Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜೈನಮುನಿ ಕಾಮಕುಮಾರ ಮಹಾರಾಜ ಹತ್ಯೆ...

ಜೈನಮುನಿ ಕಾಮಕುಮಾರ ಮಹಾರಾಜ ಹತ್ಯೆ ಪ್ರಕರಣ: ಉಭಯ ಸದನಗಳಲ್ಲಿ ಪ್ರತಿಧ್ವನಿ

ಹತ್ಯೆ ಪ್ರಕರಣದಲ್ಲಿ ರಾಜಕೀಯ ಬೇಡ ಎಂದ ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ10 July 2023 8:31 PM IST
share
ಜೈನಮುನಿ ಕಾಮಕುಮಾರ ಮಹಾರಾಜ ಹತ್ಯೆ ಪ್ರಕರಣ: ಉಭಯ ಸದನಗಳಲ್ಲಿ ಪ್ರತಿಧ್ವನಿ

ಬೆಂಗಳೂರು, ಜು.10: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣ ವಿಧಾನ ಮಂಡಲ ಉಭಯ ಸದನಗಳಲ್ಲೂ ಪ್ರತಿಧ್ವನಿಸಿತು.

ಸೋಮವಾರ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿ ಪಕ್ಷಭೇದ ಮರೆತು ಸದಸ್ಯರು ಈ ಹತ್ಯೆ ಪ್ರಕರಣವನ್ನು ಖಂಡಿಸಿದರು. ಹತ್ಯೆ ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸರಕಾರ ವಿಶ್ವಾಸಪಡಿಸಿದರೆ, ಬಿಜೆಪಿ ಸದಸ್ಯರು ಸಿಬಿಐ ತನಿಖೆಗೆ ಪಟ್ಟುಹಿಡಿದರು.

ವಿಧಾನಸಭೆಯ ಕಲಾಪ ಆರಂಭವಾಗುತ್ತಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿಲುವಳಿ ಸೂಚನೆಯಡಿ ಜೈನ ಮುನಿಯ ಹತ್ಯೆ ಪ್ರಕರಣ ಚರ್ಚೆಗೆ ಅವಕಾಶ ನೀಡುವಂತೆ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಮನವಿ ಮಾಡಿದರು. ಆಗ ಸಭಾಧ್ಯಕ್ಷರು ನಿಲುವಳಿ ಸೂಚನೆಯಡಿ ಬೇಡ, ಶೂನ್ಯವೇಳೆಯಲ್ಲಿ ವಿಷಯದ ಚರ್ಚೆಗೆ ಅವಕಾಶ ನೀಡುವುದಾಗಿ ಸೂಚಿಸಿದರು.

ಆನಂತರ, ಅದರಂತೆ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಕ್ಕೆ ಅವಕಾಶ ನೀಡಿದಾಗ ಬಿಜೆಪಿ ಸದಸ್ಯರಾದ ಅಭಯ್‍ಪಾಟೀಲ್, ಬಸನಗೌಡ ಪಾಟೀಲ್ ಯತ್ನಾಳ್, ಶಶಿಕಲಾ ಜೊಲ್ಲೆ ಸೇರಿದಂತೆ ಪ್ರಮುಖರು ಜೈನ ಮುನಿ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿದರು.

ಇದೇ ವೇಳೆ ಕಾಂಗ್ರೆಸ್ ಸದಸ್ಯ ಲಕ್ಷ್ಮಣ್ ಸವದಿ ವಿಷಯ ಪ್ರಸ್ತಾಪಿಸಿ, ‘ಈ ಹತ್ಯೆ ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ನಡೆದು ತಪ್ಪಿತಸ್ಥರಿಗೆ ಮರಣ ದಂಡನೆ ಶಿಕ್ಷೆಯಾಗಬೇಕು. ನಂದಿ ಮಹಾರಾಜರು ನನ್ನ ಸ್ವಗ್ರಾಮದ ಪಕ್ಕದ ಕೋಟಕಪ್ಪ ಗ್ರಾಮದವರು. 1964ರಲ್ಲಿ ಜನಿಸಿದ ಅವರು ಹೊಸದಿಲ್ಲಿಯ ಅಶ್ರಮವೊಂದರಲ್ಲಿ 15 ವರ್ಷಗಳ ಕಾಲ ನೆಲೆಸಿ ದೇಶಕ್ಕೆ ಶಾಂತಿ, ಅಹಿಂಸೆಯ ಸಂದೇಶ ಸಾರಿದರು. ಬಹುದೊಡ್ಡ ಜಮೀನ್ದಾರ ಹೂಗಾರ ಮನೆತನಕ್ಕೆ ಸೇರಿದ ಅವರು ಮುನಿಗಳಾಗುವ ಕಠೋರ ವ್ರತ ಮಾಡಿದ್ದಾರೆ ಎಂದರು.

ಮಹಾರಾಜರ ಹತ್ಯೆ ನಡೆದಿರುವುದು ಆಘಾತ ತಂದಿದೆ. ಈ ಬಗ್ಗೆ ನಿಷ್ಪಕ್ಷಪಾತವಾದ ತನಿಖೆಯಾಗಬೇಕು. ಗೃಹ ಸಚಿವರು ಹಿರಿಯ ಪೊಲೀಸ್ ಅಧಿಕಾರಿಗಳು ಈಗಾಗಲೇ ಘಟನಾ ಸ್ಥಳಕ್ಕೆ ತೆರಳಿದ್ದಾರೆ ಎಂದರು.

ಈ ಹಂತದಲ್ಲಿ ಮಧ್ಯೆ ಪ್ರವೇಶಿಸಿದ ಬಿಜೆಪಿಯ ಅಭಯ್ ಪಾಟೀಲ್, ‘ರೊಕ್ಕದ ವಿಚಾರಕ್ಕೆ ಸಂಬಂಧಿಸಿದಂತೆ ಹತ್ಯೆ ನಡೆದಿದೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಈ ಬಗ್ಗೆ ಬೆಳಕು ಚೆಲ್ಲಿ ಎಂದು ಸವದಿ ಅವರನ್ನು ಉಲ್ಲೇಖಿಸಿ ಹೇಳಿದರು. ಆಗ ಲಕ್ಷ್ಮಣ್ ಸವದಿ ಪತ್ರಿಕೆಗಳಲ್ಲಿ ಬಂದಿದ್ದೆಲ್ಲ ಬ್ರಹ್ಮಲಿಪಿ ಎಂದು ನಾನು ಹೇಳಲ್ಲ. ಕೆಲವರು ತಮ್ಮದೇ ಆದ ವರದಿಗಳನ್ನು ಬರೆದಿದ್ದಾರೆ. ತನಿಖೆಯಾಗಲಿ ಎಂದು ಒತ್ತಾಯಿಸಿದರು.

ನಂತರ ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಜೈನ ಮುನಿಗಳ ಹತ್ಯೆಯಾಗಿ ಮೂರು ದಿನ ಕಳೆದರೂ ಮುಖ್ಯಮಂತ್ರಿ ಸಂತಾಪ ಸೂಚಿಸಿಲ್ಲ. ಬೇರೆ ಕೋಮಿನವರು ಆಗಿದ್ದರೆ ಸುಮ್ಮನೆ ಇರುತ್ತಿದ್ದರೆ?.ಇಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲವೇ ಎಂದು ಪ್ರಶ್ನಿಸಿದರು.

ಈ ಹಂತದಲ್ಲಿ ಮಧ್ಯೆ ಪ್ರವೇಶಿಸಿ ಸ್ಪೀಕರ್ ಯು.ಟಿ.ಖಾದರ್ ಅವರು, ಜೈನ ಮುನಿಗಳ ಹತ್ಯೆಯು ಭಯಾನಕವಾಗಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಇದರಲ್ಲಿ ರಾಜಕೀಯ ಮಾಡಬಾರದು ಎಂದು ಸಲಹೆ ನೀಡಿದರು.

ಬಿಜೆಪಿಯ ಸುನೀಲ್‍ಕುಮಾರ್ ಮಾತನಾಡಿ, ಈ ಭಯಾನಕ ಕೃತ್ಯದಿಂದ ರಾಜ್ಯದ ಜನತೆ ಆಘಾತಕ್ಕೆ ಒಳಗಾಗಿದ್ದಾರೆ. ಪ್ರಕರಣದಲ್ಲಿ ಮೊದಲ ಆರೋಪಿಯನ್ನು ಬಹಿರಂಗ ಪಡಿಸಿ, ಉಳಿದ ಆರೋಪಿಗಳ ಹೆಸರನ್ನು ಬಹಿರಂಗ ಮಾಡುತ್ತಿಲ್ಲ. ಯಾವ ಕಾರಣಕ್ಕೆ ಇತರ ಆರೋಪಿಗಳನ್ನು ರಕ್ಷಿಸಲಾಗುತ್ತಿದೆ ಎಂದು ಪ್ರಶ್ನಿಸಿದರು.

ಇದೇ ವೇಳೆ ಪ್ರತಿಕ್ರಿಯೆ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಜೈನಮುನಿ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಡಿವೈಎಸ್ಪಿ ಅಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು..

ಭಯೋತ್ಪದಕರ ಕೈವಾಡ: ‘ಜೈನಮುನಿಗಳ ಹತ್ಯೆ ಹಿಂದೆ ಉಗ್ರಗಾಮಿಗಳ ಕೈವಾಡ ಇದೆ. ಚಿತ್ರಹಿಂಸೆ ಮಾಡಿ ಕರೆಂಟ್ ಶಾಕ್ ಕೊಟ್ಟು ಕೊಂದಿದ್ದಾರೆ. ಈ ಹತ್ಯೆ ಹಿಂದೆ ಉಗ್ರಗಾಮಿಗಳ ಚಿತಾವಣೆ ಇದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು. ಇದರ ಹಿಂದಿನ ಪಿತೂರಿ ಹೊರಬರಬೇಕು ಎಂದು ಬಿಜೆಪಿ ಸದಸ್ಯ ಸಿದ್ದು ಸವದಿ ಹೇಳಿದರು.

ಹತ್ಯೆ ಪ್ರಕರಣದಲ್ಲಿ ರಾಜಕೀಯ ಬೇಡ:

‘ಜೈನ ಮುನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ರಾಜಕೀಯ ಬೆಳೆ ಬೇಯಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ.ಬಿಜೆಪಿ ಶಾಸಕ ಸಿದ್ದು ಸವದಿ ಜೈನಮುನಿ ಅವರ ಹತ್ಯೆಯನ್ನು ಐಸಿಸ್ ಉಗ್ರಗಾಮಿಗಳು ಮಾಡಿದ್ದಾರೆಂದು ಹೇಳಿದ್ದಾರೆ. ಇದನ್ನು ಬಹಿರಂಗವಾಗಿ ಹೇಳುವ ಬದಲು ಅವರ ಬಳಿ ಮಾಹಿತಿ ಇದ್ದರೆ ಪೆÇಲೀಸರಿಗೆ ನೀಡಲಿ. ರಾಜಕೀಯ ಕಾರಣಕ್ಕಾಗಿ ಏನೆನೋ ಮಾತನಾಡುವುದು ಸರಿಯಲ್ಲ’

-ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X