ಕೇಂದ್ರ ಸರಕಾರ ಶೇ.30ರಷ್ಟು ಮಾತ್ರ ರಸಗೊಬ್ಬರ ಪೂರೈಸಿದೆ : ಈಶ್ವರ್ ಖಂಡ್ರೆ

ಬೆಂಗಳೂರು : ರೈತರ ಅವಶ್ಯಕತೆಗೆ ಅನುಗುಣವಾಗಿ ರಾಜ್ಯಗಳಿಗೆ ರಸಗೊಬ್ಬರ ಪೂರೈಸಬೇಕಾದ್ದು ಕೇಂದ್ರ ಸರಕಾರದ ಜವಾಬ್ದಾರಿ. ನಮ್ಮ ಬೇಡಿಕೆಗೆ ಪ್ರತಿಯಾಗಿ ಕೇವಲ ಶೇ.30ರಷ್ಟು ಮಾತ್ರ ರಸಗೊಬ್ಬರ ಪೂರೈಸಿರುವುದರಿಂದ ನಮ್ಮ ರಾಜ್ಯದಲ್ಲಿ ರಸಗೊಬ್ಬರದ ತೀವ್ರ ಕೊರತೆ ಉದ್ಭವವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ತಾರತಮ್ಯ ಮಾಡದೆ ರಾಜ್ಯದ ರೈತರ ಹಿತಕಾಯಲು ಪೂರ್ಣ ಪ್ರಮಾಣದಲ್ಲಿ ರಸಗೊಬ್ಬರ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.
ಬೀದರ್ ಜಿಲ್ಲೆಯಲ್ಲಿ ರಸಗೊಬ್ಬರವನ್ನು ಹೆಚ್ಚಿನ ದರಕ್ಕೆ ಮತ್ತು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಮತ್ತು ಅಂತಹ ಮಳಿಗೆಗೆಳ ಮೇಲೆ ದಾಳಿ ಮಾಡಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿರುವುದಾಗಿಯೂ ಈಶ್ವರ್ ಖಂಡ್ರೆ ತಿಳಿಸಿದರು.
Next Story




