಶ್ವರ್ ಖಂಡ್ರೆ ಮನವಿ

ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ತೀವ್ರ ಹಿಂದುಳಿದಿದ್ದು, ಈ ಭಾಗದ ಯುವಕರಿಗೆ ಉದ್ಯೋಗ ದೊರಕಿಸಲು ಜಿಲ್ಲಾ ಕೇಂದ್ರದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪಿಸುವಂತೆ ಮುಖ್ಯಮಂತ್ರಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಮನವಿ ಮಾಡಿದ್ದಾರೆ.

ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಯುವಜನರು ಖಾಸಗಿ ವಲಯದಲ್ಲಿ ಉದ್ಯೋಗಕ್ಕೆ ಅರ್ಹರಾಗುವಂತೆ ಮಾಡುವ ಅಗತ್ಯವಿದ್ದು, ಈ ಭಾಗದ ಯಾವುದಾದರೂ ಒಂದು ಜಿಲ್ಲಾ ಕೇಂದ್ರದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪಿಸುವಂತೆ ಮನವಿ ಮಾಡಿದರು.

ಪೂರ್ವಾನುಮತಿ ಅಗತ್ಯವಿಲ್ಲ: ಕಲ್ಯಾಣ ಕರ್ನಾಟಕಕ್ಕೆ 371 (ಜೆ) ಸಾಂವಿಧಾನಿಕ ತಿದ್ದುಪಡಿ ಅಡಿಯಲ್ಲಿ ವಿಶೇಷ ಸ್ಥಾನಮಾನ ನೀಡಲಾಗಿದ್ದು, ಈ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಯ ಪೂರ್ವಾನುಮೋದನೆ ಅಗತ್ಯವಿಲ್ಲ ಎಂದು ಸರಕಾರಿ ಆದೇಶ ಇದೆ. ಆದಾಗ್ಯೂ ನೇಮಕಾತಿ ವೇಳೆ ಹಣಕಾಸು ಇಲಾಖೆ ಅನುಮೋದನೆಗೆ ಕಡತ ಕಳಿಸುತ್ತಿದ್ದು, ಇದರಿಂದ ನೇಮಕಾತಿ ವಿಳಂಬವಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಬೇಕು ಎಂದು ಅವರು ಮಾಡಿದ ಮನವಿಗೆ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದರು.

ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಮನವಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಹಿಳೆಯ ಶಿಕ್ಷಣಕ್ಕೆ ಆದ್ಯತೆ ನೀಡುವ ಅಗತ್ಯವಿದ್ದು, ಎಲ್ಲ 7 ಜಿಲ್ಲಾ ಕೇಂದ್ರದಲ್ಲೂ ಒಂದೊಂದು ಸರಕಾರಿ ಮಹಿಳಾ ಪದವಿ ಕಾಲೇಜು ಸ್ಥಾಪಿಸಬೇಕು. ಅದೇ ರೀತಿ ಕಲ್ಯಾಣ ಕರ್ನಾಟಕದಾದ್ಯಂತ ಖಾಲಿ ಇರುವ ಸುಮಾರು 6639 ಶಿಕ್ಷಕರ ಹುದ್ದೆಗಳನ್ನು ಆದ್ಯತೆಯ ಮೇಲೆ ಭರ್ತಿ ಮಾಡಬೇಕು, ಇದಕ್ಕೆ ಅನುಮೋದನೆ ನೀಡಿ ಎಂದು ಅವರು ಕೋರಿದರು.

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಕೈಗಾರಿಕಾ ನೀತಿ: ಕಲ್ಯಾಣ ಕರ್ನಾಟಕದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಅಗತ್ಯವಿದ್ದು, ಕೈಗಾರಿಕೆಗಳಿಲ್ಲದೆ ಈ ಪ್ರದೇಶ ಹಿಂದುಳಿದಿದೆ. ಜೊತೆಗೆ ಇಲ್ಲಿ ಕಚ್ಚಾ ಸಾಮಗ್ರಿ, ನೈಸರ್ಗಿಕ ಸಂಪನ್ಮೂಲದ ಕೊರತೆಯೂ ಇದೆ. ಹೀಗಾಗಿ, ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕವಾದ ಕೈಗಾರಿಕಾ ನೀತಿ ರೂಪಿಸಬೇಕು ಎಂದು ಈಶ್ವರ್ ಖಂಡ್ರೆ ಮನವಿ ಮಾಡಿದರು.

ವೈದ್ಯಕೀಯ ಸೌಲಭ್ಯ ವರ್ಧನೆಗೂ ಮನವಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ವೈದ್ಯಕೀಯ ಸೌಲಭ್ಯಗಳ ಹೆಚ್ಚಳ ಮಾಡುವ ಅಗತ್ಯವಿದೆ. ಆಸ್ಪತ್ರೆಗಳಲ್ಲಿ ಹೆಚ್ಚಿನ ಚಿಕಿತ್ಸಾ ಸೌಲಭ್ಯ ಕಲ್ಪಿಸಬೇಕು. ಬೀದರ್ ಜಿಲ್ಲಾಸ್ಪತ್ರೆಯಲ್ಲಿ ಇನ್ನೂ ನೆಫ್ರಾಲಜಿ (ಮೂತ್ರಪಿಂಡ, ಮೂತ್ರಕೋಶ ಚಿಕಿತ್ಸಾ ವಿಭಾಗ) ಘಟಕ ಮತ್ತು ಕ್ಯಾಥ್ ಲ್ಯಾಬ್ ಆರಂಭವಾಗಿಲ್ಲ. ಇದನ್ನು ಆದ್ಯತೆಯ ಮೇಲೆ ಆರಂಭಿಸಬೇಕು ಎಂದು ಅವರು ಕೋರಿದರು.

ಬೀದರ್ ವಿಮಾನಯಾನ ಪುನಾರಂಭಕ್ಕೆ ಮನವಿ: ಈ ಹಿಂದೆ ಕಾಂಗ್ರೆಸ್ ಸರಕಾರದ ಮನವಿಯ ಹಿನ್ನೆಲೆಯಲ್ಲಿ ಬೀದರ್ ನಗರಕ್ಕೆ ನಾಗರಿಕ ವಿಮಾನಯಾನ ಆರಂಭವಾಗಿತ್ತು. ಆದರೆ ಈಗ ಕಳೆದ 6 ತಿಂಗಳಿಂದ ವಿಮಾನ ಯಾನ ರದ್ದುಪಡಿಸಲಾಗಿದೆ. ಉಡಾನ್ ಅಡಿಯಲ್ಲಿ ಸಬ್ಸಿಡಿ ನೀಡದಿರುವುದೇ ಇದಕ್ಕೆ ಕಾರಣವಾಗಿದೆ. ಕೂಡಲೇ ಬೀದರ್ ಗೆ ನಾಗರಿಕ ವಿಮಾನಯಾನ ಸೇವೆ ಆರಂಭಿಸಲು ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಈಶ್ವರ್ ಖಂಡ್ರೆ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X