Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹೆಣದ ಮೇಲೆ ರಾಜಕೀಯ ಮಾಡೋದು ಬಿಜೆಪಿ,...

ಹೆಣದ ಮೇಲೆ ರಾಜಕೀಯ ಮಾಡೋದು ಬಿಜೆಪಿ, ಜೆಡಿಎಸ್ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್

"ವಿಮಾನ ದುರಂತದಲ್ಲಿ ನಾವು ಬಿಜೆಪಿ, ಜೆಡಿಎಸ್ ಥರ ನೀಚ ರಾಜಕೀಯ ಮಾಡಲ್ಲ"

ವಾರ್ತಾಭಾರತಿವಾರ್ತಾಭಾರತಿ16 Jun 2025 1:59 PM IST
share
ಹೆಣದ ಮೇಲೆ ರಾಜಕೀಯ ಮಾಡೋದು ಬಿಜೆಪಿ, ಜೆಡಿಎಸ್ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ.16 “ನಾವು ಅಹಮದಾಬಾದ್ ವಿಮಾನ ದುರಂತದ ಬಗ್ಗೆ ರಾಜಕೀಯ ಮಾಡೋದಿಲ್ಲ. ಹೆಣದ ಮೇಲೆ ರಾಜಕೀಯ ಮಾಡುವುದು ಏನಿದ್ದರೂ ಬಿಜೆಪಿ ಹಾಗೂ ಜೆಡಿಎಸ್ ಕೆಲಸ. ನಾವು ಅವರಂತೆ ನೀಚ ರಾಜಕೀಯ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ಅಹಮದಾಬಾದ್ ವಿಮಾನ ದುರಂತದ ಬಗ್ಗೆ ಕೇಳಿದಾಗ, “ಅಹಮದಾಬಾದ್ ವಿಮಾನ ಅಪಘಾತದಂತಹ ದುರಂತ ದೇಶದಲ್ಲಿ ಮಾತ್ರವಲ್ಲ ಪ್ರಪಂಚದಲ್ಲಿ ಎಲ್ಲಿಯೂ ನಡೆಯಬಾರದು. ಈ ದುರಂತದಲ್ಲಿ ಅನೇಕರು ಸುಟ್ಟುಹೋಗಿದ್ದಾರೆ. ಆ ದುರಂತದ ಸ್ಥಳ ನೋಡಿದರೆ ಆಘಾತವಾಗುತ್ತದೆ. ಅಕಸ್ಮಾತ್ 500 ಮೀಟರ್ ಮುಂದಕ್ಕೆ ಹೋಗಿ ವಿಮಾನ ಅಪ್ಪಳಿಸಿದ್ದರೂ ಸಾವಿರಾರು ಮಂದಿಯ ಜೀವಹಾನಿಯಾಗುತ್ತಿತ್ತು. ಈಗ ವೈದ್ಯಕೀಯ ಹಾಸ್ಟೆಲ್ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೆಲವು ವಿದ್ಯಾರ್ಥಿಗಳಿಗೆ ಮಾನಸಿಕ ಆಘಾತವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಾವು ಕೆಲವರನ್ನು ಭೇಟಿ ಮಾಡಿ ಮಾತನಾಡಿದೆವು. ಈ ಅಪಘಾತ ಕುರಿತು ಬ್ಲಾಕ್ ಬಾಕ್ಸ್ ತನಿಖೆ ವರದಿ ಬರಬೇಕಾಗಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಅಲ್ಲಿ ಹೋಗಿ ಸಾಂತ್ವನ ಹೇಳಿದ್ದೇವೆ” ಎಂದು ಮಾಹಿತಿ ನೀಡಿದರು.

ಈ ಘಟನೆ ನಂತರ ವಿಮಾನಯಾನ ಸಚಿವರ ಕಾರ್ಯವೈಖರಿ ಬಗ್ಗೆ ಪ್ರಶ್ನೆ ಮೂಡುತ್ತಿವೆ ಎಂದು ಕೇಳಿದಾಗ, “ಬಿಜೆಪಿ ಹಾಗೂ ಜೆಡಿಎಸ್ ನವರಿಗೆ ಹೆಣದ ಮೇಲೆ ರಾಜಕೀಯ ಮಾಡುವುದೇ ಕೆಲಸ. ನಾವು ಹಳೇ ಪ್ರಕರಣ ಹಾಗೂ ಈ ಪ್ರಕರಣವನ್ನು ಮುಂದಿಟ್ಟುಕೊಂಡು ಟೀಕೆ ಮಾಡಬಹುದು. ಆದರೆ ನಾವು ಅವರ ಮಟ್ಟಕ್ಕೆ ಇಳಿಯುವುದಿಲ್ಲ. ಈ ವಿಚಾರದಲ್ಲಿ ಅನೇಕ ತಾಂತ್ರಿಕ ಅಂಶಗಳಿವೆ. ನಾನು ಅವುಗಳ ತಜ್ಞನಲ್ಲ. ಈ ಎಲ್ಲಾ ವಿಚಾರವಾಗಿ ಚರ್ಚೆ ಆಗುತ್ತಿದೆ. ಆದರೆ ಈ ವಿಚಾರವನ್ನು ರಾಜಕೀಯಗೊಳಿಸುವ ವ್ಯಕ್ತಿ ನಾನಲ್ಲ. ಈ ಸಮಯದಲ್ಲಿ ಕೇಂದ್ರ ಸಚಿವರ ಬಗ್ಗೆ ಟೀಕೆ ಮಾಡುವುದಿಲ್ಲ. ಇದು ದೇಶದ ಗಂಭೀರ ವಿಚಾರ” ಎಂದು ತಿಳಿಸಿದರು.

ರಾಜ್ಯ ಸರ್ಕಾರ ವಸೂಲಿ ಮಾಡುತ್ತಿರುವ ತೆರಿಗೆ ನೋಡಿದರೆ ನನ್ನ ಸರ್ಕಾರ ಇದ್ದಿದ್ದರೆ ಗೃಹಲಕ್ಷ್ಮಿಗೆ 5 ಸಾವಿರ ಕೊಡುತ್ತಿದ್ದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ. ಅವರು ಚೆನ್ನಾಗಿ ಆರೋಗ್ಯಕರವಾಗಿರಲಿ” ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X