Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಬಿ ಜಿ ರಾಮ್ ಜಿ: ಗ್ರಾಮೀಣ ಜನರಿಗೆ...

ವಿಬಿ ಜಿ ರಾಮ್ ಜಿ: ಗ್ರಾಮೀಣ ಜನರಿಗೆ ಗರಿಷ್ಠ ಉದ್ಯೋಗ ನೀಡಲು ಸಚಿವ ಈಶ್ವರ್‌ ಖಂಡ್ರೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ5 Aug 2026 1:28 PM IST
share
ವಿಬಿ ಜಿ ರಾಮ್ ಜಿ: ಗ್ರಾಮೀಣ ಜನರಿಗೆ ಗರಿಷ್ಠ ಉದ್ಯೋಗ ನೀಡಲು ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಬೆಂಗಳೂರು : ಮಳೆ ಕೊರತೆಯ ಪ್ರಸಕ್ತ ಸನ್ನಿವೇಶದಲ್ಲಿ ಎಲ್ಲ ಅರ್ಹ ಗ್ರಾಮೀಣರಿಗೆ ಉದ್ಯೋಗ ಖಾತ್ರಿಪಡಿಸಲು ಮತ್ತು ನಿತ್ಯ 5 ಲಕ್ಷ ಮಾನವ ದಿನ ಸೃಜನೆಗಾಗಿ ಗರಿಷ್ಠ ಉದ್ಯೋಗ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್‌ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಇಲಾಖೆಯ ಕಾರ್ಯದರ್ಶಿಯವರಿಗೆ ಲಿಖಿತ ಸೂಚನೆ ನೀಡಿರುವ ಅವರು, ಮನ್ರೇಗಾದ ಬದಲಾದ ರೂಪ ವಿಬಿಜಿ ರಾಮ್ ಜಿಯನ್ನು ಆರ್ಥಿಕ ಹೊರೆಯ ನಡುವೆಯೂ ರಾಜ್ಯ ಸರ್ಕಾರ ಬಡವರ, ವಂಚಿತರ ಹಿತದೃಷ್ಟಿಯಿಂದ ಜಾರಿಗೆ ತಂದಿದ್ದು, ಪ್ರಮಾಣಿತ ಕಾರ್ಯಾಚರಣೆ ಮಾನದಂಡ, ಆಡಳಿತಾತ್ಮಕ, ತಾಂತ್ರಿಕ ಮಾರ್ಗಸೂಚಿಗಳನ್ನು ಎಲ್ಲ ಗ್ರಾ.ಪಂ.ಗಳಿಗೆ ಕಳುಹಿಸಿ ಗರಿಷ್ಠ ಪ್ರಮಾಣದಲ್ಲಿ ಉದ್ಯೋಗ ನೀಡಿ, ಶಾಶ್ವತ ಮತ್ತು ಗುಣಮಟ್ಟದ ಆಸ್ತಿ ಸೃಷ್ಟಿಸುವಂತೆ ಆದೇಶಿಸಿದ್ದಾರೆ.

ಕೆಲವು ಪಿಡಿಓಗಳು ವಿಬಿಜಿ ರಾಮ್ ಜಿ ಸ್ಪಷ್ಟ ಮಾರ್ಗಸೂಚಿ ಇಲ್ಲದ ಕಾರಣ ಅನುಷ್ಠಾನಕ್ಕೆ ತೊಡಕಾಗಿದೆ ಎಂದು ತಿಳಿಸಿದ್ದು, ವಿಬಿಜಿ ರಾಮ್ ಜಿಗೆ ಸಂಬಂಧಿಸಿದ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಓ.ಪಿ.), ತಾಂತ್ರಿಕ ಮತ್ತು ಆಡಳಿತಾತ್ಮಕ ಮಾರ್ಗಸೂಚಿ, ಮಾದರಿ, ಅಂದಾಜು, ಕಾಮಗಾರಿ, ವೆಚ್ಚದ ಮಿತಿ, 60:40 ಕೂಲಿ-ಸಾಮಗ್ರಿ ಅನುಪಾತ, ಯುಕ್ತಧಾರಾ ಪೋರ್ಟಲ್ ಕಾರ್ಯವಿಧಾನ ಹಾಗೂ ಹೊಣೆಗಾರಿಕೆ ನಕ್ಷೆ, ಕ್ರಿಯಾ ಯೋಜನೆ ಸ್ವರೂಪ ಕುರಿತಂತೆ ಸ್ಪಷ್ಟ ಮಾಹಿತಿ ನೀಡಲು ಸೂಚನೆ ನೀಡಿದ್ದಾರೆ.

ಮುಖ್ಯಕಾರ್ಯದರ್ಶಿಗಳ ಸಮ್ಮುಖದಲ್ಲಿ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಿಗಳ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಂದರ್ಭದಲ್ಲಿ ಯಾವುದೇ ಸಿಇಓ ವಿಬಿಜಿ ರಾಮ್ ಜಿ ಅನುಷ್ಠಾನದಲ್ಲಿ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿಲ್ಲವಾದರೂ, ಕೆಲವೆಡೆ ಗೊಂದಲ ಇದ್ದು, ಇದನ್ನು ನಿವಾರಿಸಿ ಎಂದು ತಿಳಿಸಿದ್ದಾರೆ.

ಮಳೆ ಕೊರತೆಯಿಂದ ರೈತರು, ಗ್ರಾಮೀಣರು ಸಂಕಷ್ಟದಲ್ಲಿರುವ ಪ್ರಸಕ್ತ ಸನ್ನಿವೇಶದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಗ್ರಾಮೀಣ ಬಡವರಿಗೆ, ವಂಚಿತರಿಗೆ, ಶೋಷಿತರಿಗೆ, ವಿಶೇಷ ಚೇತನರಿಗೆ, ಮಹಿಳೆಯರಿಗೆ, ದಲಿತರಿಗೆ ಉದ್ಯೋಗ ದೊರಕದಿದ್ದರೆ ಯೋಜನೆಯ ಉದ್ದೇಶವೇ ಅರ್ಥ ಕಳೆದುಕೊಳ್ಳುತ್ತದೆ ಎಂದು ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ವಾರಾಂತ್ಯದೊಳಗೆ ಮಾರ್ಗಸೂಚಿ ಕಳಿಸಿ, ಮನೆ ಮನೆ ಪ್ರಚಾರ ಮಾಡಿ:

ವಿಬಿಜಿ ರಾಮ್ ಜಿ ಅಡಿಯಲ್ಲಿ ಅನುಮೋದಿಸಲಾಗಿರುವ 318 ಕಾಮಗಾರಿಗಳ ವಿವರ, ಮಾದರಿ, ವಿನ್ಯಾಸ, ಬಿಓಸಿ ದರಪಟ್ಟಿ, ಪ್ರಮಾಣಿತ ಮಾನದಂಡ, ತಾಂತ್ರಿಕ ಟಿಪ್ಪಣಿ ಇತ್ಯಾದಿ ಸ್ಪಷ್ಟ ಮಾರ್ಗಸೂಚಿಯನ್ನು ಈ ವಾರಾಂತ್ಯದೊಳಗೆ ವಿಬಿಜಿ ರಾಮ್ ಜಿ ಯ ಎಲ್ಲ ಅನುಷ್ಠಾನಾಧಿಕಾರಿಗಳಿಗೆ ರವಾನಿಸಿ, ಕಟ್ಟುನಿಟ್ಟಾಗಿ ಯೋಜನೆಯನ್ನು ಜಾರಿ ಮಾಡಲು ಸೂಚನೆ ನೀಡಿದ್ದಾರೆ.

ಐಪಿಸಿ ಅಂದರೆ ಅಂತರ ವ್ಯಕ್ತಿ ಸಂವಹನಕ್ಕೆ ಹೆಚ್ಚಿನ ಒತ್ತು ನೀಡಿ ಮನೆ ಮನೆ ಪ್ರಚಾರ ಮಾಡಿ ಗ್ರಾಮೀಣ ಜನರಿಗೆ ಹೊಸ ಯೋಜನೆ ಅಡಿಯಲ್ಲಿ ನೀಡುವ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿ, ರಾಜ್ಯದಲ್ಲಿ ಪ್ರತಿ ನಿತ್ಯ ಕನಿಷ್ಠ 5 ಲಕ್ಷ ಜನರಿಗೆ ಉದ್ಯೋಗದ ಖಾತ್ರಿ ಒದಗಿಸಲು ಮತ್ತು ಪ್ರತಿ ತಿಂಗಳು ಕನಿಷ್ಠ 1.5 ಕೋಟಿ ಮಾನವ ದಿನ ಹಾಗೂ ಶಾಶ್ವತವಾದ ಗುಣಮಟ್ಟದ ಗ್ರಾಮೀಣ ಆಸ್ತಿ ಸೃಜನೆಗೆ ಕ್ರಮ ವಹಿಸಲು ಈಶ್ವರ್‌ ಖಂಡ್ರೆ ಸೂಚಿಸಿದ್ದಾರೆ.

Tags

Ishwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X