Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ ಕನ್ನಡ ವಾತಾವರಣವನ್ನು...

ರಾಜ್ಯದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ : ಸಿಎಂ ಸಿದ್ದರಾಮಯ್ಯ

ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಸಿಎಂರಿಂದ ಭೂಮಿ ಪೂಜೆ

ವಾರ್ತಾಭಾರತಿವಾರ್ತಾಭಾರತಿ20 Jun 2024 2:31 PM IST
share
ರಾಜ್ಯದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ. ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ ಎಂದು ಮುಖ್ಯಮಂತ್ರಿ ಸಿದ್ದಾಮಯ್ಯ ಕರೆ ನೀಡಿದರು.

ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವ ಅಂಗವಾಗಿ ವಿಧಾನಸೌಧದ ಪಶ್ಚಿಮದ್ವಾರದ ಬಳಿ ನಾಡದೇವಿ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ನಿರ್ಮಿಸಲು ಭೂಮಿ ಪೂಜೆ ನೆರವೇರಿಸಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಮಾತೃಭಾಷೆಯಲ್ಲಿ ಮಾತನಾಡುವುದು ಹೆಮ್ಮೆಯ ಸಂಗತಿಯಾಗಬೇಕು:

ಪ್ರತಿಯೊಬ್ಬರೂ ಕೂಡ ಕರ್ನಾಟಕದಲ್ಲಿ ಬಾಳಿ ಬದುಕುವವರೊಂದಿಗೆ ಕನ್ನಡದಲ್ಲಿಯೇ ಮಾತನಾಡುತ್ತೇನೆ. ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡುವುದಿಲ್ಲ ಎಂದು ತೀರ್ಮಾನ ಮಾಡಬೇಕು. ಕನ್ನಡಿಗರು ಉದಾರಿಗಳು. ಹಾಗಾಗಿಯೇ ಬೇರೆ ಭಾಷೆ ಮಾತನಾಡುವವರೂ ಕೂಡ ಕನ್ನಡ ಕಲಿಯದೆ ಬದುಕುವ ವಾತಾವರಣ ಕರ್ನಾಟಕದಲ್ಲಿದೆ. ತಮಿಳುನಾಡು , ಆಂಧ್ರ, ಕೇರಳಕ್ಕೆ ಹೋದರೆ ಅವರ ಮಾತೃಭಾಷೆಯಲ್ಲಿಯೇ ಮಾತನಾಡುತ್ತಾರೆ. ನಾವೂ ಕೂಡ ನಮ್ಮ ಮಾತೃಭಾಷೆಯಲ್ಲಿಯೇ ವ್ಯವಹರಿಸಬೇಕು. ಅದು ನಮಗೆ ಹೆಮ್ಮೆಯ ವಿಷಯವಾಗಬೇಕು. ಅದರಲ್ಲಿ ಕೀಳರಿಮೆ ಅಗತ್ಯವಿಲ್ಲ ಎಂದರು.

ಕರ್ನಾಟಕದಲ್ಲಿ ವಾಸ ಮಾಡುವವರು ಕನ್ನಡ ಕಲಿಯಬೇಕು :

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ನಮ್ಮೆಲ್ಲರ ಕರ್ತವ್ಯ.ಅದಕ್ಕಾಗಿ ಇಲ್ಲಿ ವಾಸ ಮಾಡುವವರೆಲ್ಲರೂ ಕನ್ನಡವನ್ನು ಕಲಿಯಲೇಬೇಕು. ಹಾಗೆಂದು ನಾವು ಸುಮ್ಮನಿರುವಂತಿಲ್ಲ. ಕನ್ನಡಿಗರು ದುರಭಿಮಾನಿಗಳಲ್ಲ. ಆದರೆ ಕನ್ನಡದ ಬಗ್ಗೆ ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ಬೇರೆ ರಾಜ್ಯಗಳಲ್ಲಿ ದುರಭಿಮಾನಿಗಳಂತೆ ನಾವು ಆಗಬೇಕಿಲ್ಲ. ಆದರೆ ನಮ್ಮ ಭಾಷೆ, ನೆಲ, ನಾಡಿನ ಬಗೆ ಗೌರವ, ಅಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದರು.

ನವೆಂಬರ್ ಒಂದರೊಳಗೆ ಕಾಮಗಾರಿ ಪೂರ್ಣಗೊಳಬೇಕು :

ನವೆಂಬರ್ 01, 2024ರೊಳಗೆ ಕೆಲಸ ಪೂರ್ಣಗೊಳ್ಳಬೇಕು. ಈಗಾಗಲೇ ಕೆಲಸ ಪ್ರಾರಂಭವಾಗಿದೆ. ಹಣದ ಕೊರತೆಯೂ ಇಲ್ಲ.ಇದೊಂದು ಉತ್ತಮವಾದ ಕೆಲಸ. ವಿಧಾನ ಸೌಧದ ಆವರಣದಲ್ಲಿ ಸುಮಾರು 25 ಅಡಿ ಎತ್ತರ ಇರುವ ಕಂಚಿನ ಪ್ರತಿಮೆ ನಿರ್ಮಾಣವಾಗಲಿದೆ. ಜನರಿಗೆ ಆರ್ಕರ್ಷಣೆಯಾಗುವ ರೀತಿಯಲ್ಲಿ ಇರಬೇಕೆಂದು ಸೂಚಿಸಲಾಗಿದೆ. ಅನೇಕ ರಾಜಕಾರಣಿಗಳ ಪ್ರತಿಮೆಗಳನ್ನು ಸ್ಥಾಪಿಸಿದ್ದೇವೆ. ಪ್ರತಿಮೆ ವಿಧಾನಸೌಧದ ಆಕರ್ಷಣೆಯನ್ನು ಇಮ್ಮಡಿಗೊಳಿಸುತ್ತದೆ ಎಂದು ನಾನು ಭಾವಿಸಿದ್ದೇನೆ ಎಂದರು.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಶಾಸಕರು ಮೊದಲಾದವರು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X