Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿದ್ದರಾಮಯ್ಯ ಸಿಎಂ ಆದಾಗಲೆಲ್ಲಾ ಬರಗಾಲ...

ಸಿದ್ದರಾಮಯ್ಯ ಸಿಎಂ ಆದಾಗಲೆಲ್ಲಾ ಬರಗಾಲ ಬರುವುದು ಸತ್ಯ; ಈ ವಿಚಾರವನ್ನು ಜನರ ಗಮನಕ್ಕೆ ತನ್ನಿ: ಬಿಜೆಪಿ ಕಾರ್ಯಕರ್ತರಿಗೆ ಸಿ.ಟಿ.ರವಿ ಕರೆ

ವಾರ್ತಾಭಾರತಿವಾರ್ತಾಭಾರತಿ7 Sept 2023 10:15 PM IST
share
ಸಿದ್ದರಾಮಯ್ಯ ಸಿಎಂ ಆದಾಗಲೆಲ್ಲಾ ಬರಗಾಲ ಬರುವುದು ಸತ್ಯ; ಈ ವಿಚಾರವನ್ನು ಜನರ ಗಮನಕ್ಕೆ ತನ್ನಿ: ಬಿಜೆಪಿ ಕಾರ್ಯಕರ್ತರಿಗೆ ಸಿ.ಟಿ.ರವಿ ಕರೆ

ಚಿಕ್ಕಮಗಳೂರು, ಸೆ.7: ಕಾಂಗ್ರೆಸ್ ಸರಕಾರ ಬಂದ ಮೇಲೆ ರೈತ ವಿದ್ಯಾನಿಧಿ ಯೋಜನೆಯನ್ನು ರದ್ದುಪಡಿಸಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆದಾಗಲೆಲ್ಲಾ ಬರಗಾಲ ಬರುವುದು ಸತ್ಯ ಕಾರ್ಯಕರ್ತರು ಇಂತಹ ವಿಚಾರಗಳನ್ನು ಜನರ ಗಮನಕ್ಕೆ ತರಬೇಕು ಎಂದು ಮಾಜಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ.

ಗುರುವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಪ್ರವಾಸಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಶಾಸಕರು ತಂದಿದ್ದ ಅನುದಾನಕ್ಕೆ ಕ್ಷೇತ್ರದಲ್ಲಿ ಈಗ ಗುದ್ದಲಿ ಪೂಜೆ ನಡೆಯುತ್ತಿದೆ. ಹಾಲಿ ಶಾಸಕರ ಯೋಗ್ಯತೆಗೆ ಒಂದು ಪೈಸೆ ಅನುದಾನ ತರಲೂ ಆಗುತ್ತಿಲ್ಲ. ಕಾಂಗ್ರೆಸ್ ಸರಕಾರ ಬಂದು 100 ದಿನಗಳು ಕಳೆದಿವೆ. ನೂರು ದಿನ ನೂರಾರು ತಪ್ಪುಗಳು ಎನ್ನುವ ಚಾರ್ಜ್‍ಶೀಟನ್ನೂ ನಾವು ಹೊರತಂದಿದ್ದೇವೆ. ಕಾರ್ಯಕರ್ತರು ಆ ತಪ್ಪುಗಳನ್ನು ಗಮನಿಸಬೇಕು. ರೈತರಲ್ಲದವರಿಗೆ ಕೃಷಿ ಭೂಮಿ ಖರೀದಿಸುವ ಅವಕಾಶವನ್ನು ರದ್ದು ಪಡಿಸಿದ್ದಾರೆ. ಪ್ರತೀ ಗ್ರಾಮ ಪಂಚಾಯತ್‍ನಲ್ಲಿ ಯುವಕ ಸಂಘ ತೆರೆಯುವ ಯುವ ಶಕ್ತಿ ಯೋಜನೆಯನ್ನು ರದ್ದು ಪಡಿಸಿದ್ದಾರೆ. ಸ್ವಸಹಾಯ ಸಂಘಕ್ಕೆ 5 ಲಕ್ಷ ರೂ. ನೀಡುವ ಸ್ತ್ರೀ ಸಾಮಥ್ರ್ಯ ಯೋಜನೆ ರದ್ದು ಪಡಿಸಿದ್ದಾರೆ. ರೈತರಿಗೆ 10 ಸಾವಿರ ರೂ. ನೀಡುವ ಭೂ ಸಿರಿ ಯೋಜನೆ ರದ್ದು ಪಡಿಸಿದ್ದಾರೆ. ಶ್ರಮಶಕ್ತಿ ಯೋಜನೆ, ಕ್ಷೀರ ಸಮೃದ್ಧಿ ಯೋಜನೆ, ರೈತರಿಗೆ ವಾರ್ಷಿಕ 4 ಸಾವಿರ ರೂ. ನೀಡುವ ಕಿಸಾನ್ ಸಮ್ಮಾನ್ ನಿಧಿ ಯೋಜನೆಗಳನ್ನು ರದ್ದು ಪಡಿಸಿದ್ದಾರೆ. ಇದನ್ನು ಜರನ ಮಧ್ಯೆ ಕೊಂಡೊಯ್ಯಬೇಕು ಎಂದರು.

ಗರೀಬಿ ಕಲ್ಯಾಣ ಯೋಜನೆಯಲ್ಲಿ ಹಿಂದೆ ಕೇಂದ್ರ ಸರಕಾರ 5 ಕೆಜಿ ಅಕ್ಕಿ ಕೊಡುತ್ತಿತ್ತು. ಸಿದ್ದರಾಮಯ್ಯ ಸರಕಾರ 10ಕೆಜಿ ಅಕ್ಕಿ ಕೊಡುತ್ತೇವೆಂದು ಈಗ ಕೇಂದ್ರ ಕೊಡುತ್ತಿರುವುದರಲ್ಲೂ ಕಡಿತ ಮಾಡಿದ್ದಾರೆ. ಎಸ್ಸಿಪಿ, ಟಿಎಸ್‍ಪಿಯಡಿ ಎಸ್ಸಿ ಮತ್ತು ಎಸ್ಟಿ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ 11 ಕೋಟಿ ರೂ. ಅನುದಾನವನ್ನು ಗ್ಯಾರೆಂಟಿಗೆ ಬಳಸುತ್ತಿದ್ದಾರೆ. ಇದನ್ನು ಕಾಂಗ್ರೆಸ್ ಯಾವ ಎಸ್ಸಿ, ಎಸ್ಟಿ ಸಚಿವರು, ಮುಖಂಡರು ಪ್ರಶ್ನೆ ಮಾಡಲೇ ಇಲ್ಲ. ಇದರಿಂದ ಎಸ್ಸಿ, ಎಸ್ಟಿ ಸಮಾಜಕ್ಕೆ ನಷ್ಟವಾಗಿದೆ. ಸರಕಾರ ಬಂದ ಮೇಲೆ ಮದ್ಯದಿಂದ ಹಿಡಿದು ವಿದ್ಯುತ್ ಎಲ್ಲಾ ಬೆಲೆಯನ್ನೂ ಏರಿಸಿದ್ದಾರೆ. ಅಭಿವೃದ್ಧಿಗೆ ಕೊಟ್ಟ ಎಲ್ಲಾ ಅನುದಾನವನ್ನೂ ತಡೆಹಿಡಿದಿದ್ದಾರೆ. ತಮಿಳುನಾಡಿಗೆ ಕಾವೇರಿ ಬಿಟ್ಟರೂ ಅದನ್ನು ಯಾರೂ ಪ್ರಶ್ನಿಸಲೇ ಇಲ್ಲ ಎಂದ ಅವರು, ಕೇಂದ್ರ ಸರಕಾರ ಗ್ಯಾಸ್ ಬೆಲೆ ಕಡಿಮೆ ಮಾಡಿದೆ, ಇದನ್ನು ಜನರ ಗಮನಕ್ಕೆ ತರಬೇಕು ಎಂದರು.

ರೈತರು 5 ಲಕ್ಷ ರೂ.ಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. ಸಚಿವರಿಗೆ 10 ಲಕ್ಷ ಕೊಡುತ್ತೇವೆ ಎಂದರೆ ಆತ್ಮಹತ್ಯೆ ಮಾಡಿಕೊಳ್ಳುತ್ತಾರಾ ಎಂದು ಪ್ರಶ್ನಿಸಬೇಕು ಎಂದ ಅವರು, ಮುಂದಿನ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಕಾರ್ಯಕರ್ತರು ಪಕ್ಷ ಸಂಘಟನೆ ಮಾಡಬೇಕೆಂದರು.

ಬೂತ್ ಮಟ್ಟದ ಕಾರ್ಯಕರ್ತರನ್ನು ಸಕ್ರೀಯ ಹಾಗೂ ಜನಸ್ನೇಹಿಯಾಗಿ ಕೆಲಸ ಮಾಡಬೇಕು. ಕಾರ್ಯಕರ್ತ ಪಕ್ಷದ ಸಭೆಗೆ ಬರುವುದರಿಂದ ಮಾತ್ರ ಪಕ್ಷಕ್ಕೆ ಶಕ್ತಿ ಬರುವುದಿಲ್ಲ. ಆತÀ ಜನರ ನಡುವೆಯೂ ಕೆಲಸ ಮಾಡಬೇಕು. ನಾವು ಕೇವಲ ಚುನಾವಣೆ ಗೆಲ್ಲುವುದಕ್ಕೆ ಮಾತ್ರ ರಾಜಕೀಯ ಪಕ್ಷವನ್ನು ಕಟ್ಟಿಲ್ಲ. ಸಮಾಜದಲ್ಲಿ ಪರಿವರ್ತನೆ ತರಬೇಕು ಎನ್ನುವುದು ಉದ್ದೇಶದಿಂದ ಪಕ್ಷ ಕಟ್ಟಿದ್ದೇವೆ. ಜಾತಿ ಬೇಧ ಹೋಗಲಿ ಎಂದು ಬೋರ್ಡ್ ಹಾಕಿದರೆ, ಫ್ಲೆಕ್ಸ್ ಹಾಕಿದರೆ ಅದು ಹೋಗುವುದಿಲ್ಲ. ಸಂಬಂಧಗಳನ್ನು ಕಟ್ಟಿದರೆ ಮಾತ್ರ ಅದು ಸಾಧ್ಯವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ, ಜಿಲ್ಲಾ ಕಾರ್ಯದರ್ಶಿ ಬೆಳವಾಡಿ ರವೀಂದ್ರ, ಗ್ರಾಮಾಂತರ ಅಧ್ಯಕ್ಷ ಈಶ್ವರಳ್ಳಿ ಮಹೇಶ್, ಸೀತಾರಾಮ ಭರಣ್ಯ, ಕುರುವಂಗಿ ವೆಂಕಟೇಶ್, ಪಿಳ್ಳೇನಳ್ಳಿ ರಮೇಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X