Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆನೆಧಾಮದಿಂದ ಕೊಡಗು, ಹಾಸನ,...

ಆನೆಧಾಮದಿಂದ ಕೊಡಗು, ಹಾಸನ, ಚಿಕ್ಕಮಗಳೂರಿನ ಆನೆ ಸಮಸ್ಯೆಗೆ ಶಾಶ್ವತ ಪರಿಹಾರ: ಈಶ್ವರ್‌ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ3 March 2025 9:35 PM IST
share
ಆನೆಧಾಮದಿಂದ ಕೊಡಗು, ಹಾಸನ, ಚಿಕ್ಕಮಗಳೂರಿನ ಆನೆ ಸಮಸ್ಯೆಗೆ ಶಾಶ್ವತ ಪರಿಹಾರ: ಈಶ್ವರ್‌ ಖಂಡ್ರೆ

ಹಾಸನ: ಕೊಡಗು, ಹಾಸನ ಮತ್ತು ಚಿಕ್ಕಮಗಳೂರಿನ ಅರಣ್ಯದ ಹೊರಗೆ ನೆಲೆಸಿರುವ 200 ಆನೆಗಳನ್ನು ಹಿಡಿದು, ಭದ್ರಾ ಅಭಯಾರಣ್ಯದಲ್ಲಿ ಸ್ಥಾಪಿಸಲುದ್ದೇಶಿಸಿರುವ ಆನೆಧಾಮಕ್ಕೆ ಕಳುಹಿಸಿದಲ್ಲಿ ಈ ಮೂರು ಜಿಲ್ಲೆಗಳ ಆನೆ ಸಮಸ್ಯೆಗೆ ಶಾಶ್ವತ ಪರಿಹಾರ ಲಭಿಸುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಬೇಲೂರು ಪಟ್ಟಣದ ಆರ್.ವಿ.ಕಲ್ಯಾಣ ಮಂಟಪದಲ್ಲಿಂದು ಆನೆ -ಮಾನವ ಸಂಘರ್ಷ ಇರುವ ಹಾಸನ, ಕೊಡಗು ಮತ್ತು ಚಿಕ್ಕಮಗಳೂರಿನ ಕಾಫಿ ಬೆಳೆಗಾರರು, ತೋಟದ ಬೆಳೆಗಾರರು, ರೈತರು ಮತ್ತು ಗ್ರಾಮಸ್ಥರ ಮುಕ್ತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿಯ ಆಯವ್ಯಯದಲ್ಲಿ ಆನೆಧಾಮದ ಘೋಷಣೆಯನ್ನು ಮುಖ್ಯಮಂತ್ರಿಯವರು ಮಾಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ವನ್ಯಜೀವಿಗಳಿಂದ ಅದರಲ್ಲೂ ಆನೆಗಳಿಂದ ಮಾನವರ ಜೀವ ಮತ್ತು ರೈತರ ಬೆಳೆಗೆ ಆಗುತ್ತಿರುವ ಹಾನಿ ತಡೆಗೆ ಅಂತರ ಜಿಲ್ಲಾ ಸಮನ್ವಯತೆ ಮತ್ತು ತಂತ್ರಜ್ಞಾನದ ಸಮರ್ಥ ಬಳಕೆ ಅಗತ್ಯವಾಗಿದೆ ಎಂದು ಹೇಳಿದರು.

ವನ್ಯಜೀವಿ ದಾಳಿಯಿಂದ ಗಾಯಗೊಂಡು ವಿಕಲಾಂಗರಾಗುವವರಿಗೆ ಹೆಚ್ಚಿನ ಪರಿಹಾರ ನೀಡಬೇಕು ಎಂಬ ಬೇಡಿಕೆ ಇದೆ, ಈ ಬಗ್ಗೆ ಪರಿಶೀಲಿಸಲಾಗುವುದು. ಅದೇ ರೀತಿ ಬೆಳೆ ಹಾನಿಗೆ ಶೀಘ್ರ ಪರಿಹಾರ ಪಾವತಿಸುವ ವ್ಯವಸ್ಥೆ ಜಾರಿಗೆ ತರಲು ವ್ಯವಸ್ಥೆ ರೂಪಿಸಲಾಗುವುದು ಎಂದರು.

ಇಂದು ವಿಶ್ವ ವನ್ಯಜೀವಿ ದಿನವಾಗಿದ್ದು, ಕಾಡು ಪ್ರಾಣಿಗಳ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವ ದಿನವಾಗಿದೆ. ಅದೇ ದಿನ ವನ್ಯಜೀವಿಗಳಿಂದ ಮಾನವರ ಅಮೂಲ್ಯ ಜೀವ ರಕ್ಷಿಸಲು ಮಾರ್ಗೋಪಾಯ ಗಳ ಬಗ್ಗೆ ಚರ್ಚಿಸುವ ಸಲುವಾಗಿ ಈ ಸಭೆ ನಡೆಸಲಾಗುತ್ತಿದೆ ಎಂದರು.

ವನ್ಯಜೀವಿ ಸಂರಕ್ಷಣಾ ಕಾಯಿದೆ ಬಂದ ನಂತರ ಪ್ರಾಣಿಬೇಟೆ ನಿಷೇಧಿಸಲಾಗಿದೆ. ವನ್ಯ ಜೀವಿಗಳ ಸಂರಕ್ಷಣೆ ಮಾಡಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಆದರೆ ಅದಕ್ಕೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗುತ್ತಿಲ್ಲ. ಇದು ಮಾನವ-ವನ್ಯಜೀವಿ ಸಂಘರ್ಷಕ್ಕೆ ಕಾರಣವಾಗಿದೆ ಎಂದರು.

ಹಾಸನ ಜಿಲ್ಲೆಯಲ್ಲಿ ಕಳೆದ 2 ವರ್ಷದಲ್ಲಿ 7 ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲಾಗಿದೆ. ಸಾಮಾನ್ಯವಾಗಿ ಗುಂಪಿನ ನೇತೃತ್ವ ವಹಿಸುವ ಹೆಣ್ಣಾನೆ ಗುರುತಿಸಿ ರೇಡಿಯೋ ಕಾಲರ್ ಅಳವಡಿಸಿದರೆ, ಆನೆಗಳ ಚಲನವಲನದ ಬಗ್ಗೆ ನಿಗಾ ಇಡಲು ಅನುಕೂಲವಾಗುತ್ತದೆ. ಪ್ರಸ್ತುತ ದೇಶೀಯವಾಗಿ ರೇಡಿಯೋ ಕಾಲರ್ ಅಭಿವೃದ್ಧಿ ಪಡಿಸಿದ್ದು, ಹೆಚ್ಚಿನ ರೇಡಿಯೋ ಕಾಲರ್ ಅಳವಡಿಸಲು ಕ್ರಮ ವಹಿಸಲಾಗಿದೆ ಎಂದರು.

ಆನೆಗಳ ಚಲನವಲನದ ಬಗ್ಗೆ ಜಿಲ್ಲಾಡಳಿತ, ಪಂಚಾಯಿತಿ ಮತ್ತು ಸಂಬಂಧಿತ ಗ್ರಾಮದ ಜನರಿಗೆ ಮಾಹಿತಿ ನೀಡಲು ವಾಟ್ಸ್ ಅಪ್ ಗ್ರೂಪ್ ರಚಿಸಲು ಕೂಡ ಸೂಚಿಸಲಾಗಿದೆ. ಈ ಮೂಲಕ ಜನರನ್ನು ಎಚ್ಚರಿಸಿದರೆ ಸಾವಿನ ಸಂಖ್ಯೆ ತಡೆಯಬಹುದು ಎಂದು ಈಶ್ವರ್‌ ಖಂಡ್ರೆ ಹೇಳಿದರು.

ಅಧ್ಯಯನಕ್ಕೆ ಸೂಚನೆ:

ಆನೆಗಳ ಸಂಸತಿ ನಿಯಂತ್ರಿಸಲು ಸಂತಾನಹರಣ ಪ್ರಕ್ರಿಯೆ ನಡೆಸಬೇಕು ಎಂಬ ಸಲಹೆ ಬಂದಿದೆ. ಈ ನಿಟ್ಟಿನಲ್ಲಿ ಭಾರತೀಯ ವಿಜ್ಞಾನ ಮಂದಿರ (ಐಐಎಸ್.ಸಿ)ಕ್ಕೆ ಜಾಗತಿಕವಾಗಿ ಆನೆಗಳ ಸಂತಾನ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಅಧ್ಯಯನ ನಡೆಸುವ ಹೊಣೆ ನೀಡಲಾಗಿದೆ. ಅಧ್ಯಯನ ವರದಿ ಬಂದ ಬಳಿಕ ಸುಪ್ರೀಂಕೋರ್ಟ್ ತೀರ್ಪು, ವನ್ಯ ಜೀವಿ ಸಂರಕ್ಷಣಾ ಕಾಯಿದೆ ನಿಯಮಾವಳಿಗಳ ರೀತ್ಯ ಕ್ರಮ ವಹಿಸಲಾಗುವುದು ಎಂದರು.

ಇದರ ಜೊತೆಗೆ ಆನೆಗಳಿಗೆ ಕಾಡಿನಲ್ಲಿ ಆಹಾರ ಮತ್ತು ನೀರಿನ ವ್ಯವಸ್ಥೆ ಆದಲ್ಲಿ, ಅವು ನಾಡಿಗೆ ಬರುವುದಿಲ್ಲ ಎಂಬ ಅಭಿಪ್ರಾಯವಿದೆ. ಈ ಹಿನ್ನೆಲೆಯಲ್ಲಿ ಕಾಡಿನಲ್ಲಿ ಹಂತ ಹಂತವಾಗಿ ನೀಲಗಿರಿ ಮತ್ತು ಅಕೇಶಿಯಾ ಮರಗಳನ್ನು ತೆರವು ಮಾಡಿ, ಆನೆಗಳಿಗೆ ಪ್ರಿಯವಾದ ಬಿದಿರು, ಬೈನೆ, ವಾಟೆ, ಹಲಸು, ಹುಲ್ಲು ಇತ್ಯಾದಿ ಮರ ಬೆಳೆಸಲು ಸಹ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸಭೆಯಲ್ಲಿ ಸಂಸತ್ ಸದಸ್ಯ ಶ್ರೇಯಸ್ ಪಟೇಲ್, ಶಾಸಕರುಗಳಾದ ರಾಜೇಗೌಡ, ಎಚ್.ಕೆ. ಸುರೇಶ್, ಸಿಮೆಂಟ್ ಮಂಜು, ಮಾಜಿ ಸಚಿವ ಬಿ. ಶಿವರಾಂ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ ಮತ್ತಿತರರು ಉಪಸ್ಥಿತರಿದ್ದರು.

Tags

Minister Ishwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X