Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಧ್ವನಿ ಇಲ್ಲದವರಿಗೆ ಧ್ವನಿ ಕೊಡುವುದೇ...

ಧ್ವನಿ ಇಲ್ಲದವರಿಗೆ ಧ್ವನಿ ಕೊಡುವುದೇ ಪತ್ರಿಕಾ ವೃತ್ತಿಯ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ24 July 2023 2:19 PM IST
share
ಧ್ವನಿ ಇಲ್ಲದವರಿಗೆ ಧ್ವನಿ ಕೊಡುವುದೇ ಪತ್ರಿಕಾ ವೃತ್ತಿಯ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮಾಧ್ಯಮಗಳಲ್ಲಿ ಸತ್ಯ ನ್ಯಾಯ ಸಿಗುತ್ತೆ ಎನ್ನುವ ಪರಿಸ್ಥಿತಿ ಈಗ ಇಲ್ಲ. ನನ್ನ ಬಗ್ಗೆ ಸುಳ್ಳು ಸುದ್ದಿ ಬರೆದರೂ ನಾನು ಯಾಕಪ್ಪಾ ಸುಳ್ಳು ಬರಿತೀಯ ಅಂತ ಕೇಳಲ್ಲ. ಜನ ಸಾಮಾನ್ಯರು ಇತರೆ ಮೂಲಗಳಿಂದ ಸತ್ಯ ತಿಳಿದುಕೊಳ್ಳುವಷ್ಟು ಸಮರ್ಥರಿದ್ದಾರೆ ಎಂದರು.

ಬೆಂಗಳೂರು, ಜು 24: ಮಹಾತ್ಮಗಾಂಧಿ, ಅಂಬೇಡ್ಕರ್ ಅವರೂ ಪತ್ರಕರ್ತರಾಗಿ ಪತ್ರಿಕಾ ವೃತ್ತಿಗೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಧ್ವನಿ ಇಲ್ಲದವರಿಗೆ ಧ್ವನಿ ನೀಡುವುದೇ ಪತ್ರಿಕಾ ವೃತ್ತಿಯ ಉದ್ದೇಶ, ಆಶಯ, ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರೆಸ್ ಕ್ಲಬ್ ಆಫ್ ಬೆಂಗಳೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇವತ್ತಿನ ಬಹಳಷ್ಟು ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎನ್ನುವುದು ನನ್ನ ಭಾವನೆ. ಪತ್ರಿಕಾ ವೃತ್ತಿಯ ಆಶಯಕ್ಕೆ ತಕ್ಕಂತೆ ಇದ್ದೇವಾ, ಇಲ್ಲವಾ ಎನ್ನುವ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯ ಇದೆ ಎಂದರು.

ಸಮಾಜದಲ್ಲಿ ಇನ್ನೂ ಶೇ25 ರಷ್ಟು ಮಂದಿಗೆ ಶಿಕ್ಷಣ ಸಿಕ್ಕಿಲ್ಲ. ಆರ್ಥಿಕ ಅಸಮಾನತೆ ಇನ್ನೂ ಹೆಚ್ಚಾಗಿದೆ. ಹೀಗಾಗಿ ಅವಕಾಶ ವಂಚಿತರನ್ನು ಮುಖ್ಯವಾಹಿನಿಗೆ ತರುವ, ಸಮಾಜದ ಎಲ್ಲರಿಗೂ ನ್ಯಾಯ ದೊರಕಿಸಿಕೊಡುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದ್ದೇನೆ ಎಂದರು.

ಸಾಮಾಜಿಕ ಅಸಮಾನತೆ ಹಿಂದಿನಿಂದ ಸಾಂಪ್ರದಾಯಿಕವಾಗಿ ನಡೆದುಕೊಂಡು ಬಂದಿದೆ. ಹೀಗಾಗಿ ಸಮಾಜದ ಬಹುಪಾಲು ಮಂದಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಮತ್ತು ತಾರತಮ್ಯಕ್ಕೆ ಬಲಿಯಾಗಿದ್ದಾರೆ. ಇದಕ್ಕಾಗಿಯೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಅನುಷ್ಠಾನಗೊಳ್ಳುವ ಹಿಂದಿನ ದಿನ ತಾವು ಮಾಡಿದ ಐತಿಹಾಸಿಕ ಭಾಷಣದಲ್ಲಿ, "ಆರ್ಥಿಕ-ಸಾಮಾಜಿಕ ಸ್ವಾತಂತ್ರ್ಯ ಸಿಗದೆ ಕೇವಲ ದೇಶಕ್ಕೆ ಆಡಳಿತಾತ್ಮಕ, ರಾಜಕೀಯ ಸ್ವಾತಂತ್ರ್ಯ ಸಿಕ್ಕರೆ ಅಸಮಾನತೆಗೆ ಬಲಿಯಾದ ಜನ ಮುಂದೊಂದು ದಿನ ಈ ಸ್ವಾತಂತ್ರ್ಯ ಸೌಧವನ್ನು ಧ್ವಂಸ ಮಾಡಿಬಿಡಬಹುದು" ಎಂದಿದ್ದರು ಎಂದು ತಿಳಿಸಿದರು.

ದುಡಿಯುವ ವರ್ಗಗಳು ಹಸಿವಿನಿಂದ ಮಲಗಿದರೂ ಪರ್ವಾಗಿಲ್ಲ, ಅನ್ನಭಾಗ್ಯ ಮಾತ್ರ ಜಾರಿ ಮಾಡಬಾರದು ಎನ್ನುವ ಹೊಟ್ಟೆ ತುಂಬಿದವರ ಮನಸ್ಥಿತಿ ಸಮಾಜ ವಿರೋಧಿಯಾದದ್ದು. ಜನರ ಜೇಬಿನಲ್ಲಿ ಹಣ ಇದ್ದರೆ ಮಾತ್ರ ದೇಶದ ಆರ್ಥಿಕತೆ ಬೆಳವಣಿಗೆ ಕಾಣುತ್ತದೆ. ಈ ಕಾರಣಕ್ಕೆ ನಮ್ಮ ಸರ್ಕಾರ ದುಡಿಯುವ ಜನರ ಜೇಬಿನಲ್ಲಿ ಹಣ ಇರುವ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಇದನ್ನು ವಿರೋಧಿಸುವ ಬಿಜೆಪಿಯವರ ಮನಸ್ಥಿತಿ ಸಮಾಜ ವಿರೋಧಿಯಾದದ್ದು. ಹೀಗಾಗಿ ಪತ್ರಿಕಾ ವೃತ್ತಿಯಲ್ಲಿರುವವರು ಬಡವರ ಪರವಾದ, ಜನರ ಪರವಾದ ಯೋಜನೆಗಳು ಜನರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದರು.

ಹಿರಿಯ ಪತ್ರಕರ್ತೆ ಡಾ.ಆರ್.ಪೂರ್ಣಿಮಾ ಅವರು ಪತ್ರಕರ್ತರ ಸಾಮಾಜಿಕ ಜವಾಬ್ದಾರಿ ಕುರಿತು ಉಪನ್ಯಾಸ ನೀಡಿದರು. ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಹಿರಿಯ ಪತ್ರಕರ್ತರು ಹಾಗೂ ಈ-ದಿನ ಸುದ್ದಿ ಸಂಸ್ಥೆಯ ಮುಖ್ಯಸ್ಥರಾದ ಡಿ.ಉಮಾಪತಿ, ಸುವರ್ಣ ನ್ಯೂಸ್ ಪ್ರಧಾನ ಸಂಪಾದಕರಾದ ರವಿ ಹೆಗಡೆ, ವಾರ್ತಾ ಇಲಾಖೆ ಆಯುಕ್ತರಾದ ಡಾ.ಹೇಮಂತ್ ಎಂ ನಿಂಬಾಳ್ಕರ್ ಉಪಸ್ಥಿತರಿದ್ದರು.

15 ಕ್ಕೂ ಹೆಚ್ಚು ಮಂದಿ ಹಿರಿಯ ಪತ್ರಕರ್ತರು ಮತ್ತು ಛಾಯಾಗ್ರಾಹಕರುಗಳನ್ನು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಸನ್ಮಾನಿಸಿದರು.

ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಸೇರಿ ಪದಾಧಿಕಾರಿಗಳು ಕಾರ್ಯಕ್ರಮ ನಡೆಸಿಕೊಟ್ಟರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X