Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪುಣ್ಯ ಕ್ಷೇತ್ರಗಳ ನದಿ, ಕಲ್ಯಾಣಿ ಸಮೀಪ...

ಪುಣ್ಯ ಕ್ಷೇತ್ರಗಳ ನದಿ, ಕಲ್ಯಾಣಿ ಸಮೀಪ ಸೋಪು, ಶ್ಯಾಂಪೂ ಮಾರಾಟ ನಿಷೇಧಿಸಿ : ಈಶ್ವರ್ ಖಂಡ್ರೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ9 March 2025 7:13 PM IST
share
ಪುಣ್ಯ ಕ್ಷೇತ್ರಗಳ ನದಿ, ಕಲ್ಯಾಣಿ ಸಮೀಪ ಸೋಪು, ಶ್ಯಾಂಪೂ ಮಾರಾಟ ನಿಷೇಧಿಸಿ : ಈಶ್ವರ್ ಖಂಡ್ರೆ ಸೂಚನೆ

ಬೆಂಗಳೂರು,: ಪುಣ್ಯ ಕ್ಷೇತ್ರಗಳ ನದಿ, ಸರೋವರ, ಕಲ್ಯಾಣಿಯ ದಂಡೆ, ಸ್ನಾನಘಟ್ಟಗಳ 500 ಮೀಟರ್ ವ್ಯಾಪ್ತಿಯಲ್ಲಿ ಸೋಪು, ಶ್ಯಾಂಪೂ ಮಾರಾಟ ಮಾಡದಂತೆ ನಿಷೇಧಿಸಲು ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರವಿವಾರ ಈ ಸಂಬಂಧ ತಮ್ಮ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿಯ ಮೂಲಕ ಸೂಚನೆ ನೀಡಿರುವ ಅವರು, ಸ್ನಾನಘಟ್ಟಗಳಲ್ಲಿ ಭಕ್ತರು ಶ್ಯಾಂಪೂ, ಸೋಪು ಬಳಸಿ ಸ್ನಾನ ಮಾಡಿ ಉಳಿದ ತುಂಡು ಮತ್ತು ಶ್ಯಾಂಪೂ ಪ್ಯಾಕೆಟ್ ಬಿಟ್ಟು ಹೋಗುತ್ತಿದ್ದು, ಇದೆಲ್ಲ ನದಿ ಸೇರಿ ನೊರೆ ಉಕ್ಕುತ್ತಿದೆ. ನೀರು ಕಲುಷಿತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ, ಕೊಳ, ಸರೋವರದ 500 ಮೀಟರ್ ವ್ಯಾಪ್ತಿಯಲ್ಲಿ ಸೋಪು, ಶ್ಯಾಂಪೂ ಮಾರಾಟ ಮಾಡದಂತೆ ನಿಷೇಧಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಅದೇ ರೀತಿ ನದಿ, ಸರೋವರ, ಕೊಳ, ಕಲ್ಯಾಣಿಗಳಲ್ಲಿ ಭಕ್ತರು ತಾವು ಉಟ್ಟ ಬಟ್ಟೆಯನ್ನು ವಿಸರ್ಜಿಸದಂತೆ ನಿರ್ಬಂಧಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಒಂದರೆಡು ರೂ. ಮೌಲ್ಯದ ಶ್ಯಾಂಪೂ ಪೊಟ್ಟಣ, ಕಡಿಮೆ ಬೆಲೆಯ ಸಣ್ಣ ಸೋಪುಗಳು ನದಿ, ಸರೋವರ, ಕಲ್ಯಾಣಗಳ ಬಳಿಯೇ ಇರುವ ಅಂಗಡಿಗಳಲ್ಲಿ ಲಭಿಸುತ್ತಿದ್ದು, ಸುಲಭವಾಗಿ ಖರೀದಿಸುವ ಜನರು ಅದನ್ನು ಬಳಸಿ ಉಳಿದ ಸೋಪು, ಶ್ಯಾಂಪೂ ಸ್ಯಾಚೆಟ್‍ಗಳನ್ನು ನೀರಿನಲ್ಲಿ ಅಥವಾ ದಂಡೆಯಲ್ಲಿ ಎಸೆದು ಹೋಗುತ್ತಿದ್ದು, ಇದು ನೀರಲ್ಲಿ ಬೆರೆತು ಜಲಚರಗಳು ಸಾವನ್ನಪ್ಪುತ್ತಿದ್ದರೆ, ಈ ನೀರು ಕುಡಿಯುವ ಜನ, ಜಾನುವಾರುಗಳು ಕಾಯಿಲೆಯಿಂದ ಬಳಸುವಂತಾಗಿದೆ. ಈ ನಿಟ್ಟಿನಲ್ಲಿ ನದಿಗಳ ಸಮೀಪ ಶ್ಯಾಂಪೂ, ಸೋಪು ಲಭ್ಯವಾಗದಂತೆ ತಡೆಯುವುದು ಅನಿವಾರ್ಯವಾಗಿದೆ ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ.

ಇದರ ಜೊತೆಗೆ ಜನರು ನದಿಗಳಲ್ಲಿ ವಸ್ತ್ರಗಳನ್ನು ವಿಸರ್ಜನೆ ಮಾಡುತ್ತಿದ್ದು, ಕೆಲವು ತೀರ್ಥ ಕ್ಷೇತ್ರಗಳಲ್ಲಿ ರಾಶಿ ರಾಶಿ ವಸ್ತ್ರ ಬಿದ್ದಿರುವುದು ಗೋಚರಿಸುತ್ತದೆ. ಈ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ನಿಯಮವನ್ನು ಅನುಷ್ಠಾನಗೊಳಿಸುವಂತೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X