Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯ ಸರಕಾರದಲ್ಲಿ ಶಿಕ್ಷಣ ಸಚಿವ ಯಾರು...

ರಾಜ್ಯ ಸರಕಾರದಲ್ಲಿ ಶಿಕ್ಷಣ ಸಚಿವ ಯಾರು ಎಂಬುದೇ ಗೊತ್ತಾಗುತ್ತಿಲ್ಲ: ಮಾಜಿ ಸಚಿವ ಬಿ.ಸಿ. ನಾಗೇಶ್

ವಾರ್ತಾಭಾರತಿವಾರ್ತಾಭಾರತಿ18 Aug 2023 3:59 PM IST
share
ರಾಜ್ಯ ಸರಕಾರದಲ್ಲಿ ಶಿಕ್ಷಣ ಸಚಿವ ಯಾರು ಎಂಬುದೇ ಗೊತ್ತಾಗುತ್ತಿಲ್ಲ: ಮಾಜಿ ಸಚಿವ ಬಿ.ಸಿ. ನಾಗೇಶ್

ಬೆಂಗಳೂರು: ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ತಕ್ಷಣ ನೂತನ ಶಿಕ್ಷಣ ನೀತಿ (ಎನ್‍ಇಪಿ) ಬದಲಿಸುವ ಮಾತನಾಡಿದ್ದಾರೆ. ಅದರಲ್ಲಿರುವ ಲೋಪ ದೋಷ, ಅವುಗಳನ್ನು ಬದಲಿಸುವ ಮಾತನಾಡಿಲ್ಲ. ಇವತ್ತಿನ ರಾಜ್ಯ ಸರಕಾರದಲ್ಲಿ ಯಾರು ಶಿಕ್ಷಣ ಸಚಿವ ಎಂಬುದೇ ಗೊತ್ತಾಗುತ್ತಿಲ್ಲ ಎಂದು ಆಕ್ಷೇಪಿಸಿದರು ಎಂದು ರಾಜ್ಯದ ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಸಿದ್ದರಾಮಯ್ಯ, ʼಡಿ.ಕೆ.ಶಿವಕುಮಾರ್, ಮಧು ಬಂಗಾರಪ್ಪ ಅವರಲ್ಲಿ ಯಾರು ಶಿಕ್ಷಣ ಸಚಿವರುʼ ಎಂದು ಪ್ರಶ್ನೆ ಮಾಡಿದರು.

ʼʼಸರಕಾರದ ಹಿಂದಿರುವ ಬುದ್ಧಿಜೀವಿಗಳು ಶಿಕ್ಷಣ ಸಚಿವರೇ ಎಂದು ಕೇಳಿದ ಅವರು, ʼʼಅವರು ತಂದಿದ್ದನ್ನು ನಾವ್ಯಾಕೆ ಮಾಡಬೇಕ್ರಿʼʼ ಎಂಬ ಹಾರಿಕೆಯ ಉತ್ತರ ಸರಿಯಲ್ಲ ಎಂದು ಅವರು ಟೀಕಿಸಿದರು.

ಭಾತೀಯ ಯೋಚನೆಗೆ ಅನುಗುಣವಾಗಿ ಶಿಕ್ಷಣ ಪದ್ಧತಿ ಇರಬೇಕೆಂದು ಡಾ.ಅಂಬೇಡ್ಕರ್, ನೇತಾಜಿ ಅವರು ಅನೇಕ ಬಾರಿ ಮಾತನಾಡಿದ್ದಾರೆ. ಸ್ವದೇಶಿ ಯೋಚನೆಗಳನ್ನು ತರಬೇಕೆಂದು ಮಹಾತ್ಮ ಗಾಂಧೀಜಿ ನುಡಿದಿದ್ದರು ಎಂದು ಹೇಳಿದರು. ಶಿಕ್ಷಣ ತಜ್ಞರ ಸಮಿತಿ ಮಾಡಿ ಪಠ್ಯಕ್ರಮ, ಪಾಠದಲ್ಲಿ ಬದಲಾವಣೆ ಮಾಡಲಾಗುತ್ತಿತ್ತು. ಇದೀಗ ಕಾಂಗ್ರೆಸ್ ರಿಸರ್ಚ್ ಟೀಮಿನಿಂದ ಬಂದ ಸಲಹೆಗಳನ್ನು ಮತ್ತು ಪಾಠಗಳನ್ನು ಸೇರಿಸಲು ನಿರ್ಧರಿಸಿದ್ದಾರೆ ಎಂದು ಆರೋಪಿಸಿದರು.

ಶಿಕ್ಷಣ ಇಲಾಖೆಯನ್ನು ರಾಜಕೀಯಕರಣಗೊಳಿಸುತ್ತಿರುವ ರಾಜ್ಯ ಸರಕಾರವಿದು ಎಂದು ಟೀಕಿಸಿದ ಅವರು, ಎನ್‍ಇಪಿಯನ್ನು ಮೊದಲು ಓದಬೇಕು. ಅಲ್ಲಿನ ಲೋಪದೋಷಗಳನ್ನು ತಿಳಿಸಿ ಎಂದು ಆಗ್ರಹಿಸಿದರು. ಮೋದಿಜಿ ಅವರ ಸರಕಾರವು ಶ್ರೇಷ್ಠ ವಿಜ್ಞಾನಿ ಕಸ್ತೂರಿರಂಗನ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಅದು 6 ವರ್ಷಗಳ ಕಾಲ ಅಧ್ಯಯನ ನಡೆಸಿ ಶಿಫಾರಸು ನೀಡಿತ್ತು. ಈ ಶಿಫಾರಸುಗಳನ್ನು ಜನರ ಮುಂದಿಡಲಾಗಿತ್ತು ಎಂದು ತಿಳಿಸಿದರು. 2 ಲಕ್ಷಕ್ಕೂ ಹೆಚ್ಚು ಸಲಹೆಗಳನ್ನು ಪಡೆದು ಅವುಗಳನ್ನೂ ಸೇರಿಸುವ ಪ್ರಯತ್ನ ಮಾಡಿದ್ದರು ಎಂದರು. ಗ್ರಾಮಸಭೆಗಳಲ್ಲೂ ಇದನ್ನು ಇಡಲಾಗಿತ್ತು ಎಂದರು.

ರಾಜಕೀಯ ದೃಷ್ಟಿ ಮತ್ತು ವಿರೋಧಕ್ಕಾಗಿಯೇ ವಿರೋಧ ಮಾಡುತ್ತಿದ್ದಾರೆ. ಕರ್ನಾಟಕದ ಭವಿಷ್ಯ, ಇಲ್ಲಿನ ಯುವಜನರ ದೃಷ್ಟಿಯಿಂದ ಇದು ಕೆಟ್ಟ ನಿರ್ಣಯವಾಗಲಿದೆ. ಸ್ಪರ್ಧೆಯ ದೃಷ್ಟಿಯಿಂದಲೂ ಇದು ಸರಿಯಲ್ಲ ಎಂದು ಅವರು ನುಡಿದರು. ಸಿದ್ದರಾಮಯ್ಯನವರ ಮೊಮ್ಮಗನನ್ನು ಇಂಟರ್‍ನ್ಯಾಶನಲ್ ಸ್ಕೂಲಿನಲ್ಲಿ ಓದುತ್ತಿದ್ದಾರೆ. ರಾಜಕಾರಣಿಗಳ ಮಕ್ಕಳು ಸಿಬಿಎಸ್‍ಇ, ಐಸಿಎಸ್‍ಇ ಶಿಕ್ಷಣದಲ್ಲಿ ಓದಿಸುತ್ತಿದ್ದಾರೆ ಎಂದು ಅವರು ವಿವರಿಸಿದರು. ನಮ್ಮ ಬಡ ಮಕ್ಕಳು ಮೆಕಾಲೆಯ ಗುಲಾಮಿ ಶಿಕ್ಷಣ ಪದ್ಧತಿಯಡಿ ಓದಬೇಕೆಂಬ ಆಶಯ ಇವರದು ಎಂದು ಟೀಕಿಸಿದರು.

ರಾಜ್ಯದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X