Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಖ್ಯಮಂತ್ರಿಗಳು ವಿಷಯಾಂತರ...

ಮುಖ್ಯಮಂತ್ರಿಗಳು ವಿಷಯಾಂತರ ಮಾಡುತ್ತಿರುವುದು ಸರಿಯಲ್ಲ, ಸಿಬಿಐಗೆ ಕೊಡಲು ಹಿಂದೇಟೇಕೆ? : ಜನಾರ್ಧನ ರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ19 Jan 2026 12:37 PM IST
share
ಮುಖ್ಯಮಂತ್ರಿಗಳು ವಿಷಯಾಂತರ ಮಾಡುತ್ತಿರುವುದು ಸರಿಯಲ್ಲ, ಸಿಬಿಐಗೆ ಕೊಡಲು ಹಿಂದೇಟೇಕೆ? : ಜನಾರ್ಧನ ರೆಡ್ಡಿ

ಬೆಂಗಳೂರು : ಸಿದ್ದರಾಮಯ್ಯನವರು ಪ್ರಾಮಾಣಿಕರೆಂದು ಬಿಂಬಿಸಲು, ಈ ರಾಜ್ಯದ ಸಿಎಂ ಆಗಿ ಕಾನೂನು ರಕ್ಷಿಸಲು ನಾನು ನಿಜವಾಗಿಯೂ ಕಂಕಣಬದ್ಧವಾಗಿ ಇದ್ದೇನೆ ಎಂದು ತೋರಿಸಲು 7 ಪ್ರಕರಣಗಳನ್ನು ಸಿಬಿಐಗೆ ಕೊಟ್ಟವರು. ಅಂಥ ಮಹಾನುಭಾವ, ಬಳ್ಳಾರಿಯ ಪ್ರಕರಣವನ್ನು ಸಿಬಿಐಗೆ ಕೊಡಲು ಯಾಕೆ ಹಿಂದೇಟು ಹಾಕುತ್ತಾರೆ ಎಂದು ಶಾಸಕ ಜನಾರ್ಧನ ರೆಡ್ಡಿ ಪ್ರಶ್ನಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ರಾಜ್ಯದ ಮುಖ್ಯಮಂತ್ರಿಯಾಗಿ ನಾನು ಇರುವ ಸಂದರ್ಭದಲ್ಲಿ ಸುಮಾರು 7 ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೇನೆ. ಬಿಜೆಪಿಯವರು ಒಂದು ಕೇಸನ್ನಾದರೂ ಸಿಬಿಐಗೆ ಕೊಟ್ಟಿದ್ದಾರಾ ಎಂದು ಮುಖ್ಯಮಂತ್ರಿಗಳು ಕೇಳಿದ್ದಾರೆ. ಯಡಿಯೂರಪ್ಪ ಅವರ ಸರಕಾರದ ಅವಧಿಯಲ್ಲಿ ಎಷ್ಟು ಸಿಬಿಐಗೆ ಕೊಟ್ಟಿದ್ದಾರೆ, ಸಿದ್ದರಾಮಯ್ಯರ ಅವಧಿಯಲ್ಲಿ ಎಷ್ಟು ಸಿಬಿಐಗೆ ವಹಿಸಿದ್ದಾರೆ ಎಂಬ ಪ್ರಶ್ನೆ ಮುಖ್ಯವಲ್ಲ ಎಂದು ನುಡಿದರು.

ನಿಮ್ಮ ಶಾಸಕನೇ ಕೊಲೆ ಮಾಡಿಸಿದ್ದೆಂದು ನಿಮಗೆ ಈಗಾಗಲೇ ಗೊತ್ತಾಗಿದೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಈಗಾಗಲೇ ಮುಜುಗರ ಆಗಿದೆ. ಕೇವಲ ಮೂವರು ಖಾಸಗಿ ಗನ್‍ಮೆನ್‍ಗಳನ್ನು ಬಂಧಿಸಿ, ಸಿಐಡಿಗೆ ಕೊಡುವ ಮೂಲಕ ಇದನ್ನು ಜನರು ಮರೆಯುವಂತೆ ಮಾಡಬೇಕು. ಶಾಸಕರ ಬಂಧನ ಮಾಡಬಾರದೆಂಬ ನಿಮ್ಮ ಕೆಟ್ಟ ಯೋಚನೆ ಇದರಿಂದ ಬಹಿರಂಗ ಆಗುತ್ತಿದೆ ಎಂದು ಆರೋಪಿಸಿದರು. 7 ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೇನೆ ಎಂದು ಎದೆ ತಟ್ಟಿಕೊಳ್ಳುವ ಸಿದ್ದರಾಮಯ್ಯನವರು, ಈ ಪ್ರಕರಣವನ್ನೂ ಸಿಬಿಐಗೆ ಕೊಡಲು ಯಾಕೆ ಹಿಂದೇಟು ಹಾಕುತ್ತಿದ್ದಾರೆಂದು ರಾಜ್ಯದ ಜನರಿಗೆ ತಿಳಿಸಬೇಕಾಗಿದೆ. ಅದನ್ನು ಬಿಟ್ಟು ವಿಷಯಾಂತರ ಮಾಡುತ್ತಿರುವುದು ಸರಿಯಲ್ಲ ಎಂದು ತಿಳಿಸಿದರು.

ವಾಲ್ಮೀಕಿ ನಿಗಮದ ಹಗರಣದಲ್ಲಿ ಶಿವಮೊಗ್ಗದಲ್ಲಿ ಒಬ್ಬ ಅಮಾಯಕ ಪ್ರಾಣ ಕಳೆದುಕೊಂಡ. ಅದೇ ವಾಲ್ಮೀಕಿ ಬ್ಯಾನರ್ ಹೆಸರಿನಲ್ಲಿ ಜನಾರ್ಧನ ರೆಡ್ಡಿ ಕೊಲೆ ಪ್ರಯತ್ನ ಮಾಡುತ್ತೀರಿ. ಬ್ಯಾನರ್ ಹೆಸರಿನಲ್ಲಿ ರಾತ್ರಿ 9 ಗಂಟೆಗೆ ಒಬ್ಬ ಶಾಸಕ ಐದಾರು ಸಾವಿರ ಜನರನ್ನು ಕರೆದುಕೊಂಡು ಬಂದು ಮನೆ ಮೇಲೆ ಫೈರಿಂಗ್ ಮಾಡಿ, ಪೆಟ್ರೋಲ್ ಬಾಂಬ್‍ಗಳನ್ನು ಎಸೆದಿದ್ದಾರೆ. ಅವರ ಕಾರ್ಯಕರ್ತನನ್ನೇ ಅವರ ಖಾಸಗಿ ಗನ್‍ಮೆನ್‍ಗಳು ಸಾಯಿಸಿದ್ದಾರೆ. ಅದನ್ನು ನಮ್ಮ ಮೇಲೆ ಹಾಕಿ ರಾಜ್ಯದಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನ ನಡೆದಿದೆ. ವಾಲ್ಮೀಕಿ ಹೆಸರಿನಲ್ಲಿ ಇನ್ನೆಷ್ಟು ಅಮಾಯಕರ ಪ್ರಾಣ ತೆಗೆದುಕೊಳ್ಳಲು ಪ್ರಯತ್ನ ಮಾಡುತ್ತೀರಿ? ಅನ್ನುವ ವಿಚಾರದಲ್ಲಿ ಶ್ರೀರಾಮುಲು ಅವರು ಆ ಜನಾಂಗದ ಒಬ್ಬ ದೊಡ್ಡ ನಾಯಕನಾಗಿ ಬಳ್ಳಾರಿಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡುವ ಬಯಕೆ ಅವರಲ್ಲಿದೆ ಎಂದು ಸ್ಪಷ್ಟಪಡಿಸಿದರು.


Tags

Janardhana Reddy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X