Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೇಡಿಕೆಗೆ ಪ್ರತಿಯಾಗಿ ಉದ್ಯೋಗ ನೀಡಿ:...

ಬೇಡಿಕೆಗೆ ಪ್ರತಿಯಾಗಿ ಉದ್ಯೋಗ ನೀಡಿ: ಸಿಇಒ, ಪಿಡಿಒಗಳಿಗೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ

ವಿಬಿ ಜಿ ರಾಮ್ ಜಿ: ಬೆಂಗಳೂರು ದಕ್ಷಿಣ, ಹಾಸನ, ಚಿಕ್ಕಮಗಳೂರು, ಧಾರವಾಡ, ಬಾಗಲಕೋಟೆ ಜಿಲ್ಲೆಗಳ ಪ್ರಗತಿ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ28 Aug 2026 3:16 PM IST
share
ಬೇಡಿಕೆಗೆ ಪ್ರತಿಯಾಗಿ ಉದ್ಯೋಗ ನೀಡಿ: ಸಿಇಒ, ಪಿಡಿಒಗಳಿಗೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಬೆಂಗಳೂರು : ರಾಜ್ಯದ 101 ತಾಲೂಕಿನಲ್ಲಿ ಬರಪರಿಸ್ಥಿತಿ ಇದ್ದು, ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ ವಿಬಿ ಜಿ ರಾಮ್ ಜಿ ಅಡಿಯಲ್ಲಿ ಉದ್ಯೋಗ ನೀಡಬೇಕು ಮತ್ತು 15 ದಿನಗಳ ಒಳಗಾಗಿ ಕೂಲಿ ಹಣ ಪಾವತಿ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಈಶ್ವರ್‌ ಬಿ.ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರು ದಕ್ಷಿಣ, ಹಾಸನ, ಚಿಕ್ಕಮಗಳೂರು, ಧಾರವಾಡ, ಬಾಗಲಕೋಟೆ ಜಿಲ್ಲೆಗಳಲ್ಲಿ ವಿಬಿ ಜಿ ರಾಮ್ ಜಿ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿದ ಅವರು, ಬೆಂಗಳೂರು ಸುತ್ತಮುತ್ತ 382 ರೂ.ಗೆ ಕೂಲಿ ಕಾರ್ಮಿಕರು ಸಿಗುತ್ತಿಲ್ಲ ಎಂಬುದು ಸರಿಯಲ್ಲ. ಅವರ ಗ್ರಾಮದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯ ಆಗುತ್ತದೆ, ಕೆರೆಯ ಹೂಳು ತೆಗೆದರೆ ನೀರಿನ ಸಂಗ್ರಹ ಹೆಚ್ಚುತ್ತದೆ, ಉತ್ತಮ ರಸ್ತೆ ಆಗುತ್ತದೆ, ಕೊಳವೆ ಬಾವಿಗಳ ಮರುಪೂರಣ ಆಗುತ್ತದೆ, ಅಂತರ್ಜಲ ಹೆಚ್ಚುತ್ತದೆ ಎಂದು ಮನವೊಲಿಸಿದರೆ ಜನರು ಕೆಲಸಕ್ಕೆ ಬರುತ್ತಾರೆ ಎಂದು ಸಚಿವರು ಹೇಳಿದರು.

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಕಳೆದ ವರ್ಷ ನರೇಗಾದಡಿ ನೀಡಲಾಗಿದ್ದ ಉದ್ಯೋಗಕ್ಕೆ ಹೋಲಿಸಿದರೆ ವಿಬಿಜಿ ರಾಮ್ ಜಿಯಲ್ಲಿ ಶೇ.80ರಷ್ಟು ಕಡಿಮೆಯಾಗಿದೆ. ಜಿಲ್ಲೆಯ 120 ಗ್ರಾಮ ಪಂಚಾಯತಿ ಇದ್ದು, ಪ್ರತಿ ಪಂಚಾಯತಿ ವ್ಯಾಪ್ತಿಯಲ್ಲಿ ನಿತ್ಯ ಕನಿಷ್ಠ 50 ಜನರಿಗೆ ಕೆಲಸ ಕೊಟ್ಟರೂ, 6000 ಜನರಿಗೆ ಉದ್ಯೋಗ ಕಲ್ಪಿಸಬಹುದು ಎಂದರು.

ಹಲವು ಗ್ರಾಮ ಪಂಚಾಯತಿಗಳಲ್ಲಿ ವಿಬಿಜಿ ರಾಮ್ ಜಿ ಕೂಲಿ ಹಣ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಲಾಗಿನ್ ನಲ್ಲೇ ಉಳಿದಿದೆ. ಈ ರೀತಿ ವಿಳಂಬ ಮಾಡಿದರೆ ದಂಡ ಹಾಕಲೂ ಅವಕಾಶವಿದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿ ಪಿಡಿಓಗಳು ವೇತನ ಪಾವತಿಗೆ ತತ್ ಕ್ಷಣ ಕ್ರಮ ವಹಿಸಬೇಕು. ವಾರದಲ್ಲಿ 2 ದಿನ ಖಜಾನೆಗೆ ಹೋಗಿ ಹಣ ಪಾವತಿ ಮಾಡಿಸಲು ಆಸಕ್ತಿ ವಹಿಸಬೇಕು. ಸಕಾಲದಲ್ಲಿ ವೇತನ ಬಂದರೆ ಜನರೂ ಕೆಲಸಕ್ಕೆ ಬರುತ್ತಾರೆ ಎಂದರು.

ಅರಣ್ಯ ಅನುಮತಿಗೆ ಪ್ರಯತ್ನ: ಈಶ್ವರ ಖಂಡ್ರೆ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗ್ರಾಮೀಣ ಕುಡಿಯುವ ನೀರು ಪೂರೈಕೆ ಯೋಜನೆಗೆ ಕೆರೆ, ಸರೋವರ, ನದಿಗಳಿಂದ ನೀರು ತರಲು ಕೊಳವೆ ಅಳವಡಿಕೆಗೆ ಅರಣ್ಯ ಅನುಮತಿ ದೊರಕದೆ ಕಾಮಗಾರಿ ವಿಳಂಬವಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ, ಕೇಂದ್ರ ಸರ್ಕಾರಕ್ಕೆ ಕಳಿಸಿ ನಿಯಮಾನುಸಾರ ಶೀಘ್ರ ಅನುಮತಿ ಪಡೆಯಲು ಕ್ರಮ ವಹಿಸಲಾಗುವುದು ಎಂದು ಈಶ್ವರ್‌ ಖಂಡ್ರೆ ತಿಳಿಸಿದರು.

ಧಾರವಾಡ, ಚಿಕ್ಕಮಗಳೂರು, ಹಾಸನ, ಬಾಗಲಕೋಟೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ತಾಲೂಕು ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಪಿಡಿಒಗಳೊಂದಿಗೆ ಸಚಿವರು ಪ್ರಗತಿ ಪರಿಶೀಲನೆ ನಡೆಸಿ ಸೂಕ್ತ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ, ಪೌರಾಡಳಿತ ಇಲಾಖೆಯ ಸಚಿವರಾಗಿ ಹೆಚ್.ಸಿ. ಬಾಲಕೃಷ್ಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಗಳಾದ ಸಮೀರ್ ಶುಕ್ಲ, ಡಿ. ರಂದೀಪ್, ಆಯುಕ್ತರಾದ ಡಾ. ಅರುಂಧತಿ ಚಂದ್ರಶೇಖರ್ ಮತ್ತಿತರರು ಪಾಲ್ಗೊಂಡಿದ್ದರು.

Tags

Ishwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X