Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಂಡೀಪುರ- ವಯನಾಡು ನಡುವೆ ಸಂಚಾರಕ್ಕೆ...

ಬಂಡೀಪುರ- ವಯನಾಡು ನಡುವೆ ಸಂಚಾರಕ್ಕೆ ತೊಡಕಿಲ್ಲ: ಅರಣ್ಯ ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ2 Jan 2025 7:09 PM IST
share
ಬಂಡೀಪುರ- ವಯನಾಡು ನಡುವೆ ಸಂಚಾರಕ್ಕೆ ತೊಡಕಿಲ್ಲ: ಅರಣ್ಯ ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ಬಂಡೀಪುರ ಅರಣ್ಯ ಮಾರ್ಗವಾಗಿ ಕೇರಳದ ವಯನಾಡಿಗೆ ಹೋಗಲು ಹೊಸದಾಗಿ ಯಾವುದೇ ಬಸ್ ಸೌಲಭ್ಯ ಕಲ್ಪಿಸಲಾಗಿಲ್ಲ. ರಾತ್ರಿ ಸಂಚಾರ ನಿರ್ಬಂಧಿಸಿದ ತರುವಾಯ ಹಲವು ವರ್ಷಗಳಿಂದ ಎರಡೂ ರಾಜ್ಯಗಳ ಜನರ ಅನುಕೂಲಕ್ಕಾಗಿ ರಾತ್ರಿ ನಿರ್ದಿಷ್ಟ ಸಂಖ್ಯೆಯ ಬಸ್‍ಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

ಗುರುವಾರ ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಇಲಾಖೆಯ ಕ್ಯಾಲೆಂಡರ್ ಬಿಡುಗಡೆ ಮಾಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಪರಿಹಾರಾತ್ಮಕ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ರಾಜ್ಯಗಳಿಂದ ಸಂಗ್ರಹವಾದ ಹಣವನ್ನು ಬಿಡುಗಡೆ ಮಾಡಲು ಮೀನಾಮೇಷ ಎಣಿಸುತ್ತಿದ್ದು, ದಕ್ಷಿಣ ರಾಜ್ಯಗಳ ಅರಣ್ಯ ಸಚಿವರ ನಿಯೋಗವನ್ನು ಕೇಂದ್ರಕ್ಕೆ ತೆಗೆದುಕೊಂಡು ಹೋಗುವುದಾಗಿ ಅವರು ಹೇಳಿದರು.

ವನ್ಯಜೀವಿಗಳು ಕಾಡಿನಿಂದ ಹೊರಬರುತ್ತಿದ್ದು, ಅವು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗುತ್ತಿವೆ, ಮಾನವ -ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ರೈಲ್ವೆ ಬ್ಯಾರಿಕೇಡ್ ಅಳವಡಿಸಲು, ಕಾರಿಡಾರ್ ನಿರ್ಮಿಸಲು ಕ್ಯಾಂಪಾದಲ್ಲಿರುವ ರಾಜ್ಯದ 1400 ಕೋಟಿ ರೂ. ಹಣವನ್ನೇ ಬಿಡುಗಡೆ ಮಾಡುತ್ತಿಲ್ಲ. ಹೀಗಾಗಿ ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವರ ಬಳಿಗೆ ದಕ್ಷಿಣ ರಾಜ್ಯಗಳ ಅರಣ್ಯ ಸಚಿವರ ನಿಯೋಗ ತೆಗೆದುಕೊಂಡು ಹೋಗಲು ಇಂದಿನ ಸಭೆಯಲ್ಲಿ ಚರ್ಚಿಸಿದ್ದು, ಶೀಘ್ರವೇ ಎಲ್ಲ ಸಚಿವರಿಗೂ ಪತ್ರ ಬರೆಯಲಾಗುವುದು ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ಆ.12ರಂದು ಬೆಂಗಳೂರಿನಲ್ಲಿ ನಡೆದ ಮಾನವ-ಆನೆ ಸಂಘರ್ಷ ಕುರಿತ ಅಂತರ್‍ರಾಷ್ಟ್ರೀಯ ಸಮ್ಮೇಳನದ ಸಂದರ್ಭದಲ್ಲಿ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಜಾಖರ್ಂಡ್ ರಾಜ್ಯದ ಸಚಿವರು ಕೂಡ ಕೇಂದ್ರಕ್ಕೆ ನಿಯೋಗದಲ್ಲಿ ಆಗಮಿಸಲು ಸಮ್ಮಿತಿಸಿದ್ದರು ಎಂದು ಅವರು ತಿಳಿಸಿದರು.

ಕಾಡಿನಲ್ಲಿ ತೂಗಾಡುವ ವಿದ್ಯುತ್ ತಂತಿಗಳ ಕುರಿತು ಕ್ರಮ: ಅರಣ್ಯದೊಳಗೆ ಅಳವಡಿಸಲಾಗಿರುವ ವಿದ್ಯುತ್ ತಂತಿಗಳು ಕೆಲವೆಡೆ ಜೋತು ಬಿದ್ದಿದ್ದು, ಆನೆಗಳು ಸಾವಿಗೀಡಾಗುತ್ತಿವೆ. ವಿದ್ಯುತ್ ತಂತಿ ತೂಗಾಡದಂತೆ ಕ್ರಮ ವಹಿಸಲು ಮತ್ತು ಅಂತರ್ಗತ ಕೇಬಲ್ ಅಳವಡಿಸಿಲು ವಿದ್ಯುತ್ ಕಂಪನಿಗಳಿಗೆ ತಿಳಿಸಿರುವುದಾಗಿ ಈಶ್ವರ್ ಖಂಡ್ರೆ ಹೇಳಿದರು.

ಆನೆಗಳಿಂದ ಬೆಳೆಹಾನಿ ಮತ್ತು ಜೀವಹಾನಿ ಆಗುತ್ತಿದ್ದು, ಇದನ್ನು ತಪ್ಪಿಸಲು ಭದ್ರಾ ಅಭಯಾರಣ್ಯದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ನಿರ್ಮಿಸಲು ಯೋಜನೆ ರೂಪಿಸಲಾಗುತ್ತಿದೆ. ಇದಕ್ಕೆ 100 ಕೋಟಿ ರೂ. ಅಗತ್ಯವಿದ್ದು, ಬಜೆಟ್ ನಲ್ಲಿ ಅನುದಾನ ನೀಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗುವುದು ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ಅರಣ್ಯವಾಸಿಗಳ ಸ್ಥಳಾಂತರ: ರಾಜ್ಯದ ರಾಷ್ಟ್ರೀಯ ಉದ್ಯಾನ, ವನ್ಯಜೀವಿ ಅಭಯಾರಣ್ಯ, ಮೀಸಲು ಅರಣ್ಯ, ಹುಲಿ ಸಂರಕ್ಷಿತ ಅರಣ್ಯ ಸೇರಿದಂತೆ ವಿವಿಧ ಅರಣ್ಯಗಳಲ್ಲಿ ಹಲವಾರು ವರ್ಷಗಳಿಂದ ಅರಣ್ಯವಾಸಿಗಳು ಜೀವಿಸುತ್ತಿದ್ದು, ಗಂಡ, ಹೆಂಡತಿ ಒಳಗೊಂಡು ಪ್ರತಿ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಿ ಹಂತ ಹಂತವಾಗಿ ಸ್ಥಳಾಂತರಿಸಲಾಗುವುದು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X