Japan | ಟೊಯೋಟಾ ಕಂಪನಿಯ ಕೇಂದ್ರ ಕಚೇರಿಗೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ
ಹೂಡಿಕೆ, ಉದ್ಯೋಗ ಸೃಷ್ಟಿ ಕುರಿತು ಚರ್ಚೆ ನಿರೀಕ್ಷೆ

Photo credit : X@DKShivakumar
ಬೆಂಗಳೂರು : ರಾಜ್ಯಕ್ಕೆ ಹೆಚ್ಚಿನ ಹೂಡಿಕೆ ಆಕರ್ಷಿಸುವ ಉದ್ದೇಶದಿಂದ ಜಪಾನ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಬುಲೆಟ್ ರೈಲಿನಲ್ಲಿ ಟೋಕಿಯೋದಿಂದ ನಗೋಯಾ ನಗರಕ್ಕೆ ಪ್ರಯಾಣಿಸಿದರು.
ಈ ಸಂದರ್ಭದಲ್ಲಿ ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ರಾಜ್ಯದ ಉನ್ನತ ಮಟ್ಟದ ನಿಯೋಗ ಮುಖ್ಯಮಂತ್ರಿಯವರೊಂದಿಗೆ ಉಪಸ್ಥಿತರಿದ್ದರು.
ನಗೋಯಾ ತಲುಪಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ಜಾಗತಿಕ ವಾಹನ ತಯಾರಿಕಾ ಸಂಸ್ಥೆಯಾದ ಟೊಯೋಟಾ ಕಂಪನಿಯ ಕೇಂದ್ರ ಕಚೇರಿಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ವೇಳೆ ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ, ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಸಂಬಂಧಿಸಿದ ಅವಕಾಶಗಳ ಕುರಿತು ಚರ್ಚೆ ನಡೆಸುವ ನಿರೀಕ್ಷೆಯಿದೆ.
ಮುಖ್ಯಮಂತ್ರಿಯವರ ಈ ಜಪಾನ್ ಪ್ರವಾಸವು ಕರ್ನಾಟಕ ಮತ್ತು ಜಪಾನ್ ನಡುವಿನ ಆರ್ಥಿಕ ಹಾಗೂ ತಾಂತ್ರಿಕ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಜೊತೆಗೆ ರಾಜ್ಯಕ್ಕೆ ಹೊಸ ಹೂಡಿಕೆಗಳನ್ನು ಆಕರ್ಷಿಸುವ ನಿರೀಕ್ಷೆ ಮೂಡಿಸಿದೆ.




