Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜೆಡಿಎಸ್-ಬಿಜೆಪಿ ಮೈತ್ರಿ | ದಸರಾ ನಂತರ...

ಜೆಡಿಎಸ್-ಬಿಜೆಪಿ ಮೈತ್ರಿ | ದಸರಾ ನಂತರ ಕ್ಷೇತ್ರ ಹಂಚಿಕೆ ಬಗ್ಗೆ ನಿರ್ಧಾರ: ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ22 Sept 2023 8:44 PM IST
share
ಜೆಡಿಎಸ್-ಬಿಜೆಪಿ ಮೈತ್ರಿ | ದಸರಾ ನಂತರ ಕ್ಷೇತ್ರ ಹಂಚಿಕೆ ಬಗ್ಗೆ ನಿರ್ಧಾರ: ಎಚ್.ಡಿ.ಕುಮಾರಸ್ವಾಮಿ

ಹೊಸದಿಲ್ಲಿ, ಸೆ. 22: ‘ಒಳ್ಳೆಯ ದಿನ, ಒಳ್ಳೆಯ ಸಮಯ ನೋಡಿಕೊಂಡು ಯಾರಿಗೆಷ್ಟು ಕ್ಷೇತ್ರಗಳು ಎಂಬುದನ್ನು ದಸರಾ ನಂತರ ನಿರ್ಧಾರ ಮಾಡುತ್ತೇವೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಶುಕ್ರವಾರ ಹೊಸದಿಲ್ಲಿಯ ಅಮಿತ್ ಶಾ ನಿವಾಸದಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟ ಸೇರ್ಪಡೆ ಆಗುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ ಜತೆ ನಿರ್ಣಾಯಕ ಮಾತುಕತೆ ನಡೆಸಿದ ನಂತರ ಅವರು ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಹೊಸ ರಾಜಕೀಯ ಶಖೆ ಆರಂಭಕ್ಕೆ ನಾಂದಿ ಹಾಡುವ ನಿಟ್ಟಿನಲ್ಲಿ, ಜೆಡಿಎಸ್ ಪಕ್ಷವು ಎನ್‍ಡಿಎ ಮೈತ್ರಿಕೂಟಕ್ಕೆ ಸೇರ್ಪಡೆ ಆಗುವ ಬಗ್ಗೆ ಸಮಾಲೋಚನೆ ನಡೆಸಲಾಯಿತು ಎಂದರು.

‘ಮೈತ್ರಿ ಬಗ್ಗೆ ನಡೆದ ಮಾತುಕತೆ ನನಗೆ ಬಹಳ ಸಂತಸವಾಗಿದೆ. ಮುಂದೆ ಎಲ್ಲವೂ ಸುಗಮವಾಗಿ ನಡೆಯುತ್ತದೆ. ಯಾರು ಯಾರಿಗೆ ಎಷ್ಟು ಸೀಟು ಹಂಚಿಕೆ ಆಗುತ್ತದೆ ಎನ್ನುವುದು ಮುಖ್ಯವಲ್ಲ ಎಂದು ಅನೇಕ ಬಾರಿ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ರಾಜ್ಯದ 28 ಕ್ಷೇತ್ರಗಳಿಗೆ 28 ಅನ್ನು ಗೆಲ್ಲುವ ಬಗ್ಗೆ ಚರ್ಚೆ ನಡೆಸಲಾಯಿತು. ಈ ವಿಷಯವನ್ನು ನಾನು ಬಿಜೆಪಿ ವರಿಷ್ಠರಿಗೆ ಒತ್ತಿ ಹೇಳಿದ್ದೇನೆ. ನನ್ನ ಮಾತಿಗೆ ಅವರೂ ಸಮಹಮತ ವ್ಯಕ್ತಪಡಿಸಿದರು’ ಎಂದು ಅವರು ತಿಳಿಸಿದರು.

‘ಬಿಜೆಪಿ ಸ್ಥಳೀಯ ನಾಯಕರನ್ನು ದಿಲ್ಲಿಗೆ ಕರೆಸಿ ಮಾತುಕತೆ ನಡೆಸುವುದು, ನಂತರ ಎರಡೂ ಪಕ್ಷಗಳ ಹಿರಿಯರನ್ನು ಕರೆದು ಪರಸ್ಪರ ಸಮನ್ವಯತೆ ಮಾತುಕತೆ ನಡೆಸುವ ಹಾಗೂ ದಸರಾ ಹಬ್ಬದ ನಂತರ ಎಲ್ಲಾ ನಿರ್ಧಾರಗಳನ್ನು ಕೈಗೊಳ್ಳುವ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯಿತು. ಅಲ್ಲದೆ, ಈ ಮೈತ್ರಿ ದೀರ್ಘಕಾಲೀನವಾಗಿರಬೇಕು, ಇದರಲ್ಲಿ ರಾಜ್ಯದ ಹಿತ ಅಡಗಿರಬೇಕು ಎಂಬ ಬಗ್ಗೆ ಸಮಾಲೋಚನೆ ನಡೆಸಲಾಯಿತು ಎಂದು ಅವರು ಮಾಹಿತಿ ನೀಡಿದರು.

‘ಬರೀ ಮೈತ್ರಿಯ ಬಗ್ಗೆಯಷ್ಟೇ ಕೇಳಬೇಡಿ. ಕಾವೇರಿ ವಿಷಯದ ಬಗ್ಗೆಯೂ ಕೇಳಿ. ನಾನಿಲ್ಲಿ ರಾಜ್ಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಮಾತುಕತೆ ನಡೆಸಲು ಬಂದಿದ್ದೇನೆ. ಕಾವೇರಿ, ಬರ ಸೇರಿದಂತೆ ರಾಜ್ಯದ ಮುಂದಿರುವ ಸಮಸ್ಯೆಗಳ ಬಗ್ಗೆ ಬಿಜೆಪಿ ವರಿಷ್ಠರ ಗಮನ ಸೆಳೆದಿದ್ದೇನೆ ಎಂದ ಅವರು, ಈ ಮೈತ್ರಿಯಿಂದ ಕಾವೇರಿ ನೀರು ಸೇರಿದಂತೆ ನಮ್ಮ ರಾಜ್ಯಕ್ಕೆ ಆಗಿರುವ ಸಮಸ್ಯೆಗಳಿಗೆ ಉತ್ತಮ ಪರಿಹಾರ ಸಿಗುತ್ತದೆ. ಈ ಅಂಶವನ್ನು ಇಟ್ಟುಕೊಂಡೇ ನಾನು ಅಮಿತ್ ಶಾ ಮತ್ತು ನಡ್ಡಾ ಅವರೊಂದಿಗೆ ಮುಕ್ತವಾಗಿ ಚರ್ಚಿಸಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಮಾತುಕತೆ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಮಾಜಿ ಸಂಸದ ಕುಪೇಂದ್ರ ರೆಡ್ಡಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X